PU Supplementary Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Published : May 09, 2023, 01:54 PM ISTUpdated : May 09, 2023, 02:28 PM IST
PU Supplementary Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಾರಾಂಶ

ರಾಜ್ಯದಲ್ಲಿ ದ್ವಿತೀಯ ಪಿಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ 22ರ ಬದಲಾಗಿ ಮೇ 23ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಪರಿಷ್ಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ. 

ಬೆಂಗಳೂರು (ಮೇ 09): ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22ರಿಂದ ಆಯೋಜನೆ ಮಾಡಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈಗಾಗಲೇ ಹೊರಡಿಸಿದ್ದ ಪೂರ ಪರೀಕ್ಷಾ ವೇಳಾಪಟ್ಟಿಯಲ್ಲಿ ಮೇ 22 ರಿಂದ ಜೂ.2ರವರೆಗೆ ಪೂರಕ ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು. ಆದರೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ಮೇ 22ರ ಬದಲಿಗೆ ಮೇ 23ರಿಂದ ಜೂ.3ರವರೆಗೆ ನಡೆಸಲು ತೀರ್ಮಾನಿಸಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ 2023ರ ಫಲಿತಾಂಶ ಪ್ರಕಟ: ಚಿತ್ರದುರ್ಗ ಪ್ರಥಮ, ಮಂಡ್ಯ 2ನೇ ಸ್ಥಾನ

ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದೆ. ಮೇ 23 ರಿಂದ ಪೂರಕ ಪರೀಕ್ಷೆ ಆರಂಭವಾಗಲಿದ್ದು, ಹದಿನೈದು ದಿನಗಳ ಮುಂಚೆಯೇ ಪರೀಕ್ಷಾರ್ಥಿಗಳಿಗೆ ದಿನಾಂಕವನ್ನು ಘೋಷಣೆ ಮಾಡಿದೆ. ಇನ್ನು ಪರೀಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯ ಕುರಿತ ಹೆಚ್ಚಿನ ಮಾಹಿತೊಗಾಗಿ, ಪರೀಕ್ಷಾರ್ಥಿಗಳು https://kseab.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ ವೇಳಾಪಟ್ಟಿ ಮಾಹಿತಿ ಪಡೆಯಬಹುದು. ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಮಧ್ಯಾಹ್ನ 2.15ರಿಂದ 5.30ರ ವರೆಗೆ ನಡೆಯಲಿದೆ. 

  • ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..
  • ಮೇ 23- ಕನ್ನಡ, ಅರೇಬಿಕ್, 
  • ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ, 
  • ಮೇ 25 - ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋ ಮೋಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್), 
  • ಮೇ 26- ಸಮಾಜಶಾಸ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ,
  • ಮೇ 27- ಇತಿಹಾಸ, ಸಂಖ್ಯಾಶಾಸ
  • ಮೇ 28- ರಜೆ
  • ಮೇ 29- ಹಿಂದಿ (ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್), 
  • ಮೇ 30- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತ ಶಾಸ್ತ್ರ, 
  • ಮೇ 31- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಲೆಕ್ಕಶಾಸ್ತ್ರ
  • ಜೂ.1- ರಾಜ್ಯಶಾಸ, ಗಣಿತ ಶಾಸ್ತ್ರ, 
  • ಜೂ.2 - ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, 
  • ಜೂ.3 - ಅರ್ಥಶಾಸ್ತ್ರ, ಜೀವಶಾಸ್ತ್ರ

SSLC Toppers 2023 ಇವರೇ ನೋಡಿ: ಪೂರಕ ಪರೀಕ್ಷೆಗೆ ಮೇ 15ರೊಳಗೆ ಅರ್ಜಿ ಸಲ್ಲಿಸಿ

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ