* ಈಗಾಗಲೇ ಶಿಕ್ಷಣ ತಜ್ಞರು, ಪೋಷಕರು, ಶಾಲೆಗಳಿಂದ ಅಭಿಪ್ರಾಯ ಸಂಗ್ರಹ
* ಪರೀಕ್ಷೆಯ ಅವಧಿ ಒಂದು ಗಂಟೆಗೆ ಇಳಿಸಿ ಸಂಕ್ಷಿಪ್ತವಾಗಿ ಪರೀಕ್ಷೆ ನಡೆಸಬೇಕು
* ಪರೀಕ್ಷೆ ವಿಚಾರದಲ್ಲಿ ಸರ್ಕಾರ ಇಂದು ತನ್ನ ನಿರ್ಧಾರ ಪ್ರಕಟ
ಬೆಂಗಳೂರು(ಜೂ.04): ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತ ಎಂದು ರಾಜ್ಯ ಸರ್ಕಾರದ ಹಿರಿಯ ಸಚಿವರಾದ ಕಂದಾಯ ಸಚಿವ ಆರ್.ಅಶೋಕ್ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ಪರೀಕ್ಷೆಯ ಅವಧಿ ಒಂದು ಗಂಟೆಗೆ ಇಳಿಸಿ ಸಂಕ್ಷಿಪ್ತವಾಗಿ ಪರೀಕ್ಷೆ ನಡೆಸಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಬಹಳ ಮುಖ್ಯ. ಪರೀಕ್ಷೆ ಮಾಡದೇ ಉತ್ತೀರ್ಣ ಮಾಡಿದರೆ ನಾಳೆ ಉದ್ಯೋಗ ಪಡೆಯಲು ತೊಂದರೆ ಆಗುತ್ತದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಪ್ರಮುಖ ವಿಷಯಗಳನ್ನು ಉದಾಹರಣೆಗೆ ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಯನ್ನು ಒಟ್ಟಾಗಿ ನಡೆಸಬೇಕು ಇದೇ ಸಲಹೆಯನ್ನು ಸಚಿವ ಸುರೇಶ ಕುಮಾರ್ ಅವರಿಗೂ ನೀಡಿದ್ದೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ.
undefined
ದೇಶದ 8 ರಾಜ್ಯಗಳಲ್ಲಿ 12ನೇ ತರಗತಿ ಪರೀಕ್ಷೆ ರದ್ದು
‘ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯನ್ನು ಐಸಿಎಸ್‌ಇ, ಸಿಬಿಎಸ್‌ಇ ರೀತಿಯಲ್ಲಿ ರದ್ದು ಮಾಡುವುದು ಸರಿಯಲ್ಲ. ಸಿಬಿಎಸ್‌ಇ ಪದ್ಧತಿಯಲ್ಲಿ ಮೂರು ತಿಂಗಳಿಗೊಮ್ಮೆ ಪರೀಕ್ಷೆ ಮಾಡಿ ಮೌಲ್ಯಮಾಪನ ಮಾಡಲಾಗುತ್ತದೆ. ಆದರೆ ರಾಜ್ಯ ಪಠ್ಯಕ್ರಮದಲ್ಲಿ ಈ ಪದ್ಧತಿ ಇಲ್ಲ. ಹಾಗಾಗಿ ಮಕ್ಕಳ ಜ್ಞಾನಾರ್ಜನೆ ಮಟ್ಟ ಅಳೆಯಲು ಯಾವುದಾದರೂ ರೂಪದಲ್ಲಿ ಪರೀಕ್ಷೆ ನಡೆಸಬೇಕು’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ದೇಶದ 8 ರಾಜ್ಯಗಳಲ್ಲಿ 12ನೇ ತರಗತಿ ಪರೀಕ್ಷೆ ರದ್ದು
ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ಭವಿಷ್ಯ ಇಂದು ನಿರ್ಧಾರ
ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತವೆಯೇ ಇಲ್ಲವೇ ಎಂಬುದಕ್ಕೆ ಉತ್ತರ ದೊರೆಯುವ ಕಾಲ ಸನ್ನಿಹಿತವಾಗಿದೆ. ಪರೀಕ್ಷೆ ವಿಚಾರದಲ್ಲಿ ಸರ್ಕಾರ ಶುಕ್ರವಾರ ತನ್ನ ನಿರ್ಧಾರ ಪ್ರಕಟಿಸಲಿದೆ.
ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಶಿಕ್ಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳು ಮಾತ್ರವಲ್ಲದೆ, ಮುಖ್ಯಮಂತ್ರಿಗಳು, ಶಾಸಕ, ಸಚಿವರು ಸೇರಿ ಪ್ರಮುಖ ಜನಪ್ರತಿನಿಧಿಗಳಿಂದಲೂ ಅಭಿಪ್ರಾಯ ಸಂಗ್ರಹಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಈ ಸಂಬಂಧ ಶುಕ್ರವಾರ (ಜೂ.4) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.