
ಶಿವಮೊಗ್ಗ (ಜೂ.16) : ಸಾಗರದ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು ಘಟನೆ ಹಿನ್ನೆಲೆ ಜಿಲ್ಲೆಯಲ್ಲಿ ನಡೆಯುವ ಇಂತಹ ಘಟನೆಗಳನ್ನು ಸೂಕ್ಷ ್ಮವಾಗಿ ಅವಲೋಕಿಸಿ, ಸಕಾಲದಲ್ಲಿ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸೂಚಿಸಿದರರು. ಅಲ್ಲದೇ, ಈ ಘಟನೆಯ ವಾಸ್ತವಾಂಶ ಅರಿತು ಕ್ರಮ ಕೈಗೊಳ್ಳಲು ಕೂಡಲೆ ತನಿಖಾ ಸಮಿತಿ ರಚಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.
ಇತ್ತೀಚೆಗೆ ಸಾಗರ ತಾಲೂಕು ಕೇಂದ್ರದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಯ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಅಲ್ಲಿ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿವಿಧ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ, ಹಿರಿಯ ವೈದ್ಯ ಅರೆಸ್ಟ್
ಆಯೋಗದ ಸದಸ್ಯ ವೆಂಕಟೇಶ್ ಸಭೆಯಲ್ಲಿ ಮಾತನಾಡಿ, ಪ್ರಸ್ತುತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಠಿಯಿಂದ ಮಕ್ಕಳ ಪೋಷಕರ ಅನುಮತಿ ಪಡೆದು, ಸಮೀಪದ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ತಂಗಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರಿಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಆಡಳಿತ ಪ್ರತಿನಿಧಿಗಳೊಂದಿಗೆ ಈ ರೀತಿಯ ಅಹಿತಕರ ಘಟನೆಗಳಾಗದಂತೆ ಕ್ರಮ ವಹಿಸಲು ಶೀಘ್ರದಲ್ಲಿ ದಿನಾಂಕ ನಿಗದಿಪಡಿಸಿ ಸಭೆ ಆಯೋಜಿಸಬೇಕು. ಶಿಕ್ಷಕರಿಗೆ ಪೋಕ್ಸೋ ಮತ್ತು ಜೆ.ಜೆ. ಆ್ಯಕ್ಟ್ ಕುರಿತು ಮಾಹಿತಿ ಒದಗಿಸುವ ಅಗತ್ಯವಿದೆ. ಸದರಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಲ್ಲ ಮಕ್ಕಳ ಸ್ಥಿತಿಗತಿಗಳ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಶಾಲೆಗೆ ನೀಡಲಾದ ಮಾನ್ಯತೆ ರದ್ದು: ಡಿಸಿ
ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ವಿದ್ಯಾರ್ಥಿನಿ ಅಸಹಜ ಸಾವು ಘಟನೆಯ ನಂತರ ಸದರಿ ಶಾಲೆಗೆ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೇ ಈ ಘಟನೆಗೆ ಮುನ್ನವೇ ಜಿಲ್ಲೆಯಲ್ಲಿನ ಖಾಸಗಿ ವಸತಿ ಶಿಕ್ಷಣ ಸಂಸ್ಥೆಗಳ ಕುರಿತು ಗಮನಹರಿಸಲು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರಿಂದ ಕಾಲಕಾಲಕ್ಕೆ ಮಾಹಿತಿ ಪಡೆಯಲಾಗುತ್ತಿದೆ. ಪ್ರಸ್ತುತ ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಪರಿಹಾರಧನ ವಿತರಿಸಲಾಗುವುದು ಎಂದು ಹೇಳಿದರು.
Shivamogga: ಶಿಕ್ಷಣ ಸಂಸ್ಥೆ ಮುಖ್ಯಸ್ಥನಿಂದ ಲೈಂಗಿಕ ಕಿರುಕುಳ, ಆಸ್ಪತ್ರೆಗೆ ಸಾಗಿಸುವಾಗ ದಲಿತ ವಿದ್ಯಾರ್ಥಿನಿ ಸಾವು
ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು, ಡಾ. ತಿಪ್ಪೇಸ್ವಾಮಿ ಕೆ.ಟಿ., ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಾಗರಾಜ್ ನಾಯ್‌್ಕ, ಡಾ. ಮಲ್ಲಿಕಾರ್ಜುನ ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ, ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಶ್ರೀಮತಿ ಶೋಭಾ, ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷೆ ರೇಖಾ ಮತ್ತಿತರರು ಉಪಸ್ಥಿತರಿದ್ದರು.