* ರಾಜ್ಯದಲ್ಲಿ ಖಾಸಗಿ ಶಾಲೆಗಳ ಶುಲ್ಕ ಹಗ್ಗಜಗ್ಗಾಟ
* ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ಆದೇಶ ಕಾಯ್ದಿರಿಸಿದ ಕೋರ್ಟ್
* ಸಮಿತಿ ರಚನೆ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ
ಬೆಂಗಳೂರು, (ಜೂನ್.29): ಖಾಸಗಿ ಶಾಲೆ ಶುಲ್ಕ ಖಡಿತ ವಿಚಾರಕ್ಕೆ ಸಮಿತಿ ರಚನೆ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 22ಕ್ಕೆ ಮುಂದೂಡಿದೆ.
ಶಾಲಾ ಆಡಳಿತ ಮಂಡಳಿಗಳು ಪ್ರಸ್ತಾಪಿಸಿರುವ ಶಾಲಾ ಶುಲ್ಕವನ್ನು ನಿರ್ಧರಿಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲು ಅನುಮತಿ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಮಂಗಳವಾರ) ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು.
ಶಾಲೆ ಶುಲ್ಕ ಗೊಂದಲಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆದ ಅರ್ಚಿ ವಿಚಾರಣೆಯಲ್ಲಿ ಸರ್ಕಾರದ ಪರ ಅಡ್ವೊಕೆಟ್ ಜನರಲ್ ಎಜಿ ಫ್ರಭುಲಿಂಗ ನಾವದಗಿ ಅವರು ಸುದೀರ್ಘವಾಗಿ ವಾದ ಮಂಡಿಸಿದರು.
ಸರ್ಕಾರದ ಪರ ಅಡ್ವೊಕೆಟ್ ಜನರಲ್ ವಾದ
ಸಂಕಷ್ಟದ ಸಮಯದ ಸಮಯದಲ್ಲಿ ಮಕ್ಕಳು ಹಾಗೂ ಪೋಷಕ ಹಿತ ಕಾಪಾಡಬೇಕಿದೆ. ಇದು ಸರ್ಕಾರ ಹಾಗೂ ಖಾಸಗಿ ಶಾಲೆಗಳ ನಡುವಿನ ಜಗಳ ಅಲ್ಲ. ಪೋಷಕರ ಹಿತ ಪ್ರಮುಖವಾಗಿದೆ. ಹೀಗಾಗಿ ಶುಲ್ಕ ನಿಗದಿಗೆ ಹೈಕೋರ್ಟ್ ನಿವೃತ್ತ ನ್ಯಾಯಾಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಲು ಚಿಂತಿಸಲಾಗಿದೆ. ಸಮಿತಿಯಲ್ಲಿ ಖಾಸಗಿ ಶಾಲೆ ಹಾಗೂ ಪೋಷಕ ಪ್ರತಿನಿಧಿಗಳು ಇರಲಿದ್ದಾರೆ. ಈ ಸಮಿತಿ ನಿಗಧಿತ ಸಂಕಷ್ಟದ ಸಮಯಕ್ಕೆ ಮಾತ್ರ ಎಂದು ಕೋರ್ಟ್‌ಗೆ ತಿಳಿಸಿದರು.
ಕೋವಿಡ್ 19 ನಿಂದಾಗಿ ಪೋಷಕರೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ಎರಡೂ ಕಡೆಯ ಮನವಿ ಆಲಿಸಲಿದೆ. ಸಮಿತಿ ನೀಡುವ ಶಿಫಾರಸು ಹೈಕೋರ್ಟ್ ಮುಂದಿಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಖಾಸಗಿ ಶಾಲೆಗಳೂ ಸ್ಪಂದಿಸಬೇಕು ಎಂದು ಸರ್ಕಾರದ ಪರ ಅಡ್ವೊಕೆಟ್ ಜನರಲ್ ವಾದ ಮಂಡಿಸಿದರು.
ಎಲ್ಲಾ ಅಂಶಗಳನ್ನ ಆಲಿಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.