Russia-Ukraine War: ಅತಂತ್ರರಾದ ವಿದ್ಯಾರ್ಥಿಗಳ ನೆರವಿಗೆ ಬಂದ ಸಿದ್ಧಗಂಗಾ ಮಠ

Published : May 04, 2022, 09:18 AM IST
Russia-Ukraine War: ಅತಂತ್ರರಾದ ವಿದ್ಯಾರ್ಥಿಗಳ ನೆರವಿಗೆ ಬಂದ ಸಿದ್ಧಗಂಗಾ ಮಠ

ಸಾರಾಂಶ

*   ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಅವಕಾಶ *  ಉಕ್ರೇನ್‌ನಲ್ಲಿ ಓದುತ್ತಿದ್ದ 13 ವಿದ್ಯಾರ್ಥಿಗಳಿಗೆ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಓದಲು ಅವಕಾಶ *   ಪ್ರಾಕ್ಟಿಕಲ್ ಕ್ಲಾಸ್ ಅಟೆಂಡ್ ಮಾಡಲು ಅವಕಾಶ   

ವರದಿ: ಮಹಂತೇಶ್ ಕುಮಾರ್, ಏಷ್ಯನೆಟ್ ಸುವರ್ಣ ನ್ಯೂಸ್, ತುಮಕೂರು

ತುಮಕೂರು(ಮೇ.04): ಮೆಡಿಕಲ್ ವ್ಯಾಸಂಗವನ್ನು(Medical Education) ಅರ್ಧಕ್ಕೆ ಮೊಟುಕುಗೊಳಿಸಿ ಉಕ್ರೇನ್(Ukraine) ನಿಂದ ವಾಪಸ್ ತಾಯ್ನಾಡಿಗೆ ಬಂದ ವಿದ್ಯಾರ್ಥಿಗಳ ನೆರವಿಗೆ ಸಿದ್ಧಗಂಗಾ ಮಠ(Siddaganga Math) ಮುಂದಾಗಿದೆ. ಮಠದ ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಕ್ರೇನ್‌ನಿಂದ ವಾಪಸ್ ಬಂದ ವಿದ್ಯಾರ್ಥಿಗಳು ಉಚಿತವಾಗಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 13 ವಿದ್ಯಾರ್ಥಿಗಳು ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಿದ್ದಾರೆ. ಸಂಸ್ಥೆಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ. 

ಉಕ್ರೇನ್-ರಷ್ಯಾ ಯುದ್ಧದ(Russia-Ukraine War) ಪರಿಣಾಮದಿಂದ ಅತಂತ್ರಗೊಂಡಿದ ಮೆಡಿಕಲ್ ವಿದ್ಯಾರ್ಥಿಗಳ ನೆರವಿಗೆ ಸಿದ್ಧಗಂಗಾ ಮಠದ ಮೆಡಿಕಲ್ ಕಾಲೇಜು(Siddaganga Medical College) ಧಾವಿಸಿದೆ. ಉಕ್ರೇನ್‌ನಿಂದ ಪ್ರಾಣ ಉಳಿಸಿಕೊಂಡು ತಾಯ್ನಾಡಿಗೆ ವಾಪಸ್ ಬಂದ ಮೆಡಿಕಲ್ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯಮಾನವಾಗಿತ್ತು. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳ ಪರಿಸ್ಥತಿ ಅರ್ಥ ಮಾಡಿಕೊಂಡ ಸಿದ್ಧಗಂಗಾ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ(Students) ನೆರವಿಗೆ ಮುಂದಾಗಿದೆ. ಉಕ್ರೇನ್‌ನಿಂದ ವಾಪಸ್ ಆದ ಎಲ್ಲಾ ವಿದ್ಯಾರ್ಥಿಗಳು ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ(Study) ಮುಂದುವರೆಸಲು ಉಚಿತವಾಗಿ ಅವಕಾಶ ಕಲ್ಪಿಸಿಕೊಡಲಾಗಿದೆ. 

Tumakuru Accident ಬಸ್ ಲಾರಿ ನಡುವೆ ಅಪಘಾತ, ಚಾಲಕ ಸ್ಥಳದಲ್ಲೇ ಸಾವು!

ಉಕ್ರೇನ್ ದೇಶದ ಹಲವು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ತುಮಕೂರು(Tumakuru) ಜಿಲ್ಲೆಯ ಮೂಲದ 27 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆ 27 ವಿದ್ಯಾರ್ಥಿಗಳಲ್ಲಿ ಒಬ್ಬಬ್ಬರು ಒಂದೊಂದು ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಲ್ಲಿನ ಶೈಕ್ಷಣಿಕ ಪಠ್ಯಕ್ಕೆ ತಕ್ಕಂತೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಕ್ಲಾಸ್‌ಗಳಲ್ಲಿ ಪಾಲ್ಗೊಳ್ಳಲು ಹಾಗೂ ರೋಗಿಗಳನ್ನು ಪರೀಕ್ಷಿಸಲು ಅವಕಾಶ ನೀಡಲಾಗಿದೆ. ಇನ್ನೊಂದೆಡೆ ಉಕ್ರೇನ್‌ನಿಂದಲೂ ಕೂಡ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿ ಮಾಡಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು ಪ್ರಾಕ್ಟಿಲ್ ಕ್ಲಾಸ್ ಮಿಸ್ ಮಾಡಿಕೊಳ್ಳುತ್ತಿದ್ದರು, ಇದೀಗ ಈ ಕೊರಗನ್ನು  ಸಿದ್ದಗಂಗಾ ಮೆಡಿಕಲ್ ಕಾಲೇಜು ನಿಗಿಸಿದೆ. ಇದು ವಿದ್ಯಾರ್ಥಿಗಳಿಗೆ ಖುಷಿ ತಂದಿದೆ.  ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ಈ ಅವಕಾಶ ನೀಡಿರುವುದಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ.

ಸಿದ್ಧಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ವ್ಯಾಸಂಗ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಸರ್ಕಾರದ ಮಾನ್ಯತೆ ಸಿಗುವುದಿಲ್ಲ, ಇಲ್ಲಿ ಪ್ರಾಕ್ಟಿಕಲ್ ಕ್ಲಾಸ್‌ನಲ್ಲಿ ಕಲಿಯುವ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲೇ ಪರೀಕ್ಷೆ ಬರೆಯಬೇಕಾಗಿದೆ. ಸ್ಥಳೀಯವಾಗಿಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್ ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕಾಗಿದೆ.
 

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ