ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿ ಬಹಳ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಫಲಿತಾಂಶ ಭಾರೀ ಪ್ರಮಾಣದಲ್ಲಿ ಕುಸಿಯಲಿದೆ ಎನ್ನಲಾಗುತ್ತಿದೆ. ಕಳೆದ ಕೆಲ ವರ್ಷಗಳಿಂದ ಫಲಿತಾಂಶ ನಿರಂತರವಾಗಿ ಏರಿಕೆಯಾಗುತ್ತಿದೆ. 2022-23ನೇ ಸಾಲಿನಲ್ಲಿ ಶೇ.83.89 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ, ಈ ಬಾರಿ ಶೇ.10ರಷ್ಟು ಫಲಿತಾಂಶ ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರು(ಮೇ.09): ರಾಜ್ಯದ ಎಂಟೂವರೆ ಲಕ್ಷಕ್ಕೂ ಹೆಚ್ಚು ಮಕ್ಕಳು ನಿರೀಕ್ಷಿಸುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 'ಪರೀಕ್ಷೆ-1'ರ ಫಲಿತಾಂಶವನ್ನು ಮೇ.9ರ ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಹಾಗೂ ಮಂಡಳಿಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಕಿ ತಮ್ಮ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 1ಕ್ಕೆ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎದುರಿಸಿದ್ದರು.
undefined
ಪರೀಕ್ಷೆ ಕಟ್ಟುನಿಟ್ಟು: ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ?
ಫಲಿತಾಂಶ ಕುಸಿತ ಸಂಭವ?:
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿ ಬಹಳ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಫಲಿತಾಂಶ ಭಾರೀ ಪ್ರಮಾಣದಲ್ಲಿ ಕುಸಿಯಲಿದೆ ಎನ್ನಲಾಗುತ್ತಿದೆ. ಕಳೆದ ಕೆಲ ವರ್ಷಗಳಿಂದ ಫಲಿತಾಂಶ ನಿರಂತರವಾಗಿ ಏರಿಕೆಯಾಗುತ್ತಿದೆ. 2022-23ನೇ ಸಾಲಿನಲ್ಲಿ ಶೇ.83.89 ರಷ್ಟು ಫಲಿತಾಂಶ ದಾಖಲಾಗಿತ್ತು. ಆದರೆ, ಈ ಬಾರಿ ಶೇ.10ರಷ್ಟು ಫಲಿತಾಂಶ ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದರಲ್ಲೂ ಫಲಿತಾಂಶ ಉತ್ತಮಗೊಳಿಸುವ ದೃಷ್ಟಿಯಿಂದ ಸರ್ಕಾರ ಕೆಲ ವರ್ಷ ಗಳಿಂದ ಗರಿಷ್ಠ 3 ವಿಷಯಗಳಲ್ಲಿ ಕೆಲ ಅಂಕಗಳಿಂದ ಫೇಲಾಗುವ ಹಂತದಲ್ಲಿರುವವರಿಗೆ ಗರಿಷ್ಠ ಶೇ.10ರಷ್ಟು ಗ್ರೇಸ್ ಅಂಕ ನೀಡಿ ಪಾಸು ಮಾಡುವ ಪರಿಪಾಠ ನಡೆಸಿಕೊಂಡು ಬಂದಿದೆ. ಪ್ರತಿ ವರ್ಷ ಈ ರೀತಿ 30ರಿಂದ 40 ಸಾವಿರ ಮಕ್ಕಳು ಪಾಸಾಗುತ್ತಿದ್ದಾರೆ.