ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಶಿಕ್ಷಣ ಇಲಾಖೆ ಸಕಲ ಸಿದ್ಧತೆ

By Ravi Janekal  |  First Published Mar 30, 2023, 3:41 PM IST

ರಾಜ್ಯಾದ್ಯಂತ ನಾಳೆಯಿಂದ  SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.


ಬೆಂಗಳೂರು (ಮಾ.30) : ರಾಜ್ಯಾದ್ಯಂತ ನಾಳೆಯಿಂದ  SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆಯಿಂದ- ಏಪ್ರಿಲ್ 15ವರೆಗೆ SSLC ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳಲ್ಲಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಸರ್ಕಾರಿ ವಿದ್ಯಾರ್ಥಿಗಳು 7,94,611, ಪುನರಾವರ್ತಿತ ವಿದ್ಯಾರ್ಥಿಗಳು 20,750, ಖಾಸಗಿ ಅಭ್ಯರ್ಥಿಗಳು 18,272, ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು:- 8,859, 2010 ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ಅಭ್ಯರ್ಥಿಗಳು 301, 2010 ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು 15 ಪರೀಕ್ಷೆಗೆ ನೋಂದಣಿಯಾಗಿರುವ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ. 

Tap to resize

Latest Videos

ಬೆಂಗಳೂರು SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ

ಬಿಗಿ ಪೊಲೀಸ್ ಬಂದೋಬಸ್ತ್: 

ಇನ್ನು ಭದ್ರತಾ ದೃಷ್ಟಿಯಿಂದ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಸಿಸಿ ಕ್ಯಾಮೆರಾ ಕಣ್ಗಾವಲು, ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಯ ಅವಧಿಯಲ್ಲಿ ಬಂದ್ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧ ಮಾಡಲಾಗಿದೆ.

ಉಚಿತ ಬಸ್ ಪಯಣ:

 ರಾಜ್ಯ ರಾಜಧಾನಿ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. 

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್, ಈ ಬಾರಿಯೂ 10 % ಗ್ರೇಸ್ ಮಾರ್ಕ್ಸ್! ಯಾವೆಲ್ಲ ವಿಷಯಕ್ಕೆ ಸಿಗಲಿದೆ?

SSLC ಪರೀಕ್ಷಾ ವೇಳಾಪಟ್ಟಿ

  • 31-03-2023 - ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್u (NCERT), ಸಂಸ್ಕೃತ
  • 04-04-2023 -ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ
  • 06-04-2023- ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ
  • 10-04-2023- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
  • 12-04-2023- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ
  • 15-04-2023 - ಸಮಾಜ ವಿಜ್ಞಾನ
     
click me!