ಈಗಾಗಲೇ ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಎನ್‌ಇಪಿ ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಕ್ಷಣ ತಜ್ಞರ ಸಭೆ ಕರೆದು ಸಾಧಕ-ಬಾಧಕ ಚರ್ಚಿಸಿಯೇ ಎಸ್‌ಇಪಿ ಜಾರಿಗೆ ತರಲಾಗುವುದು ಎಂದ ಸಚಿವ ಡಾ. ಎಂ.ಸಿ.ಸುಧಾಕರ್
ಕಲಬುರಗಿ(ಜೂ.20): ರಾಜ್ಯದಲ್ಲಿ 2 ವರ್ಷಗಳಿಂದ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಕೈಬಿಟ್ಟು ಎಂದಿನಂತೆ ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ಸಿದ್ಧತೆಗಳು ಸಾಗಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಇಂಗಿತ ವ್ಯಕ್ತಪಡಿಸಿದ್ದಾರೆ.
ಗುವಿವಿ ಘಟಿಕೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತುಂಬ ಆತುರದಲ್ಲಿ ಜಾರಿ ಮಾಡಲಾಗಿದೆ. ರಾಜ್ಯದಲ್ಲಿರುವ ವಿವಿಗಳು ಸನ್ನದ್ಧವಾಗಿದ್ದವೆ? ಇಲ್ಲವೆ? ಎಂಬುದನ್ನು ನೋಡದೆಯೇ ಎನ್‌ಇಪಿ ಜಾರಿಗೆ ತರಲಾಗಿದೆ. ಮಕ್ಕಳಿಗೆ ಈ ನೀತಿಯಂತೆ 2 ವರ್ಷ ಪೂರೈಸಿ 3ನೇ ವರ್ಷದಲ್ಲಿದ್ದಾರೆ. ಆದರೆ ಈ ನೀತಿಯ ಸಾಧಕ- ಬಾದಕಗಳ ಚರ್ಚೆ ಇಂದಿಗೂ ಸಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡೇ ಕಾಂಗ್ರೆಸ್ ರಾಜ್ಯ ಶಿಕ್ಷಣ ನೀತಿ ಜಾರಿಗೆ ಒಲವು ತೋರಿದೆ ಎಂದರು.
undefined
ಪಠ್ಯಪುಸ್ತಕ ಪರಿಷ್ಕರಣೆಗೆ ಬಿಜೆಪಿ ತೀವ್ರ ವಿರೋಧ
ಈಗಾಗಲೇ ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಎನ್‌ಇಪಿ ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಕ್ಷಣ ತಜ್ಞರ ಸಭೆ ಕರೆದು ಸಾಧಕ-ಬಾಧಕ ಚರ್ಚಿಸಿಯೇ ಎಸ್‌ಇಪಿ ಜಾರಿಗೆ ತರಲಾಗುವುದು ಎಂದರು.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಅನ್ವಯ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು. ಏತನ್ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ-ಬಾಧಕಗಳ ಚರ್ಚೆ ಸಾಗಿದೆ. ಈ ವಿಷಯದ ಪರ ಹಾಗೂ ವಿರೋಧವಾಗಿರುವವರು, ಶಿಕ್ಷಣ ತಜ್ಞರು ಶಿಣ ರಂಗದಲ್ಲಿರುವವರು ಎಲ್ಲರನ್ನು ಒಗ್ಗೂಡಿಸಿ ಮತ್ತೊಮ್ಮೆ ಚರ್ಚಿಸಲಾಗುತ್ತದೆ. ಕೌಶಲ್ಯ ಸಂಬಂಧಿ ಸಂಗತಿಗಳು ಹೆಚ್ಚು ಚರ್ಚೆಯಲ್ಲಿರೋದರಿಂದ ಇಂತಹದ್ದೆಲ್ಲವೂ ಸೇರಿಸಿಯೇ ರಾಜ್ಯ ಶಿಕ್ಷಣ ನೀತಿ ರೂಪಿಸುವ ಚಿಂತನೆ ಸಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ತಜ್ಞರೊಂದಿಗೆ ಪರಾಮರ್ಶೆ ನಡೆಸಲಾಗುತ್ತಿದೆ. ಶೀಘ್ರವೇ ಅಂತಿನ ನಿರ್ಧಾರಕ್ಕೆ ಬರಲಾಗುತ್ತದೆ ಎಂದು ಸಚಿವ ಡಾ. ಸುಧಾಕರ್ ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ 32 ಸರ್ಕಾರಿ ವಿಶ್ವವಿದ್ಯಾಲಯಗಳಿದ್ದು, ಗುಲಬರ್ಗಾ ವಿವಿ ಸೇರಿದಂತೆ ಒಟ್ಟಾರೆ 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಉಪನ್ಯಾಸಕ ಹುದ್ದೆ ಭರ್ತಿಗೆ ಮುಂದಿನ ದಿನದಲ್ಲಿ ಕ್ರಮ ವಹಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಮಹಿಳೆಯರಿಗೆ ಉಚಿತ ಪ್ರಯಾಣ : ಈಗ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ ಬಸ್!
ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಉನ್ನತ ಶಿಕ್ಷಣ ಸೇರಿ ಶಿಕ್ಷಣ ಕ್ಷೇತ್ರಕ್ಕೆ ಒಟ್ಟಾರೆ ಶೇ.6ರಷ್ಟುಅನುದಾನ ಆಯವ್ಯಯದಲ್ಲಿ ಹಂಚಿಕೆ ಮಾಡಲಾಗುತ್ತದೆ. ಇದರಲ್ಲಿ ಉನ್ನತ ಶಿಕ್ಷಣಕ್ಕೆ ಲಭ್ಯವಾಗುವುದು ಶೇ.1.70ರಷ್ಟುಮಾತ್ರ. ಹಂಚಿಕೆಯಾದ ಅನುದಾನದಲ್ಲಿ ಶೇ.88ರಷ್ಟುಉಪನ್ಯಾಸಕರ ಸಂಬಳಕ್ಕೆ ವಿನಿಯೋಗಿಸಲಾಗುತ್ತಿದೆ. ಬರುವಂತಹ ಆಯವ್ಯಯದಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕುಲಪತಿಗಳ ಸಭೆ:
ಉನ್ನತ ಶಿಕ್ಷಣ ಸುಧಾರಣೆ ಮತ್ತು ವಿ.ವಿ. ಸಮಸ್ಯೆಗಳ ಪರಿಹಾರ ನಿಟ್ಟಿನಲ್ಲಿ ತಾವು ಸಚಿವರಾದ ನಂತರ ರಾಜ್ಯದ ವಿವಿ ಕುಲಪತಿಗಳೊಂದಿಗೆ ಒಂದು ಸುತ್ತಿನ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ವಿವಿಯಲ್ಲಿನ ನೇಮಕಾತಿ, ಶೈಕ್ಷಣಿಕ ಕ್ಷೇತ್ರದ ಬಲವರ್ಧನೆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಸಿಗಳ ಸಭೆ ಕರೆದು ಅದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ಇನ್ನು ಗುಲಬರ್ಗಾ ವಿವಿಯಲ್ಲಿನ 137 ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿರುವುದನ್ನು ತಾವು ಪರಿಶೀಲಿಸುವುದಾಗಿ ಸಚಿವ ಡಾ. ಎಂ.ಸಿ.ಸುಧಾಕರ್ ಇದೇ ಸಂದರ್ಭದಲ್ಲಿ ತಿಳಿಸಿದರು. ಗುವಿವಿ ಕುಲಪತಿ ಡಾ. ದಯಾನಂದ ಅಗಸರ್ ಇದ್ದರು.