ಕೊರೋನಾ ಭೀತಿಯ ನಡುವೆ ಮಕ್ಕಳ ಮುಂದಿನ ಶೈಕ್ಷಣಿಕ ಹಿತದೃಷ್ಟಿಯಿಂದ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೇ ಇದೀಗ ಪರೀಕ್ಷೆಗಳ ಬಗ್ಗೆ ಸಚಿವರು ಮಹತ್ವದ ಮಾಹಿತಿ ಕೊಟ್ಟಿದ್ದಾರೆ.
ಬಾಗಲಕೋಟೆ, (ಜ.23): ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು (ಶನಿವಾರ) ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದರು.
undefined
ಖಾಸಗಿ ಶಾಲೆಗಳ ಫೀ ಕಿರಿಕಿರಿ : ಮಹತ್ವದ ಸಲಹೆ ಕೊಟ್ಟ ಸರ್ಕಾರ
ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಬೋಡ್೯ಗಳು ತೀಮಾ೯ನಿಸುತ್ತವೆ. ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ, ಕೋವಿಡ್ ಕಾರಣ ವಿನಾಯಿತಿ ನೀಡಿದೆ ಎಂದು ಮಾಹಿತಿ ನೀಡಿದರು.