ಸೃಜನಶೀಲತೆ, ಬೆಳೆಯಲು ವಿದ್ಯಾರ್ಥಿಗಳು ಕಲೆ ಸಾಹಿತ್ಯ, ವಿಜ್ಞಾನ ಸೇರಿದಂತೆ ಉತ್ತಮ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ.
ದೇವನಹಳ್ಳಿ (ಆ.17): ಸೃಜನಶೀಲತೆ, ಬೆಳೆಯಲು ವಿದ್ಯಾರ್ಥಿಗಳು ಕಲೆ ಸಾಹಿತ್ಯ, ವಿಜ್ಞಾನ ಸೇರಿದಂತೆ ಉತ್ತಮ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿಂದು ಜಿಲ್ಲೆಯಾದ್ಯಂತ ಶಾಲೆಯ ವಿದ್ಯಾರ್ಥಿಗಳಿಗೆ 'ಉಚಿತ ಪುಸ್ತಕ ವಿತರಣಾ' ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ನಡೆದ 'ಜ್ಞಾನವೃಕ್ಷ - ನಮ್ಮ ಒಂದು ಪುಸ್ತಕದ ಕೊಡುಗೆ ನಮ್ಮ ಮಕ್ಕಳ ಜ್ಞಾನದ ಹಾದಿಗೆ' ಎಂಬ ಅಭಿಯಾನದಡಿ ಅಧಿಕಾರಿಗಳು, ಸಿಬ್ಬಂದಿಗಳು, ದಾನಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಇಲಾಖೆ ವತಿಯಿಂದ ಸಂಗ್ರಹವಾದ ಗ್ರಂಥಗಳು, ಪುಸ್ತಕಗಳನ್ನು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ಉಚಿತ ಪುಸ್ತಕಗಳನ್ನು ಶಾಲಾ-ಕಾಲೇಜುಗಳ ಗ್ರಂಥಾಲಯದಲ್ಲಿರಿಸಿ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಬೇಕು ಎಂದು ಶಾಲಾ ಶಿಕ್ಷಕರಿಗೆ ತಿಳಿಸಿದರು.
undefined
Koppal; ಸೌಟು ಹಿಡಿಯಲು ಸೈ, ಸ್ಟೇರಿಂಗ್ ಹಿಡಿಯಲು ಸೈ
ಹಾಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಟ್ಟ ಪುಸ್ತಕಗಳನ್ನು ಸರಿಯಾಗಿ ಸದುಯೋಗಪಡಿಸಿಕೊಂಡು ಅಭ್ಯಾಸ ಮಾಡಿ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಲ್ಕು ಸಾವಿರ ಪುಸ್ತಕಗಳನ್ನು ಕೊಡುವ ಗುರಿ ಹೊಂದಿದೆ. ಇಂದು ಈ ಶಾಲೆಗೆ 400 ಪುಸ್ತಕಗಳನ್ನು ನೀಡಲಾಗುತ್ತಿದೆ.
ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ನೀಡುವ ಮೂಲಕ ವಿದ್ಯಾರ್ಥಿ ಸಮುದಾಯದಲ್ಲಿ ಜ್ಞಾನಾರ್ಜನೆ ವೃದ್ಧಿಸಬೇಕೆಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಕೊಟ್ಟ ಪುಸ್ತಕಗಳನ್ನು ಸರಿಯಾಗಿ ಸದುಯೋಗಪಡಿಸಿಕೊಂಡು ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ಶಾಲೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ, ವಿಶ್ವನಾಥಪುರ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು, ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉತ್ತಮವಾಗಿ ಓದಿ ಶಾಲೆಗೆ ಹೆಸರು ತನ್ನಿ: ಉತ್ತರ ಕರ್ನಾಟಕದಲ್ಲಿ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘವು ಬೆಳೆದಿದ್ದು, ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಅನೇಕ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇದ್ದಾರೆ ಎಂದು ಬಾಗಲಕೋಟೆಯ ಬಾಲಿಕೆಯರ ಪ್ರೌಢ ಶಾಲೆಯ ಮುಖೋಪಾಧ್ಯಾಯ ಡಿ.ವಿ. ಶಿಕ್ಕೇರಿ ಹೇಳಿದರು. ಸ್ಥಳೀಯ ಬಾಲಿಕೆಯರ ನೂತನ ಪ್ರೌಢ ಶಾಲೆಯಲ್ಲಿ ಬೀಳೂರು ಮಹಾಸ್ವಾಮಿಗಳ ಶ್ರಾವಣ ಮಾಸದ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪೆರ್ಡೂರು ಅನಂತಪದ್ಮನಾಭ ಸನ್ನಿಧಿಯಲ್ಲಿ ಶ್ರಾವಣದ ನವದಂಪತಿಗಳ ಜಾತ್ರೆ
ಕಲಿತ ಶಾಲೆ ಮತ್ತು ಸಂಸ್ಥೆಯ ಹೆಸರು ಉಳಿಸಲು ಸತತ ಶ್ರಮವಹಿಸಿ ಅಧ್ಯಯನ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬಾಗಲಕೋಟೆಯ ಬಾಲಿಕೆಯರ ಪ್ರೌಢ ಶಾಲೆಯ ಸಹ ಶಿಕ್ಷಕ ಬಿ.ಎಸ್. ನರೇಗಲ್ಲ, ಟಿಟಿಡಿ ಸಂಚಾಲಕ ವಿಜಯೇಂದ್ರ ಜೋಶಿ ವೇದಿಕೆಯಲ್ಲಿದ್ದರು. ಶಾಲೆಯ ಮುಖ್ಯಾಧ್ಯಾಪಕ ಎಸ್.ಡಿ. ಚವ್ಹಾಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಕ ಆರ್.ಜಿ. ಕಮ್ಮಾರ ಸ್ವಾಗತಿಸಿದರು. ಎಸ್.ವಿ. ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಆರ್.ಎಸ್. ಬಾಗೇವಾಡಿ ವಂದಿಸಿದರು.