ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೊಠಡಿಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿ; ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವು

By Sathish Kumar KHFirst Published Mar 25, 2024, 8:02 PM IST
Highlights

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಪರೀಕ್ಷಾ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. 

ತುಮಕೂರು (ಮಾ.25): ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಪರೀಕ್ಷಾ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. 

ರಾಜ್ಯಾದ್ಯಂತ ಇಂದಿನಿಂದ ಕರ್ನಾಟಕ ಪ್ರೌಢಶಾಲಾ ವಿದ್ಯಾರ್ಥಿಗಳ (ಎಸ್‌ಎಸ್‌ಎಲ್‌ಸಿ) ಪರೀಕ್ಷೆಗಳು ಆರಂಭವಾಗಿವೆ. ಆದರೆ, ತುಮಕೂರು ಜಿಲ್ಲೆಯಲ್ಲಿ ಬೆಳಗ್ಗೆ ಪರೀಕ್ಷೆ ಬರೆಯಲು ಕೊಠಡಿಗೆ ಆಗಮಿಸಿದ ವಿದ್ಯಾರ್ಥಿ ಪರೀಕ್ಷೆ ಆರಂಭವಾದ ಕೆಲವೇ ಸಮಯದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ವಿದ್ಯಾರ್ಥಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿಯೇ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯುವ ರೂಲ್ಸ್ ತರುತ್ತಿದ್ದೆನು; ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್

ಮೃತ ವಿದ್ಯಾರ್ಥಿ ಮೋಹನ್ ಕುಮಾರ್ ಸಿ.ಎಸ್ (16) ಎಂಬಾತನಾಗಿದ್ದಾನೆ. ಇನ್ನು ಮೃತ ವಿದ್ಯಾರ್ಥಿ ಮೋಹನ್ ಕುಮಾರ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರನಾಗಿದ್ದು, ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದನು. ಆದರೆ, ಇಂದು ಬೆಳಗ್ಗೆ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದಾಗ ಈ ದುರ್ಘಟನೆ ನಡೆದಿದೆ.  

ಇಂದು ಬೆಳಗ್ಗೆ ಎಲ್ಲ ವಿದ್ಯಾರ್ಥಿಗಳಂತೆಯೇ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಬಂದ ವಿದ್ಯಾರ್ಥಿ ಮೋಹನ್ ಕುಮಾರ್ ಪರೀಕ್ಷೆ ಆರಂಭವಾಗಿ ಕೆಲವೇ ಸಮಯದಲ್ಲಿ ಕುಸಿದು ಬಿದ್ದಿದ್ದಾನೆ. ಇನ್ನು ಶಿಕ್ಷಕರು ಹಾಗೂ ಪರೀಕ್ಷಾ ಮೇಲ್ವಿಚಾರಕರು ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯುವುದನ್ನು ಬಿಡಿಸಿ ಆತನಿಗೆ ನೀರು ಕುಡಿಸಿ ಚೇತರಿಕೆ ಆಗುತ್ತಾನೆಯೇ ಎಂದು ಪ್ರಯತ್ನ ಮಾಡಿದ್ದಾರೆ. ಆದರೆ, ಈ ವೇಳೆ ತೀವ್ರ ಅಸ್ವಸ್ಥಗೊಂಡ ಮೋಹನ್ ಕುಮಾರನನ್ನು ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ವಿದ್ಯಾರ್ಥಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಆದರೆ, ತೀವ್ರ ಅಸ್ಪಸ್ಥಗೊಂಡ ಹಿನ್ನೆಲೆ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 8.69 ಲಕ್ಷ ವಿದ್ಯಾರ್ಥಿಗಳ ನೋಂದಣಿ, ಆಲ್‌ ದಿ ಬೆಸ್ಟ್‌!

ಇನ್ನು ವಿದ್ಯಾರ್ಥಿಯನ್ನು ಆತುರದಲ್ಲಿಯೇ ಆಂಬುಲೆನ್ಸ್‌ ಮೂಲಕ ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸುವ ದಾರಿ ಮಾರ್ಗದಲ್ಲಿಯೇ ವಿದ್ಯಾರ್ಥಿ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ನಂತರ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಇನ್ನು ಮೃತ ವಿದ್ಯಾರ್ಥಿಯ ಮೃತದೇಹ ಆಸ್ಪತ್ರೆಯಲ್ಲಿದ್ದು, ಪೋಷಕರಿಗೆ ಮಾಹಿತಿ ರವಾನಿಸಲಾಗಿದೆ.

click me!