Hijab Karnataka Breaking ಹಿಜಾಬ್ ವಿವಾದ, ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಜತೆಗೊಂದು ಕಿವಿಮಾತು

Published : Feb 11, 2022, 11:39 AM ISTUpdated : Feb 11, 2022, 03:30 PM IST
Hijab Karnataka Breaking ಹಿಜಾಬ್ ವಿವಾದ, ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ, ಜತೆಗೊಂದು ಕಿವಿಮಾತು

ಸಾರಾಂಶ

* ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ * ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ  * ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ವಿರುದ್ಧ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ

ಬೆಂಗಳೂರು, (ಫೆ.11): ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ  (Hijab Row) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಅರ್ಜಿಸಲ್ಲಿಸಲಾಗಿದೆ. ಆದ್ರೆ,  ಈ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್(Supreme Court) ನ್ಯಾಯಪೀಠವು ನಿರಾಕರಿಸಿದೆ.  ಈ ಮೂಲಕ ಹಿಜಾಬ್ ಪರ ವಕೀಲರಿಗೆ ಹಿನ್ನಡೆಯಾದಂತಾಗಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಅಲ್ಲಿ ಇತ್ಯಾರ್ಥವಾಗುವವರೆಗೆ ವಿಚಾರಣೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೇ ವಿಷಯ ಇನ್ನಷ್ಟು ದೊಡ್ಡದು ಮಾಡದಂತೆ ಸುಪ್ರೀಂ ನ್ಯಾಯಮೂರ್ತಿ ಎನ್.ವಿ. ರಮಣನ್  ಕಿವಿಮಾತು ಹೇಳಿದ್ದಾರೆ.

Hijab Karnataka Breaking ಹಿಜಾಬ್-ಕೇಸರಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್ 

ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರು, “ಈ ವಿಷಯವನ್ನು ದೊಡ್ಡ ಮಟ್ಟದಲ್ಲಿ ಹರಡಲು ಬಯಸುವುದಿಲ್ಲ ಎಂದಿದ್ದಾರೆ.

"

“ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ. ಈ ವಿಷಯಗಳನ್ನು ದೆಹಲಿಗೆ ತರುವುದು ಸರಿಯೇ, ರಾಷ್ಟ್ರೀಯ ಮಟ್ಟದ ಸಮಸ್ಯೆಯೇ, ಎಲ್ಲದಕ್ಕೂ ನೀವು ಯೋಚಿಸಬೇಕು ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ ಹೇಳಿದ್ದೇನು?
ಅಂತಿಮ ಆದೇಶ ನೀಡುವವರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್‌ ತ್ರಿಸದಸ್ಯ ಪೀಠ ನಿನ್ನೆ(ಗುರುವಾರ) ಮಧ್ಯಂತರ ಆದೇಶ ನೀಡಿತ್ತು. ಈ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಿಶೇಷ  ಅರ್ಜಿ ಸಲ್ಲಿಸಲಾಗಿದೆ.

ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆಯೂ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿತ್ತು. ಆದ್ರೆ ಸುಪ್ರೀಂ ಕೋರ್ಟ್ ನ್ಯಾಯ ಪೀಠವು ತುರ್ತು ಅರ್ಜಿಯ ವಿಚಾರಣೆಗೆ ನಿರಾಕರಿಸಿದೆ.

ಸಂವಿಧಾನದ 25ನೇ ವಿಧಿಯಡಿ ನೀಡಿರುವ ಹಕ್ಕು ಸಿಗಲ್ಲ ಎಂದು ಹಿಜಾಬ್ ಅರ್ಜಿದಾರರ ಪರ ವಕೀಲ ದೇವದತ್ತ ಕಾಮತ್ ವಾದ ಮಂಡಿಸಿದ್ದಾರೆ. ಯಾವುದಾದರೂ ಪರೀಕ್ಷೆಗೆ ತೊಂದರೆ ಆಗುವುದಾದರೆ, ಸೂಕ್ತ ಸಂದರ್ಭದಲ್ಲಿ ವಿಚಾರಣೆ ನಡೆಸುತ್ತೇವೆ ಎಂದು ಸಿಜೆಐ ಹೇಳಿದೆ.  ಇದನ್ನ ದೊಡ್ಡ ವಿಷಯ ಮಾಡದಂತೆ ‘ಸುಪ್ರೀಂ’ ಗೆ ಕಿವಿಮಾತು ಹೇಳಲಾಗಿದ್ದು, ನೀವೂ ಕೂಡ ಆಲೋಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.

ನಿನ್ನೆ (ಫೆ.10) ಹೈಕೋರ್ಟ್ ಮೌಖಿಕ ಮಧ್ಯಂತರ ಆದೇಶ ನೀಡಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಯಾವುದೇ ಧಾರ್ಮಿಕ ಡ್ರೆಸ್ ಧರಿಸದಂತೆ ಸೂಚನೆ ನೀಡಿದೆ.  ಇದು ಧಾರ್ಮಿಕ ನಂಬಿಕೆಗೆ ಸಂಬಂಧಿಸಿದಂತೆ ದೂರಗಾಮಿ ಪರಿಣಾಮ ಬೀರಬಹುದು. ಸಂವಿಧಾನದ 25 ನೇ ವಿಧಿಯಡಿ ನೀಡಿರುವ ಹಕ್ಕು ಸಿಗಲ್ಲ ಎಂದು ದೇವದತ್ತ ಕಾಮತ್ ವಾದ ಮಂಡಿಸಿದ್ದಾರೆ.

ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್(Hijab) ವರ್ಸಸ್ ಕೇಸರಿ ಶಾಲು(Kesari Shawl) ಕಿಡಿ, ಈಗ ದೇಶವ್ಯಾಪಿ ವ್ಯಾಪಿಸಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಂಘರ್ಷಗಳು ಉಂಟಾಗಿವೆ. ಈ ಹಿನ್ನೆಲೆಲ್ಲಿ ತಾತ್ಕಾಲಿಕವಾಗಿ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ