ಜೂ.12ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ, ವೇಳಾಪಟ್ಟಿಪ್ರಕಟ

By Ravi Janekal  |  First Published May 23, 2023, 9:05 AM IST

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಪ್ರಕಟಿಸಿದ್ದು, ಜೂನ್‌ 12ರಿಂದ 19ರವರೆಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. 


ಬೆಂಗಳೂರು (ಮೇ.23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಪ್ರಕಟಿಸಿದ್ದು, ಜೂನ್‌ 12ರಿಂದ 19ರವರೆಗೆ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. 

ಬಹುತೇಕ ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ನಡೆಯಲಿದೆ. ಜೂ.12- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌, ಸಂಸ್ಕೃತ), ಜೂ.13- ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಜೂ.14- ದ್ವಿತೀಯ ಭಾಷೆ (ಇಂಗ್ಲಿಷ್‌ ಮತ್ತು ಕನ್ನಡ), ಜೂ.15- ಸಮಾಜ ವಿಜ್ಞಾನ, ಜೂ.16- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು), ಜೂ.17- ಗಣಿತ

Tap to resize

Latest Videos

2022-23ನೇ ಸಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ  ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ

ಸಾಧನೆಗೆ ಬಡತನ ಅಡ್ಡಿಯೆಂಬುದು ಸುಳ್ಳು: ಗೌಂಡಿ ಕೆಲಸದಾತನ ಮಗಳಿಗೆ ಡಿಸ್ಟಿಂಕ್ಷನ್‌!

click me!