ಸೆ.28ಕ್ಕೆ ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ

Published : Sep 26, 2020, 06:43 PM IST
ಸೆ.28ಕ್ಕೆ ನಡೆಯಬೇಕಿದ್ದ SSLC ಪೂರಕ ಪರೀಕ್ಷೆ ಮುಂದೂಡಿಕೆ

ಸಾರಾಂಶ

 ಇದೇ ಸೆಪ್ಟೆಂಬರ್ 28ಕ್ಕೆ ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಮುಂದೂಡಿ ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು, (ಸೆ.26) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಮಸೂಧೆಗಳನ್ನು ವಿರೋಧಿಸಿ ಸೆಪ್ಟೆಂಬರ್ 28ಕ್ಕೆ ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂಡ್‌ಗೆ ಕರೆ ನೀಡಿವೆ. 

 ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು (ಶನಿವಾರ) ಸುತ್ತೋಲೆ ಹೊರಡಿಸಿದೆ.

ಭೂಸುಧಾರಣೆ ವಿಧೇಯಕ ಅಂಗೀಕಾರ, ಕೋರ್ಟ್‌ನಲ್ಲಿ ಕೃಷ್ಣ ಜನ್ಮಭೂಮಿ ವಿಚಾರ; ಸೆ.26ರ ಟಾಪ್ 10 ಸುದ್ದಿ! 

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ,  ಸೆ. 28ರಂದು ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ನಿಗದಿ ಪಡಿಸಲಾಗಿತ್ತು. 

ಆದ್ರೆ ಅಂದು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ. ಇತರೆ ಪರೀಕ್ಷೆಗಳು ನಿಗಧಿಯಂತೆ ನಡೆಯಲಿದೆ ಎಂದು ತಿಳಿಸಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ