* ರಾಜ್ಯದಲ್ಲಿ ಶಾಲೆ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್
* 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ತೀರ್ಮಾನ
* ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
ಬೆಂಗಳೂರು, (ಆ.06): ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದೇ ಆಗಸ್ಟ್ 23ರಿಂದ ಶಾಲೆ-ಕಾಲೇಜು ಪ್ರಾರಂಭಿಸುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು (ಆ.06) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆದ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದೆ.
ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕ ತಡೆ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಾಳಿ ಪ್ರಕಾರಣ ಶಾಲೆ ಪ್ರಾರಂಭಕ್ಕೆ ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ ಆಗಸ್ಟ್ 23ರಿಂದ ಶಾಲೆ-ಕಾಲೇಜುಗಳು ಆರಂಭವಾಗಲಿವೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಆಗಸ್ಟ್ 23ರಿಂದ 9, 10, 11 ಹಾಗೂ 12 ನೇ ತರಗತಿಗಳು ಆರಂಭವಾಗಲಿವೆ. ಬ್ಯಾಚ್ ವೈಸ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
ಇನ್ನು ಪ್ರಾಥಮಿಕ ಶಾಲೆಗಳು ಅಂದರೆ 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ, ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.