SSLC Supplementary Exam: ಜೂ.27ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ

By Govindaraj S  |  First Published Jun 21, 2022, 5:00 AM IST

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಜೂ.27ರಿಂದ ಜು.4ರವರೆಗೆ ನಡೆಯಲಿದೆ.


ಬೆಂಗಳೂರು (ಜೂ.21): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಜೂ.27ರಿಂದ ಜು.4ರವರೆಗೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಿದೆ.

ವೇಳಾಪಟ್ಟಿ
ಜೂ. 27 (ಸೋಮವಾರ):
ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.

Tap to resize

Latest Videos

ಜೂ.28 (ಮಂಗಳವಾರ): ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ,ಮರಾಠಿ, ಉರ್ದು, ಇಂಗ್ಲಿಷ್‌, ಸಂಸ್ಕೃತ)

ಜೂ.29 (ಬುಧವಾರ): ದ್ವಿತೀಯ ಭಾಷೆ (ಇಂಗ್ಲಿಷ್‌,ಕನ್ನಡ)

ಜೂ.30 (ಗುರುವಾರ): ಸಮಾಜ ವಿಜ್ಞಾನ

ಜುಲೈ 1 (ಶುಕ್ರವಾರ): ತೃತೀಯ ಭಾಷೆ (ಹಿಂದಿ, ಕನ್ನಡ ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು); ಎನ್‌.ಎಸ್‌.ಕ್ಯೂ.ಎಫ್‌ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌)

ಜುಲೈ 2 (ಶನಿವಾರ): ಎಲಿಮೆಂಟ್‌ ಆಫ್‌ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌-2,ಇಂಜಿನಿಯರ್‌ ಗ್ರಾಫಿಕ್ಸ್‌-2, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌, ಎಲಿಮೆಂಟ್ಸ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌, ಅರ್ಥಶಾಸ್ತ್ರ

ಜುಲೈ 4 (ಸೋಮವಾರ): ಗಣಿತ, ಸಮಾಜ ಶಾಸ್ತ್ರ

ಕೊನೆಗೂ SSLC ಟಾಪರ್‌ಗೆ ಸಿಕ್ತು ಆಧಾರ್ ಕಾರ್ಡ್, ಬಸವಲೀಲಾಗೆ 'ಆಧಾರ'ವಾದ ಕೊಪ್ಪಳ ಜಿಲ್ಲಾಡಳಿತ

SSLCಯಲ್ಲಿ ಶೂನ್ಯ ಸಾಧನೆಗೈದ BBMP ಶಾಲೆಗಳ ಶಿಕ್ಷಕರ ವಜಾ: 2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ (SSLC Exam) ಶೇ.99.94 ರಷ್ಟು ಫಲಿತಾಂಶ ದಾಖಲಿಸಿದ ಬಳಿಕ ಈ ಸಾಲಿನಲ್ಲಿ ಬಿಬಿಎಂಪಿಯ ಶಿಕ್ಷಣ ಇಲಾಖೆಗೆ ದೊಡ್ಡ ಶಾಕ್ ಎದುರಾಗಿದ್ದು, ಪುರಸಭೆಯಿಂದ ನಿರ್ವಹಣೆಯಾಗುತ್ತಿರುವ ಶಾಲೆಗಳಲ್ಲಿ (School) ಫಲಿತಾಂಶ ತೀವ್ರ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಶೂನ್ಯ ಸಾಧನೆ ಮಾಡಿರುವ ಎರಡು ಶಾಲೆಗೆ ನೋಟಿಸ್ ನೀಡಲಾಗಿದ್ದು, ಶಿಕ್ಷಕರನ್ನು ವಜಾ ಮಾಡಲಾಗಿದೆ.

ಬಿಬಿಎಂಪಿ (BBMP) ಶಾಲೆಗಳು 2022ನೇ ಸಾಲಿನ ಎಸ್ಎಸ್  ಶೇ.71.27 ರಷ್ಟು ತೇರ್ಗಡೆ ಫಲಿತಾಂಶವನ್ನು ಹೊಂದಿದ್ದು, ತೀವ್ರ ಕುಸಿತ ಕಂಡಿದೆ.  ಜೊತೆಗೆ ಎರಡು ಶಿಕ್ಷಣ ಸಂಸ್ಥೆಗಳು  ಶೂನ್ಯ ಸಾಧನೆ ಮಾಡಿದ್ದು,  ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ಮರ್ಫಿ ಟೌನ್‌ನ 19 ವಿದ್ಯಾರ್ಥಿಗಳು ಮತ್ತು ಕೆ.ಜಿ.ನಗರದ  ಶಾಲೆಯ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. 2020 ರಲ್ಲಿ ಶೇ.50.16   2019ರಲ್ಲಿ ಶೇ.52  ಮತ್ತು 2018 ರಲ್ಲಿ ಶೇ. 51 ಫಲಿತಾಂಶವಿತ್ತು. ಆ ವರ್ಷಗಳಿಗೆ ಹೋಲಿಸಿದರೆ 2022 ರ ಉತ್ತೀರ್ಣ ಶೇಕಡಾವಾರು ಶೇಕಡಾ 71.27 ರಷ್ಟಿದೆ. ವಾಸ್ತವವಾಗಿ, ಕೆ ಜಿ ನಗರ ಶಾಲೆಯು 2020 ರ ನಂತರ ಎರಡನೇ ಬಾರಿಗೆ ಶೂನ್ಯ ಶೇಕಡಾವನ್ನು ಪಡೆದುಕೊಂಡಿದೆ. 

click me!