ಸುರಪುರ: ಕುಸಿದು ಬಿದ್ದ ವಿದ್ಯಾರ್ಥಿನಿ, ಚಿಕಿತ್ಸೆ ಪಡೆದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಳು..!

By Kannadaprabha News  |  First Published Mar 28, 2024, 1:30 PM IST

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಗಿರೀಶ ನೇತೃತ್ವದ ತಂಡ ಬಾಲಕಿಗೆ ಸೂಕ್ತ ಚಿಕಿತ್ಸೆ ನೀಡಿದ ನಂತರ ಮತ್ತೆ ಬಾಲಕಿ ಪರೀಕ್ಷಾ ಕೇಂದ್ರಕ್ಕೆ ಮರಳಿ ಪರೀಕ್ಷೆ ಬರೆದಿದ್ದಾಳೆ. 


ಸುರಪುರ(ಮಾ.28): ಎಸ್‌ಎಸ್‌ಎಲ್‌ಸಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ಬರೆಯುತ್ತಿದ್ದಾಗಲೇ ಹಠಾತ್ ಕುಸಿದು ಬಿದ್ದ ವಿದ್ಯಾರ್ಥಿನಿಯಿಂದ ಕೆಲಕಾಲ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಸೃಷ್ಟಿಯಾದ ಪ್ರಸಂಗ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಬುಧವಾರ ನಡೆಯಿತು.

ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಮಾಜ ವಿಜ್ಞಾನ ಪರೀಕ್ಷೆ ಪ್ರಾರಂಭವಾದ ಕೆಲವೇ ಗಂಟೆಗಳಲ್ಲಿ ಭಾಗ್ಯ ಎಂಬುವ ವಿದ್ಯಾರ್ಥಿನಿ ತೀವ್ರ ತಾಪಮಾನದಿಂದ ಸ್ಥಳದಲ್ಲೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣವೆ ಕಾರ್ಯಪೃವೃತ್ತರಾದ ಪರೀಕ್ಷಾ ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆಮಾಡಿ ಅಂಬ್ಯುಲೆನ್ಸ್ ವಾಹನ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಗಿರೀಶ ನೇತೃತ್ವದ ತಂಡ ಬಾಲಕಿಗೆ ಸೂಕ್ತ ಚಿಕಿತ್ಸೆ ನೀಡಿದ ನಂತರ ಮತ್ತೆ ಬಾಲಕಿ ಪರೀಕ್ಷಾ ಕೇಂದ್ರಕ್ಕೆ ಮರಳಿ ಪರೀಕ್ಷೆ ಬರೆದಿದ್ದಾಳೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Latest Videos

undefined

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಹಾಯಕನಿಲ್ಲದೇ ಪರೀಕ್ಷೆ ಬರೆಯಲು ಅಸಹಾಯಕನಾದ ದಿವ್ಯಾಂಗ ವಿದ್ಯಾರ್ಥಿ

ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ಸಮಾಜ ವಿಜ್ಞಾನ ವಿಷಯ ಪರೀಕ್ಷೆಗೆ ತಾಲೂಕಿನಲ್ಲಿ 5739 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 5572 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. 226 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಯಾವುದೇ ಡಿಬಾರ್ ನಡೆದಿಲ್ಲ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

click me!