ಶೀಘ್ರದಲ್ಲೇ ನಡೆಯಲಿದೆ ಉಪ​ನ್ಯಾ​ಸ​ಕರ ನೇಮಕ

By Kannadaprabha News  |  First Published Sep 18, 2020, 7:11 AM IST

ಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ನಡೆಸಲಿದೆ. 


ಬೆಂಗಳೂರು (ಸೆ.18): ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿನ ಒಟ್ಟು 1,203 ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆಗೆ ಹೈಕೋರ್ಟ್‌ ಅನುಮತಿ ನೀಡಿದೆ. ಆದರೆ, ನೇಮಕಾತಿ ವಿಚಾರವು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಮಧ್ಯಂತರ ಆದೇಶ ಮಾಡಿದೆ.

ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿಅನುಸಾರ ನೇಮಕಾತಿ ಆದೇಶ ನೀಡಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕೆ.ಆರ್‌.ಯೋಗೀಶ ಮತ್ತಿತರರು ಅರ್ಜಿ ಸಲ್ಲಿಸಿದರು. ಅದರ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶ ಮಾಡಿದೆ. ಅಲ್ಲದೆ, ನೇಮಕಾತಿ ಆದೇಶ ವಿತರಿಸಿದರೆ, ಅದರಲ್ಲಿ ಈ ವಿಚಾರ ಉಲ್ಲೇಖಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

Tap to resize

Latest Videos

undefined

ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ; ಅಭ್ಯರ್ಥಿಗಳಿಗೆ ಮಹತ್ವದ ಸೂಚನೆಗಳು ...

2015ರ ಮೇ 8ರಂದು ರಾಜ್ಯ ಪಿಯು ಕಾಲೇಜುಗಳಲ್ಲಿ ಖಾಲಿಯಿದ್ದ ಒಟ್ಟು 1,203 ಉಪನ್ಯಾಸಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಕೆಇಎ ಅಧಿಸೂಚನೆ ಹೊರಡಿಸಿತ್ತು. 2018ರ ನವಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ಪರೀಕ್ಷೆ ನಡೆದು, 2019ರ ಆಗಸ್ಟ್‌ 26ರಂದು ಸಂಭ್ಯಾವ ಆಯ್ಕೆ ಪಟ್ಟಿಪ್ರಕಟಿಸಲಾಗಿತ್ತು. 2019ರ ಅ.15ರಂದು ಕನ್ನಡ ಮತ್ತು ಇತರ 18 ವಿಷಯಗಳ ಸಂಬಂಧ ಹಾಗೂ 2019ರ ಅ.25ರಂದು ರಾಜ್ಯಶಾಸ್ತ್ರ ಹಾಗೂ ಇತಿಹಾಸ ವಿಷಯಗಳ ಸಂಬಂಧ ಅಂತಿಮ ಆಯ್ಕೆ ಪಟ್ಟಿಪ್ರಕಟಿಸಿತ್ತು.ಈ ಆಯ್ಕೆ ಪಟ್ಟಿಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

click me!