BCWD NEET JEE Pre Examination Coaching 2022: ಉಚಿತ ನೀಟ್‌, ಜೆಇಇ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Suvarna News  |  First Published Jan 6, 2022, 12:13 PM IST

2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ ನೀಟ್ ಹಾಗೂ ಜೆಇಇ   ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಬೆಂಗಳೂರು(ಜ.6): 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ ನೀಟ್ ಹಾಗೂ ಜೆಇಇ (ಮೈನ್ಸ್ ಮತ್ತು ಅಡ್ವಾನ್ಸ್ಡ್) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ/10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ನಲ್ಲಿ  ಜನವರಿ 23, 2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸದರಿ ಪರೀಕ್ಷಾ ಪೂರ್ವ ತರಬೇತಿಗಳಿಗೆ ಸಂಬಂಧಪಟ್ಟಂತೆ ನೀಟ್ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರು ನಗರದ ಮಲ್ಲೇಶ್ವರಂ ಹಾಗೂ ಯಲಹಂಕ ಮತ್ತು ಜೆಇಇ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರು ನಗರ ಜಿಲ್ಲೆಯ ವಿಜಯನಗರ ಇಲ್ಲಿ ನೀಡಲಾಗುತ್ತದೆ. ಅಭ್ಯರ್ಥಿಗಳು ತರಬೇತಿಗೆ ನಿಯಮಿತವಾಗಿ ಹಾಜರಾಗಬೇಕು. ಸರ್ಕಾರ ನೀಡುವ ನಿರ್ದೇಶನದಂತೆ ಸದರಿ ಕೋಚಿಂಗ್ ಅನ್ನು ಕ್ಲಾಸ್ ರೂಂ (ಆಫ್‌ಲೈನ್) ಅಥವಾ ಆನ್‌ಲೈನ್ ಮೂಲಕ ನೀಡಲಾಗುವುದು.

Tap to resize

Latest Videos

undefined

ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳಾದ ಹೆಸರು, ವಿಳಾಸ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ವಿಳಾಸ, ಶೈಕ್ಷಣಿಕ ದಾಖಲೆ, ಪಿಯುಸಿಯಲ್ಲಿ ಓದುತ್ತಿರುವ (ಅಡ್ಮಿಷನ್‌ ಪಡೆದಿರುವ) ಕುರಿತು ದಾಖಲೆಯನ್ನು ಸಬ್‌ಮಿಟ್‌ ಮಾಡಬೇಕು.

CCI RECRUITMENT 2022: ಭಾರತೀಯ ಸ್ಪರ್ಧಾ ಆಯೋಗದಲ್ಲಿ 2 ಲಕ್ಷದವರೆಗೆ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಮಾನದಂಡ ಹೀಗಿದೆ:
-ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಯಿಸಲಾಗಿರಬೇಕು.
-ಕರ್ನಾಟಕ ಸರ್ಕಾರ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಯ ಕೆಟಗರಿಗೆ ಸೇರಿರಬೇಕು.
-ಅಭ್ಯರ್ಥಿಯ ಕುಟುಂಬದ  ವಾರ್ಷಿಕ ಆದಾಯ  ರೂ.6 ಲಕ್ಷಕ್ಕಿಂತ ಹೆಚ್ಚಿರಬಾರದು.
-ಸದರಿ ಪರೀಕ್ಷಾ ಪೂರ್ವ ತರಬೇತಿಗಳನ್ನು ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ/10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಮಾತ್ರವಲ್ಲ 10ನೇ ತರಗತಿಯಲ್ಲಿ ಅರ್ಭಯರ್ಥಿಯು ಗಳಿಸಿರುವ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
-ಸದರಿ ಪರೀಕ್ಷಾ ಪೂರ್ವ ತರಬೇತಿಯನ್ನು ಖಾಸಗಿ ಸಂಸ್ಥೆಗಳ ಮೂಲಕ ನೀಡಲಾಗುವುದು. ತರಬೇತಿಯು ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಇತರೆ ಯಾವುದೇ ಭತ್ಯೆ ಕೊಡಲಾಗುವುದಿಲ್ಲ.
-ತರಬೇತಿಯು ಉಚಿತವಾಗಿದ್ದು ವಿದ್ಯಾರ್ಥಿಗಳ ಶುಲ್ಕವನ್ನು ಹಿಂದುಳಿದ ವರ್ಗಗಳ ಇಲಾಖೆಯಿಂದ ಪಾವತಿಸಲಾಗುವುದು.
-ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು. ಬೇರೆ ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಮತ್ತು ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. 

Delhi IIT STEM Mentorship: ಹುಡುಗಿಯರಿಗೆ ಸ್ಟೆಮ್ ಮೆಂಟರ್‌ಶಿಪ್ ಆರಂಭಿಸಿದ ದೆಹ

ಪ್ರೋತ್ಸಾಹಧನಕ್ಕಾಗಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ SC/ST ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ರೂ.35,000 ವರೆಗೆ ಪ್ರೋತ್ಸಾಹಧನ ನೀಡುವುದಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪ್ರೋತ್ಸಾಹಧನಕ್ಕಾಗಿ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ  ಅರ್ಜಿ ಸಲ್ಲಿಸ ಬಹುದಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ಜನವರಿ 30,2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ.

ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್‌ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು.ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

click me!