SBIಬ್ಯಾಂಕಿನಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, ಅಪ್ಲೈ ಮಾಡಿ

By Suvarna News  |  First Published Oct 7, 2022, 3:16 PM IST

*ಸ್ಟೇಟ್‌ ಬ್ಯಾಂಕ್ ಇಂಡಿಯಾ ದೇಶದ ಬಹುದೊಡ್ಡ ಬ್ಯಾಂಕ್ ಆಗಿದೆ.
*ಎಸ್‌ಬಿಐ ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ
*ವಿದ್ಯಾರ್ಥಿಗಳಿಗೆ ವೇತನ ಒದಗಿಸಲು ಅರ್ಜಿ ಆಹ್ವಾನಿಸಿದೆ ಎಸ್‌ಬಿಐ


ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (State Bank of India) ಹಣಕಾಸು ವ್ಯವಹಾರದ ಜೊತೆಗೆ ಹಲವು ಸಮಾಜಸೇವೆ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅದರಲ್ಲೂ ಶೈಕ್ಷಣಿಕ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಎಸ್ಬಿಐ ಬ್ಯಾಂಕ್, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಎಸ್ಬಿಐ (SBI) ಬ್ಯಾಂಕ್, ಪ್ರಮುಖ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.  ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಲವು ವರ್ಷಗಳಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಸದ್ಯ ಎಸ್‌ಬಿಐ ಫೌಂಡೇಶನ್‌(SBI Foundation)ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನ ಆಹ್ವಾನಿಸಿದೆ. ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಕುಟುಂಬದ ವಾರ್ಷಿಕ ಆದಾಯ 3 ರೂ. ಲಕ್ಷಕ್ಕಿಂತ ಕಡಿಮೆ ಇರಬೇಕು. ಅಂತಹ ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.buddy4study.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು. ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು. ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು. 

Tap to resize

Latest Videos

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ, ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್), ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ, ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು, ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್), ವಿದ್ಯಾರ್ಥಿಗಳ ಇತ್ತೀಚಿನ ಫೋಟೋ ಸಲ್ಲಿಸಬೇಕು.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ www.buddy4study.com ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ವೆಬ್ಸೈಟ್ನ ಮುಖಪುಟದಲ್ಲಿ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಲಿಂಕ್‌ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದಾಗ ಮತ್ತೊಂದು ಪುಟ ತೆರೆಯುತ್ತದೆ. ಆ ಪುಟದಲ್ಲಿ ನಿಮ್ಮ ಹೆಸರು, ಮೊಬೈಲ್ ನಂಬರ್, ಇ-ಮೇಲ್ ಐಡಿ ಇತ್ಯಾದಿ ವಿವರಗಳನ್ನು ಸಲ್ಲಿಸಿ ರಿಜಿಸ್ಟರ್‌ ಮಾಡಿಕೊಳ್ಳಿ.ನಂತರ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ 2022 ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅಲ್ಲಿರುವ ಆನ್‌ಲೈನ್‌ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ. ಬಳಿಕ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯಲ್ಲಿ ನೀವು ಸಲ್ಲಿಸಿರುವ ಎಲ್ಲಾ ವಿವರಗಳು ಸರಿಯಾಗಿ ಇವೆಯೇ ಎಂದು ಒಮ್ಮೆ ಪರಿಶೀಲನೆ ಮಾಡಿಕೊಳ್ಳಿ.  ನಂತರ ಸಬ್ಮಿಟ್‌ ಬಟನ್‌ ಕ್ಲಿಕ್‌ ಮಾಡಿದ್ರೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಂತೆ.

ಅನುದಾನಿತ ಶಿಕ್ಷಕರ ಬೇಡಿಕೆ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ

ಎಸ್‌ಬಿಐ ದೇಶದ ಬಹುದೊಡ್ಡ ಸಾರ್ವಜನಿಕ ಬ್ಯಾಂಕ್ ಎನಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಇದರೊಂದಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದೆ. ವಿಶೇಷ ಶೈಕ್ಷಣಿಕ ಕ್ಷೇತ್ರವನ್ನು ಆದ್ಯೆತಯನ್ನಾಗಿಸಿಗೆ. ಈ ಮೂಲಕ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ.

click me!