ವಿದ್ಯಾರ್ಥಿಗಳಿಗೆ ಸಿಗಲಿದೆ 5 ಕೋಟಿ ರು. ಸ್ಕಾಲರ್ ಶಿಪ್

Kannadaprabha News   | Asianet News
Published : Oct 29, 2020, 08:16 AM ISTUpdated : Oct 29, 2020, 09:01 AM IST
ವಿದ್ಯಾರ್ಥಿಗಳಿಗೆ ಸಿಗಲಿದೆ 5 ಕೋಟಿ ರು. ಸ್ಕಾಲರ್ ಶಿಪ್

ಸಾರಾಂಶ

ವಿದ್ಯಾರ್ಥಿಗಳಿಗೆ 5 ಕೋಟಿ ರು. ಸ್ಕಾಲರ್ ಶಿಪ್ ಘೋಷಣೆ ಮಾಡಲಾಗಿದೆ. ಯಾರಿಗಿದೆ ಅರ್ಹತೆ

ಬೆಂಗಳೂರು(ಅ.29):  ಬೀದರ್‌ನ ಶಾಹೀನ್‌ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್‌ ಹಾಗೂ ಇತರೆ ಕೋರ್ಸುಗಳ ಪ್ರವೇಶ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ 5 ಕೋಟಿ ರು. ವಿದ್ಯಾರ್ಥಿ ವೇತನ ಪ್ರಕಟಿಸಿದೆ.

ಕೊರೋನಾ ಹಾಗೂ ಅತಿವೃಷ್ಟಿಯಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನೀಟ್‌ನಲ್ಲಿ ಅಖಿಲ ಭಾರತ ಮಟ್ಟದಲ್ಲಿ 9ನೇ ಹಾಗೂ ಕರ್ನಾಟಕದಲ್ಲಿ ಮೊದಲ ರಾರ‍ಯಂಕ್‌ ಗಳಿಸಿದ ಸಂಭ್ರಮದಲ್ಲಿರುವ ಸಂಸ್ಥೆಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವಾಗಲು ವಿದ್ಯಾರ್ಥಿ ವೇತನದ ಮೂಲಕ ನೆರವಾಗಲು ಈ ನಿರ್ಧಾರ ಪ್ರಕಟಿಸಿದೆ.

ಈ ಸಂಬಂಧ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಹೀನ್‌ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಅಬ್ದುಲ್‌ ಖದೀರ್‌ ಅವರು, ವಿದ್ಯಾರ್ಥಿ ವೇತನದಿಂದ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ನಿರೀಕ್ಷೆ ಇದೆ. ಕೊರೋನಾ ಕಾರಣದಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ನೀಟ್‌ ತರಬೇತಿ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ಸಂಸ್ಥೆಯ ವೆಬ್‌ಸೈಟ್‌  ನಲ್ಲಿ ಉಚಿತವಾಗಿ ಹೆಸರು ನೋಂದಾಯಿಸಿಕೊಂಡು ವಿದ್ಯರ್ಥಿ ವೆತನ ಲಾಭ ಪಡೆದುಕೊಳ್ಳಬಹುದು. ನೀಟ್‌ ದೀರ್ಘ ಕಾಲದ ರಿಪೀಟ​ರ್‍ಸ್ ತರಬೇತಿ ಪ್ರವೇಶಕ್ಕೆ ನ.1 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಟೋಲ್‌ ಪ್ರೀ ಸಂಖ್ಯೆ 18001216235ಗೆ ಸಂಪರ್ಕಿಸಬಹುದು ಎಂದು ಹೇಳಿದರು.

ವೃತ್ತಿಪರ ಕೋರ್ಸ್‌ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಸ್ಕಾಲರ್‌ಶಿಪ್‌ಗೆ ಅರ್ಜಿ ಅಹ್ವಾನ

32 ವರ್ಷಗಳ ಹಿಂದೆ 16 ಮಕ್ಕಳಿಂದ ಆರಂಭವಾದ ಶಾಹೀನ್‌ ಶಿಕ್ಷಣ ಸಂಸ್ಥೆ ಇಂದು 17 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಮಟ್ಟಕ್ಕೆ ಬೆಳೆದಿದೆ. ಕರ್ನಾಟಕ ಸೇರಿ ದೇಶದ ವಿವಿಧೆಡೆ ಒಟ್ಟು 42 ಶಾಖೆಗಳನ್ನು ಹೊಂದಿರುವ ಸಂಸ್ಥೆಯು ಗುಣಮಟ್ಟದ ಶಿಕ್ಷಣದ ಮೂಲಕ ದ್ವಿತೀಯ ಪಿಯುಸಿ, ಸಿಇಟಿ, ನೀಟ್‌ ಫಲಿತಾಂಶದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ ಎಂದರು.

ನಮ್ಮ ದೇಶದ ಎಲ್ಲ ಶಾಖೆಗಳಲ್ಲೂ ವಿದ್ಯಾರ್ಥಿ ವೇತನ ನೀಡಲಾಗುವುದು. ಕಲ್ಯಾಣ ಕರ್ನಾಟಕ ಹಾಗೂ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ನೀಟ್‌ ದೀರ್ಘಕಾಲದ ರಿಪೀಟ​ರ್‍ಸ್ಗಳಿಗೆ ಅಂಕಗಳನ್ನು ಆಧರಿಸಿ ವಿದ್ಯಾರ್ಥಿ ವೇತನ ಕಲ್ಪಿಸಲಾಗುವುದು. ಸಂಸ್ಥೆಯ ಬೀದರ್‌ ಶಾಖೆಗೆ ಮಾತ್ರ ಅನ್ವಯಿಸುವಂತೆ ಪಿಯುಸಿ ಕಲಾ, ವಾಣಿಜ್ಯ, ಬಿಎ, ಬಿಎಸ್ಸಿ, ಬಿಕಾಂ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನ ಅನ್ವಯಿಸುತ್ತದೆ ಎಂದು ವಿವರಿಸಿದರು.

ಈ ಬಾರಿ ನೀಟ್‌ ಪರೀಕ್ಷೆಯಲ್ಲಿ ಶಾಹೀನ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾದ ಕಾರ್ತಿಕ್‌ ರೆಡ್ಡಿ 720ಕ್ಕೆ 710 ಅಂಕ ಗಳಿಸಿ ದೇಶಕ್ಕೆ 9ನೇ ರಾರ‍ಯಂಕ್‌ ಮತ್ತು ಕರ್ನಾಟಕಕ್ಕೆ ಮೊದಲ ರಾರ‍ಯಂಕ್‌ ತಂದುಕೊಡುವ ಮೂಲಕ ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದರು. ಸಂಸ್ಥೆಯ ಇನ್ನೂ ಹಲವು ವಿದ್ಯಾರ್ಥಿಗಳು ನೀಟ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದರು.

PREV
click me!

Recommended Stories

1ನೇ ತರಗತಿ ಪ್ರವೇಶ ಬಗೆಹರಿಯದ ಗೊಂದಲ, 2.30 ಲಕ್ಷ ಮಕ್ಕಳಿಗೆ ಶೈಕ್ಷಣಿಕ ವರ್ಷ ಕಳೆದುಕೊಳ್ಳುವ ಭೀತಿ!
Karna Serial Twist: ಡಾ.ನಿಧಿ ಈಗ ಲಾಯರ್​ ನಿಧಿ! Law ಪದವಿ ಬಗ್ಗೆ ಬಿಸಿಬಿಸಿ ಚರ್ಚೆ- ಏನ್ ಹೇಳತ್ತೆ ಕಾನೂನು?