ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ವಿದ್ಯಾರ್ಥಿ ವೇತನ ಬಿಡುಗಡೆಯಲ್ಲಿ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ, ಶೈಕ್ಷಣಿಕ ವಿರೋಧಿ ಅಷ್ಟೇ ಅಲ್ಲ ಯುವ ಜನಾಂಗದ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಿದೆ ಎಂದ ವಿದ್ಯಾರ್ಥಿಗಳು
ಭಾಲ್ಕಿ(ಡಿ.09): ವಿದ್ಯಾರ್ಥಿ ವೇತನ ಬಿಡುಗಡೆಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಗುರುವಾರ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಇಲ್ಲಿಯ ಬಿಕೆಐಟಿ ಆವರಣದಿಂದ ಯುವ ಮುಖಂಡ ಸಾಗರ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಾವಿರಾರು ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆ, ವೃತ್ತಗಳ ಮೂಲಕ ತಹಸೀಲ್ ಕಚೇರಿ ಆವರಣಕ್ಕೆ ತೆರಳಿ ಸಮಾವೇಶಗೊಂಡಿತು.
ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ವಿದ್ಯಾರ್ಥಿ ವೇತನ ಬಿಡುಗಡೆಯಲ್ಲಿ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ, ಶೈಕ್ಷಣಿಕ ವಿರೋಧಿ ಅಷ್ಟೇ ಅಲ್ಲ ಯುವ ಜನಾಂಗದ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಿದೆ ಎಂದರು.
undefined
ಬೆಂಗಳೂರು: ಶಿಕ್ಷಣ ಇಲಾಖೆ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ
ತಹಸೀಲ್ ಕಚೇರಿಯಲ್ಲಿ ನೆರೆದ ಬೃಹತ್ ಪ್ರತಿಭಟನೆಯಲ್ಲಿ ಯುವ ಮುಖಂಡ ಸಾಗರ ಖಂಡ್ರೆ ಮಾತನಾಡಿ, ಕಳೆದ ಹಲವು ವರ್ಷಗಳ ಹಿಂದೆ ಬಿಇ, ಎಂಸಿಎ, ಬಿ ಫಾಮ್‌ರ್, ಪದವಿ ಇತ್ಯಾದಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಯಾವುದೇ ತಾರತಮ್ಯ ಇಲ್ಲದೇ ವಿದ್ಯಾರ್ಥಿ ವೇತನ ನೀಡುತ್ತಿತ್ತು. ಆದರೆ, ಕಳೆದ ಶೈಕ್ಷಣಿಕ ವರ್ಷದಿಂದ ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯ ಬಿಜೆಪಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿಲ್ಲ. ಶಿಕ್ಷಣ ಮುಂದುವರಿಸಲು ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಬಡ ಕುಟುಂಬಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸಿಗದೇ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ಓದು ಅರ್ಧಕ್ಕೆ ನಿಲ್ಲುವ ಆತಂಕ ಎದುರಾಗಿದೆ ಎಂದು ಸಾಗರ್ ಖಂಡ್ರೆ ಆತಂಕ ವ್ಯಕ್ತಪಡಿಸಿದರು.
ಕೂಡಲೇ ಸರ್ಕಾರ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಸರೆ ಆಗಿರುವ ಬಾಕಿ ಇರುವ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಬರೆದ ಮನವಿ ತಹಸಿಲ್ದಾರ್‌ಗೆ ಸಲ್ಲಿಸಿದರು.