ಎಸ್ಎಸ್ಎಲ್ಸಿ ಪರೀಕ್ಷೆಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು, (ಮಾ.03): ರಾಜ್ಯದಲ್ಲಿ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿವೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದ್ದು, ಬಹು ಆಯ್ಕೆಗಳ (ಮಲ್ಟಿಪಲ್ ಚಾಯ್ಸ್) ಪ್ರಶ್ನೆಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗಿದೆ.
SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರುತ್ತವೆ. ಆದ್ರೆ, ಎಸ್ಎಸ್ಎಲ್ಸಿ ಪರೀಕ್ಷೆ ಅಂಕಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಒಟ್ಟು ನೂರು ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯಪರೀಕ್ಷೆಯ ಅಂಕಗಳು ಇರುತ್ತವೆ. ಆದ್ರೆ, ಮುಖ್ಯಪರೀಕ್ಷೆಯ 80 ಅಂಕಗಳಲ್ಲಿ ಪ್ರತಿಬಾರಿ 20 ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತಿದ್ದವು. ಆದರೆ ಈ ಬಾರಿ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.