ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌..!

By Kannadaprabha News  |  First Published Apr 4, 2023, 8:09 PM IST

ಗಣಿತ ಪರೀಕ್ಷೆ ಆರಂಭವಾಗುತ್ತಿದ್ದಂತೆ ಮೂರ್ನಾಲ್ಕು ಯುವಕರು ಪ್ರಶ್ನೆ ಪತ್ರಿಕೆಯ ಮೂಲಕ ಉತ್ತರ ಪತ್ರಿಕೆ ತಯಾರಿಸಿ, ಝರಾಕ್ಸ್‌ ಮಾಡಿಸಿ, ನಕಲು ಮಾಡಲು ವಿದ್ಯಾರ್ಥಿಗಳಿಗೆ ಹಂಚಿದ್ದಾರೆ ಎಂದು ವದಂತಿ. 


ಬೈಲಹೊಂಗಲ(ಏ.04): ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಟ್ಟಿಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಗಣಿತ ಪ್ರಶ್ನೆ ಪತ್ರಿಕೆ ಸೊರಿಕೆಯಾಗಿದೆ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡಿ ವೈರಲ್‌ ಆಗಿ ಅಧಿಕಾರಿಗಳನ್ನು ಚಿಂತೆಗೀಡು ಮಾಡಿತ್ತು.

ಗಣಿತ ಪರೀಕ್ಷೆ ಆರಂಭವಾಗುತ್ತಿದ್ದಂತೆ ಮೂರ್ನಾಲ್ಕು ಯುವಕರು ಪ್ರಶ್ನೆ ಪತ್ರಿಕೆಯ ಮೂಲಕ ಉತ್ತರ ಪತ್ರಿಕೆ ತಯಾರಿಸಿ, ಝರಾಕ್ಸ್‌ ಮಾಡಿಸಿ, ನಕಲು ಮಾಡಲು ವಿದ್ಯಾರ್ಥಿಗಳಿಗೆ ಹಂಚಿದ್ದಾರೆ ಎಂದು ವದಂತಿಯಾಗಿದೆ. ಈ ಕುರಿತು ಮೇಲಾಧಿಕಾರಿಗಳು ಹೆಚ್ಚಿನ ನಿಗಾವಹಿಸಿ ತನಿಖೆ ನಡೆಸಿ ಸತ್ಯಾಸತ್ಯಕ್ಕೆ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೊಂದು ಊಹಾಪೋಹವಷ್ಟೇ. ಎಲ್ಲಿಯೂ ಇಂತಹ ಘಟನೆ ನಡೆದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Tap to resize

Latest Videos

ದೀಪದ ಬೆಳಕಲ್ಲಿ ಓದುತ್ತಿರುವ ಆದಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು: ಪರೀಕ್ಷೆ ಬರೆಯಲು ಸಂಕಷ್ಟ

ನಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ರಶ್ನೆ ಪತ್ರಿಕೆ ಸೊರಿಕೆಯಾಗಿಲ್ಲ. ಇದೊಂದು ಉಹಾಪೋಹವಾಗಿದ್ದು, ನಾನೇ ಖುದ್ದಾಗಿ ಹಣಬರಟ್ಟಿಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಸತ್ಯಕ್ಕೆ ದೂರವಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗಬಾರದು ಅಂತ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್‌.ಪ್ಯಾಟಿ ತಿಳಿಸಿದ್ದಾರೆ.  

click me!