NEET ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಸಾರ್ಥಕವಾಯ್ತು, ಭೇಷ್ ತನುಜಾ, ಯು ಆರ್ ಗ್ರೇಟ್

By Suvarna News  |  First Published Oct 16, 2020, 10:48 PM IST

ಸಿಎಂ ಬಿಎಸ್ ಯಡಿಯೂರಪ್ಪ ಹಾಗು ಆರೋಗ್ಯ ಸಚಿವ ಡಾ. ಸುಧಾಕರ್ ಅವರ ಸಹಾಯದಿಂದ ನೀಟ್ ಪರೀಕ್ಷೆ ಬರೆದಿದ್ದ ಶಿವಮೊಗ್ಗದ ವಿದ್ಯಾರ್ಥಿನಿ ಫಲಿತಾಂಶ ಬಹಿರಂಗವಾಗಿದೆ.


ಬೆಂಗಳೂರು, (ಅ.16): ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜ ಕರೇಗೌಡ್ರ ನೀಟ್ ಪರೀಕ್ಷೆಯಲ್ಲಿ ತನುಜಾ 720ಕ್ಕೆ  586 ಅಂಕ ಪಡೆದಿದ್ದಾಳೆ. 

ಕೋವಿಡ್ ನಿಂದಾದ ಬದಲಾವಣೆಗಳು ತನುಜಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿಯಾಗಿತ್ತು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ ಮುಖ್ಯಮಂತ್ರಿಗಳು ಹಾಗೂ ಸಚಿವರು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದರು.

Tap to resize

Latest Videos

ಸಿಎಂ, ಸಚಿವರ ಸಹಾಯದಿಂದ ನೀಟ್ ಪರೀಕ್ಷೆಗಿದ್ದ ಅಡ್ಡಿ ನಿವಾರಣೆ, ವಿದ್ಯಾರ್ಥಿನಿ ಫುಲ್ ಖುಷ್

ಸಿಎಂ ಹಾಗೂ ಸಚಿವರ ಒಂದು ಸಹಾದಿಂದ ಇದೀಗ ತನುಜಾ ನೀಟ್ ಪರೀಕ್ಷೆಯಲ್ಲಿ 720ಕ್ಕೆ  586 ಅಂಕ ಪಡೆಯುವ ಮೂಲಕ ಮೆಡಿಕಲ್ ಸೀಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ,

ಆಗಿದ್ದೇನು?
ಶಿವಮೊಗ್ಗದ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿನಿ ತನುಜ ವೈದ್ಯೆಯಾಗಿ ಸಮಾಜದ ಸೇವೆ ಮಾಡುವ ಕನಸು ಹೊತ್ತಿದ್ದಾಳೆ. ಈಕೆಯ ತಂದೆ ನಾಗರಾಜ ಕೃಷಿಕರಾಗಿದ್ದು, ಮಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ಕಳೆದ ವರ್ಷ ತನುಜ ಪಿಯುಸಿ ಪೂರ್ಣಗೊಳಿಸಿದ್ದಳು. ಈಕೆಯ ಪ್ರತಿಭೆಯನ್ನು ಮೆಚ್ಚಿದ್ದ ನವೋದಯ ಶಾಲೆಯ ಆಡಳಿತ ಮಂಡಳಿ ಪುಣೆಯಲ್ಲಿ ನಡೆಯುವ ಕೋಚಿಂಗ್‍ಗೂ ಈಕೆಯನ್ನು ಆಯ್ಕೆ ಮಾಡಿತ್ತು.

ಸೆಪ್ಟೆಂಬರ್ 13 ರಂದು ಎನ್‍ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ನೀಟ್ ಪರೀಕ್ಷೆ ಏರ್ಪಡಿಸಿತ್ತು. ಈ ವೇಳೆ ತನುಜ ಅವರ ಮನೆಯ ಬಳಿ ಕಂಟೇನ್ಮೆಂಟ್ ವಲಯವನ್ನು ಘೋಷಿಸಲಾಗಿತ್ತು. ಜತೆಗೆ, ತನುಜಗೂ ಜ್ವರ ಬಂದಿದ್ದರಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ತನುಜಳ ಆಸೆಯೇ ಕಮರಿಹೋಗುವ ಆತಂಕ ಉಂಟಾಗಿತ್ತು. ಆದರೆ ನಂತರ ಸುಪ್ರಿಂ ಕೋರ್ಟ್ ನಿರ್ದೇಶನದ ಮೇರೆಗೆ, ಎನ್‍ಟಿಎ ಮತ್ತೊಮ್ಮೆ ಪರೀಕ್ಷೆ ಏರ್ಪಡಿಸಿತು. ಆದರೆ ಈ ಬಾರಿ ಪರೀಕ್ಷೆ ಬರೆಯಲು ಕೋವಿಡ್ ಸಂಬಂಧಿತ ವರದಿ ಹಾಗೂ ಕೆಲ ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಎನ್‍ಟಿಎ ಸೂಚಿಸಿತ್ತು.

click me!