ಸಹಾಯಕ ಪ್ರಾಧ್ಯಾಪಕರ ಮಧ್ಯಂತರ ವರ್ಗಾವಣೆಗೆ ಸಿದ್ದರಾಮಯ್ಯ ಆಕ್ರೋಶ

Published : Dec 18, 2022, 03:50 PM ISTUpdated : Dec 18, 2022, 04:19 PM IST
ಸಹಾಯಕ ಪ್ರಾಧ್ಯಾಪಕರ ಮಧ್ಯಂತರ  ವರ್ಗಾವಣೆಗೆ ಸಿದ್ದರಾಮಯ್ಯ ಆಕ್ರೋಶ

ಸಾರಾಂಶ

ಉನ್ನತ ಶಿಕ್ಷಣ ಇಲಾಖೆ ಅಡಿ ಬರುವ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸಹಾಯಕ ಪ್ರಾಧ್ಯಾಪಕ ಹಾಗೂ ಉಪನ್ಯಾಸಕರ ಮಧ್ಯಂತರ ವರ್ಗಾವಣೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು (ಡಿ.18): ‘ರಾಜ್ಯ ಸರ್ಕಾರವು ಅವಧಿಯಲ್ಲದ ಅವಧಿಯಲ್ಲಿ ವರ್ಗಾವಣೆಗಳನ್ನು ಮಾಡುತ್ತಾ ಅರಾಜಕತೆ ಸೃಷ್ಟಿಸುತ್ತಿದೆ. ಉನ್ನತ ಶಿಕ್ಷಣ ಇಲಾಖೆ ಅಡಿ ಬರುವ ಕಾಲೇಜು ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸಹಾಯಕ ಪ್ರಾಧ್ಯಾಪಕ ಹಾಗೂ ಉಪನ್ಯಾಸಕರ ಮಧ್ಯಂತರ ವರ್ಗಾವಣೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿನ ಸಹಾಯಕ ಪ್ರಾಧ್ಯಾಪಕರ ಮಧ್ಯಂತರ ವರ್ಗಾವಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಆಯುಕ್ತಾಲಯ ಪ್ರಕಟಣೆ ಹೊರಡಿಸಿದೆ. ಸರ್ಕಾರವು ವರ್ಗಾವಣೆಗಳಿಗೆ ತೋರಿಸುತ್ತಿರುವ ಆಸಕ್ತಿ, ಅಭಿವೃದ್ಧಿ ವಿಷಯಗಳಿಗೆ ಹಾಗೂ ನೇಮಕಾತಿಗಳಿಗೆ ತೋರಿಸುತ್ತಿಲ್ಲ ಎಂದಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕರ ವರ್ಗಾವಣೆ ಆಗಿ 6 ತಿಂಗಳು ಮಾತ್ರ ಆಗಿದೆ. ಮತ್ತೆ ಈಗ ಎರಡನೇ ಬಾರಿ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ವರ್ಗಾವಣೆ ಎನ್ನುವುದು ಆಡಳಿತಾತ್ಮಕ ಮತ್ತು ಸಾರ್ವಜನಿಕ ಅನುಕೂಲಕ್ಕೆ ಮಾಡಬೇಕಾದ ಚಟುವಟಿಕೆಯೇ ಹೊರತು, ಇಲಾಖೆಗಳಿಗೆ ಸಚಿವರುಗಳಿಗೆ, ಸರ್ಕಾರಕ್ಕೆ ಅದೊಂದು ಚಟವಾಗಬಾರದು’ ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಯಾವುದಾದರೊಂದು ಇಲಾಖೆ ಒಂದೇ ವರ್ಷದಲ್ಲಿ ಎರಡು ಮೂರು ಬಾರಿ ವರ್ಗಾವಣೆ ಮಾಡಿರುವ ಉದಾಹರಣೆಗಳಿಲ್ಲ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಕೌನ್ಸಿಲಿಂಗ್‌ ಮೂಲಕ ವರ್ಗಾವಣೆ ಮಾಡುತ್ತೇನೆಂದು ಹೇಳಿ ವರ್ಷದಲ್ಲಿ ಎರಡು ಮೂರು ಬಾರಿ ಅಧಿಸೂಚನೆ ಹೊರಡಿಸಿಕೊಂಡು ಕೂತಿದೆ. ಕುಲಪತಿಗಳ ನೇಮಕಾತಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮುಂತಾದ ವಿಷಯಗಳಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆಯೆಂದು ಆಡಳಿತ ಪಕ್ಷದ ಶಾಸಕ, ಸಹಚರರೇ ಬಹಿರಂಗ ಹೇಳಿಕೆ ಕೊಡುತ್ತಿದ್ದಾರೆ. ಹೀಗಿದ್ದಾರ ವ್ಯವಸ್ಥೆ ಸುಧಾರಿಸುವ ಬದಲು ಅರಾಜಕತೆ ಸೃಷ್ಟಿಸಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ನಡೆ-ನುಡಿ ಗಮನಿಸಿದರೆ ಮೀಸಲಾತಿ ಅನುಮಾನ
ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ (ಓಬಿಸಿ) ರಾಜಕೀಯ ಮೀಸಲಾತಿ ಅಂತಿಮಗೊಳಿಸಲು ಸರ್ಕಾರ ಉದ್ದೇಶಪೂರ್ವಕ ವಿಳಂಬ ನೀತಿ ಅನುಸರಿಸುತ್ತಿದೆ. ಸರ್ಕಾರದ ನಡೆ-ನುಡಿ ಗಮನಿಸಿದರೆ ಓಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಸಂತ ಬಂಗೇರಾ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಲಿ: ಸಿದ್ದರಾಮಯ್ಯ

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜಕೀಯ ಮೀಸಲಾತಿ ಬಗೆಗಿನ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಓಬಿಸಿ ಸಮುದಾಯಕ್ಕೆ ಅನ್ಯಾಯವಾಗಿರುವುದು ಮಾತ್ರವಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿತ ಕಾಲಕ್ಕೆ ನಡೆಯದಂತಾಗಿದೆ. ಇದಕ್ಕೆ ಪೂರಕ ಎಂಬಂತೆ ಸುಪ್ರೀಂ ಕೋರ್ಚ್‌ ಉದಾರವಾಗಿ ಮತ್ತೆ ಮಾಚ್‌ರ್‍ 31ರವರೆಗೆ ಗಡುವು ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವಾಗ ಮೂರು ಹಂತದ ಪರಿಶೀಲನೆ ನಡೆಸಬೇಕು ಎಂದು ಕಳೆದ ಮೇ ತಿಂಗಳಲ್ಲಿಯೇ ಸುಪ್ರೀಂ ಕೋರ್ಚ್‌ ಸ್ಪಷ್ಟಆದೇಶ ನೀಡಿತ್ತು. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಸ್ವೀಕರಿಸಿದೆ ಇದ್ದಿದ್ದರಿಂದ ಈಗ ಬಿಕ್ಕಟ್ಟು ಉಂಟಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಬಿಸಿ ಮೀಸಲಿಗೆ ಸರ್ಕಾರ ಮೀನಮೇಷ: ಸಿದ್ದರಾಮಯ್ಯ ಕಿಡಿ

ವಿಶ್ವಾಸಾರ್ಹ ಅಂಕಿ ಅಂಶಗಳಿಂದ ಕೂಡಿದ ಮಾಹಿತಿಯನ್ನು ಆಧರಿಸಿ ಮೀಸಲಾತಿ ನೀತಿಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಚ್‌ ಸ್ಪಷ್ಟವಾಗಿ ಹೇಳಿದ್ದರೂ ರಾಜ್ಯ ಸರ್ಕಾರ ಮಾತ್ರ ಅವಸರದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ಕೆ. ಭಕ್ತವತ್ಸಲ ಸಮಿತಿ ನೇಮಿಸಿ ಅಷ್ಟೇ ಅವಸರದಲ್ಲಿ ಶಿಫಾರಸುಗಳನ್ನು ಪಡೆದು ಮೀಸಲಾತಿಯನ್ನು ರೂಪಿಸಿದೆ. ನ್ಯಾ. ಭಕ್ತವತ್ಸಲ ಸಮಿತಿ ಶಿಫಾರಸು ಆಧರಿತ ಮೀಸಲಾತಿಯನ್ನು ರಾಜ್ಯ ಹೈಕೋರ್ಚ್‌ ತಿರಸ್ಕರಿಸಿದ ನಂತರವೂ ತಪ್ಪನ್ನು ಸರಿಪಡಿಸಿಕೊಂಡಿಲ್ಲ. ಹೀಗಾಗಿ ಸುಪ್ರೀಂ ಕೋರ್ಚ್‌ ಮತ್ತೆ ರಾಜ್ಯ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅತ್ಯಂತ ವೈಜ್ಞಾನಿಕವಾಗಿ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸಿದ್ದವಾಗಿದೆ. ಇದರ ಆಧಾರದಲ್ಲಿಯೇ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ರೂಪಿಸಿದರೆ ಸುಪ್ರೀಂ ಕೋರ್ಚ್‌ ಕೂಡಾ ಒಪ್ಪುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ