ಅನ್‌ಲಾಕ್ 5: ಹಂತ-ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

By Suvarna News  |  First Published Sep 30, 2020, 10:47 PM IST

ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದ್ದು, ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 


ಬೆಂಗಳೂರು, (ಸೆ.30): ಆರ್ಥಿಕತೆ ದೃಷ್ಟಿಯಿಂದ ಹೆಚ್ಚಿನ ಚಟುವಟಿಕೆಗಳು ಪ್ರಾರಂಭವಾಗುವುದು ಅನಿವಾರ್ಯ ಎಂದು ಹೇಳಿರುವ ಕೇಂದ್ರ ಸರ್ಕಾರ ಅನ್​ಲಾಕ್​-5ನೇ ಹಂತದಲ್ಲಿ , ಬಹುಜನರ ನಿರೀಕ್ಷೆಯಂತೆ ಸಿನಿಮಾ ಥಿಯೇಟರ್​ಗಳು, ಮಲ್ಟಿಪ್ಲೆಕ್ಸ್​ಗಳನ್ನು ತೆರೆಯಲು ಅನುಮತಿ ನೀಡಿದೆ.

ಹಾಗೇ ಶಾಲೆಗಳು, ಕಾಲೇಜು, ಶೈಕ್ಷಣಿಕ, ಕೋಚಿಂಗ್​ ಸಂಸ್ಥೆಗಳನ್ನು ಪ್ರಾರಂಭಿಸುವ ಬಗ್ಗೆಯೂ ಅನ್​ಲಾಕ್​-5ರಲ್ಲಿ ಉಲ್ಲೇಖಿಸಲಾಗಿದ್ದು, ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ, ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದರ ನಿರ್ಣಯ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. 

Tap to resize

Latest Videos

ಶಾಲಾ-ಕಾಲೇಜು ವಿದ್ಯಾರ್ಥಿಗಳ ಗಮನಕ್ಕೆ: ಮಹತ್ವದ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

 ಪೋಷಕರ ಜೊತೆ ಸಭೆ ನಡೆಸಿ ಶಾಲಾ ಕಾಲೇಜು ಆರಂಭದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿಸಲಾಗಿದ್ದು, ಶಾಲಾ ಕಾಲೇಜು ಆರಂಭದ ಬಗ್ಗೆ ಆಯಾ ರಾಜ್ಯವೇ ನಿರ್ಧಾರ ತೆಗೆದುಕೊಳ್ಳಬೇಕು, ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿ ತಿಳಿಸಿದೆ.

ಆಯಾ ಸರ್ಕಾರಗಳ ಶಿಕ್ಷಣ ಇಲಾಖೆಗಳು ಸೂಕ್ತ ಎಸ್​ಒಪಿ ತಯಾರಿಸಿ, ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ-ಕಾಲೇಜುಗಳ ಪ್ರಾರಂಭ ಮಾಡಬಹುದು ಎಂದು ಹೇಳಲಾಗಿದೆ.

ಆದ್ರೆ, ನಮ್ಮ ರಾಜ್ಯ ಸರ್ಕಾರ ಅಕ್ಟೋಬರ್‌ 15 ರ ವರೆಗೂ ಯಾವುದೇ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಎಂಟ್ರಿ ಇಲ್ಲ ಎಂದು ಆದೇಶ ಹೊರಡಿಸಿದೆ.

click me!