ಪಂಜ ಭಾಗದಿಂದ ಸುಬ್ರಹ್ಮಣ್ಯ ಖಾಸಗಿ ಕಾಲೇಜಿಗೆ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಧಾವಿಸಿದರು.
ಸುಬ್ರಹ್ಮಣ್ಯ(ಜು.25): ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಕಳೆದ ಎರಡು ದಿನಗಳಿಂದ ಜಲಾವೃತಗೊಂಡಿದೆ. ಸೋಮವಾರ ಪದವಿ ವಿದ್ಯಾರ್ಥಿಗಳು ಇಂಥ ವಿಷಮ ಪರಿಸ್ಥಿತಿಯಲ್ಲೂ ಪ್ರವಾಹದ ನೀರಿನಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಎದುರಾಯಿತು.
ಮಂಗಳೂರು ವಿಶ್ವವಿದ್ಯಾಲಯ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಬೆಳಗ್ಗೆ, ಮಧ್ಯಾಹ್ನ ಪರೀಕ್ಷೆಗಳು ನಡೆದು ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ಸುತ್ತು ಬಳಸಿ ಪ್ರವಾಹದಲ್ಲೆ ಮನೆ ಸೇರುವಂತಾಯಿತು.
undefined
ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕ ಕಡಿತ: ರಸ್ತೆ ಮೇಲೆ ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ
ಕೊಡಗು ಹೊರತುಪಡಿಸಿ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಇದ್ದರೂ ಪರೀಕ್ಷೆ ಮುಂದೂಡಿಕೆ ಆಗಿಲ್ಲ. ಪರಿಣಾಮ ಪಂಜ ಭಾಗದಿಂದ ಸುಬ್ರಹ್ಮಣ್ಯ ಖಾಸಗಿ ಕಾಲೇಜಿಗೆ ಪರೀಕ್ಷೆಗೆ ಹಾಜರಾಗಲು ಬರುವ ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲೇ ಸಂಚರಿಸಿ ಪರೀಕ್ಷಾ ಕೇಂದ್ರಗಳತ್ತ ಧಾವಿಸಿದರು. ಇದರ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಿ ಎಂಬ ಆಗ್ರಹವೂ ಪೋಷಕರಿಂದ ವ್ಯಕ್ತವಾಗಿದೆ.