Textbook Revision Row: ಸಿಎಂ ಬೊಮ್ಮಾಯಿ ಸ್ಪಷ್ಟ ನಿರ್ಧಾರ ತಿಳಿಸಲಿ: ವಿಪಕ್ಷ ನಾಯಕ ಸಿದ್ದು

By Govindaraj S  |  First Published Jun 5, 2022, 3:20 AM IST

ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನೇ ಹೊರತು ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ಅಲ್ಲ. ಮುಖ್ಯಮಂತ್ರಿಗಳ ಭರವಸೆಯು ಗೊಂದಲ ಪರಿಹರಿಸುವ ಬದಲು ಇನ್ನಷ್ಟು  ಗೊಂದಲ ಸೃಷ್ಟಿಸಿದೆ.


ಬೆಂಗಳೂರು (ಜೂ.05): ‘ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನೇ ಹೊರತು ಈಗಾಗಲೇ ಅವಧಿ ಮುಗಿದಿರುವ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ಅಲ್ಲ. ಮುಖ್ಯಮಂತ್ರಿಗಳ ಭರವಸೆಯು ಗೊಂದಲ ಪರಿಹರಿಸುವ ಬದಲು ಇನ್ನಷ್ಟು  ಗೊಂದಲ ಸೃಷ್ಟಿಸಿದೆ. ಕೂಡಲೇ ಪರಿಷ್ಕೃತ ಪಠ್ಯವನ್ನು ರದ್ದುಪಡಿಸಬೇಕು. ನಾಡಗೀತೆ, ಕುವೆಂಪು ಅವರನ್ನು ಗೇಲಿ ಮಾಡಿರುವ ರೋಹಿತ್‌ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಪೂರ್ವಾಗ್ರಹ ಪೀಡಿತ ಅಧ್ಯಕ್ಷನನ್ನು ಕಿತ್ತುಹಾಕಿದ ಮೇಲೆ ಆ ಸಮಿತಿ ಶಿಫಾರಸು ಮಾಡಿರುವ ಪಠ್ಯವನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಜನತೆಯಲ್ಲಿ ಮೂಡಿರುವ ಗೊಂದಲವನ್ನು ಪರಿಹರಿಸುವಂತಹ ಸ್ಪಷ್ಟತೆ ರಾಜ್ಯದ ಮುಖ್ಯಮಂತ್ರಿಗಳ ಮಾತಿನಲ್ಲಿ ಇರಬೇಕು. ಇವರ ಮಾತು ಇನ್ನಷ್ಟುಗೊಂದಲಗಳನ್ನು ಸೃಷ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ? ಪರಿಷ್ಕೃತ ಪಠ್ಯವೇ? ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

Tap to resize

Latest Videos

Textbook Revision Row: 70 ಜನರು ಕೂಗಿದ್ರೆ ಜನಾಕ್ರೋಶವಲ್ಲ: ಸಿ.ಟಿ.ರವಿ

‘ನಾಡಗೀತೆ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ರೋಹಿತ್‌ ಚಕ್ರತೀರ್ಥ ಗೇಲಿ ಮಾಡಿದ್ದಾರೆ. ಅಂಬೇಡ್ಕರ್‌ ಮತ್ತು ಬಸವಣ್ಣನವರನ್ನು ಅವಮಾನಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕನ್ನಡ ನುಡಿ, ಸಾಹಿತ್ಯ ಮತ್ತು ಸಾಹಿತಿಗಳನ್ನು ಗೇಲಿ ಮಾಡುತ್ತಾ ಬಂದಿರುವ, ಸಾಮಾಜಿಕ ಜಾಲತಾಣಗಳಲ್ಲಿ ವಿಕೃತಿಯ ಅಭಿಪ್ರಾಯಗಳನ್ನು ಹಂಚಿಕೊಂಡು ಸಾಮಾಜಿಕ ಆರೋಗ್ಯವನ್ನು ಹಾಳು ಮಾಡುತ್ತಿರುವ ಈ ಕಿಡಿಗೇಡಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಸಿಎಂ ಪರಿಹಾರ ಸೂಚಿಸಲಿ: ‘ಬಸವಣ್ಣನವರ ವಿಚಾರವೂ ಸೇರಿದಂತೆ ಆಕ್ಷೇಪ ವ್ಯಕ್ತವಾಗಿರುವ ಅಂಶಗಳನ್ನು ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಿದ್ದರೆ ಪರಿಷ್ಕೃತ ಪಠ್ಯವನ್ನು ಕೈಬಿಡಲಾಗುವುದೇ ಎಂಬುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ನಾಡಿನ ಹಲವಾರು ಹಿರಿಯ ಸಾಹಿತಿಗಳು ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸೇರಿಸಲಾಗಿರುವ ತಮ್ಮ ಕೃತಿಗಳನ್ನು ವಾಪಸು ಪಡೆದಿದ್ದಾರೆ. ರಾಜ್ಯ ಸರ್ಕಾರ ತಮ್ಮ ಅಭಿಪ್ರಾಯವನ್ನು ಧಿಕ್ಕರಿಸಿದರೆ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇಂತಹ ವಿವಾದಾತ್ಮಕ ಪಠ್ಯವನ್ನು ಬೋಧಿಸಲು ಹೇಗೆ ಸಾಧ್ಯ? ಮುಖ್ಯಮಂತ್ರಿಗಳು ಇದಕ್ಕೆ ಪರಿಹಾರ ಸೂಚಿಸಬೇಕು’ ಎಂದು ಹೇಳಿದರು.

ಯಾವ ಪಠ್ಯ ಬೋಧನೆ?: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಕರು ಬೋಧಿಸಲಿರುವುದು ಹಳೆಯ ಪಠ್ಯವೇ, ಪರಿಷ್ಕೃತ ಪಠ್ಯವೇ ಎಂಬುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು.

ನಮ್ಮದು ಬಸವ ಪಥ ಸರ್ಕಾರ: ಪಠ್ಯದಲ್ಲಿ ಬಸವಣ್ಣ ನಿಜ ಇತಿಹಾಸದ ಪರಿಚಯ: ಸಿಎಂ ಬೊಮ್ಮಾಯಿ

ನಿಲ್ಲದ ಪಠ್ಯಪುಸ್ತಕ ಜಟಾಪಟಿ: ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸುವುದಾಗಿ ಮುಖ್ಯಮಂತ್ರಿಗಳು ಪ್ರಕಟಿಸಿದ್ದರೂ ಈ ಸಂಬಂಧ ಎದ್ದಿರುವ ವಿವಾದ ಇನ್ನೂ ನಿಂತಿಲ್ಲ. ಸಮಿತಿ ವಿಸರ್ಜಿಸಿದ ಮೇಲೆ ಅದು ಪರಿಷ್ಕರಿಸಿದ ಪಠ್ಯವನ್ನೂ ಕೈಬಿಡಿ ಎಂಬ ಬೇಡಿಕೆ ಬಂದಿದ್ದು, ಅದಕ್ಕೆ ಸರ್ಕಾರ ನಿರಾಕರಿಸಿದೆ. ಹೀಗಾಗಿ ವಿವಾದ ಇನ್ನಷ್ಟು ಜಟಿಲಗೊಂಡಿದೆ.

click me!