ಸಿಇಟಿ ಪರೀಕ್ಷೆ ಸಮಸ್ಯೆಯ ಬಗ್ಗೆ ಸರ್ಕಾರಕ್ಕೆ ತಜ್ಞರ ವರದಿ ಸಲ್ಲಿಕೆ

By Kannadaprabha NewsFirst Published Apr 28, 2024, 11:46 AM IST
Highlights

ಎಂಜಿನಿಯರಿಂಗ್‌ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆನಡೆಸುವಸಾಮಾನ್ಯ ಪ್ರವೇಶಪರೀಕ್ಷೆಯಲ್ಲಿ (ಸಿಇಟಿ) ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿರುವ ಕುರಿತು ಪರಿಶೀಲನೆ ನಡೆಸಲು ರಚಿಸಲಾಗಿದ್ದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. 

ಬೆಂಗಳೂರು (ಏ.28): ಎಂಜಿನಿಯರಿಂಗ್‌ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿರುವ ಕುರಿತು ಪರಿಶೀಲನೆ ನಡೆಸಲು ರಚಿಸಲಾಗಿದ್ದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿ ಆಧರಿಸಿ ಸರ್ಕಾರ ಸೋಮವಾರ ಅಥವಾ ಮಂಗಳವಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎನ್ನಲಾಗಿದೆ. ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಸಮಿತಿ ಪತ್ತೆ ಮಾಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತದೆ. ಆದರೆ, ಗ್ರೇಸ್ ಅಂಕಗಳನ್ನು ನೀಡಬೇಕೋ ಅಥವಾ ಮರು ಪರೀಕ್ಷೆ ನಡೆಸಬೇಕೋ ಎನ್ನುವುದು ಸರ್ಕಾರದ ನಿರ್ಧಾರಕ್ಕೆ ಬಿಡಲಾಗುತ್ತದೆ.

ಏ.18 ಮತ್ತು 19ರಂದು ನಾಲ್ಕು ಪತ್ರಿಕೆಗಳಿಗೆ ಪರೀಕ್ಷೆ ನಡೆದಿತ್ತು. ನಾಲ್ಕು ಪತ್ರಿಕೆಗಳು ಸೇರಿ ಪಠ್ಯದಲ್ಲಿ ಇಲ್ಲದ ಸುಮಾರು 50 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ವಿದ್ಯಾರ್ಥಿಗಳು, ಉಪನ್ಯಾಸಕರು ಆರೋಪಿಸಿದರು.ಪದವಿ ಪೂರ್ಣ ಶಿಕ್ಷಣ ಇಲಾಖೆ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದಲ್ಲಿನ ಪ್ರಶ್ನೆಗಳನ್ನು ಕೇಳಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಲು ಸರ್ಕಾರ ಸಮಿತಿ ರಚಿಸಿತ್ತು. ಪರಿಶೀಲನೆ ನಡೆಸಿರುವ ಸಮಿತಿ, ಗುರುವಾರ ವರದಿ ಸಲ್ಲಿಸಿದೆ.

ಗುಲಾಬಿ ನಮ್ಮ ಮೆಟ್ರೋ ಮಾರ್ಗ ಸುರಂಗ 95% ರೆಡಿ: ಬಿಎಂಆರ್‌ಸಿಎಲ್

ಯಾವ ನಿರ್ಧಾರ ಕೈಗೊಂಡರು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ ಪಿಯು ಕಾಲೇಜಿನ ಹಿರಿಯ ಉಪನ್ಯಾಸಕರೊಬ್ಬರು, ಕಾಲೇಜುಗಳಿಗೆ ಪ್ರವೇಶ ಪಡೆಯಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ನಿಯಮ ಇಲ್ಲ. ಆದರೆ, ಸರ್ಕಾರದ ಮಟ್ಟದಲ್ಲಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವಕಾಶ ಇರುತ್ತದೆ ಎಂದು ಹೇಳಿದರು. ಪ್ರಶ್ನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಶನಿವಾರದವರೆಗೆ ಕಾಲಾವಕಾಶ ನೀಡಲಾಗಿತ್ತು.700ಕ್ಕೂಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

click me!