CBSE 12ನೇ ಕ್ಲಾಸ್ ಪರೀಕ್ಷೆ ರದ್ದು ಬೆನ್ನಲ್ಲೇ ಪಿಯುಸಿ ಎಕ್ಸಾಂ ಬಗ್ಗೆ ಪ್ರತಿಕ್ರಿಯಿಸಿದ ಸಚಿವ

Published : Jun 01, 2021, 09:53 PM ISTUpdated : Jun 01, 2021, 09:55 PM IST
CBSE 12ನೇ ಕ್ಲಾಸ್ ಪರೀಕ್ಷೆ ರದ್ದು ಬೆನ್ನಲ್ಲೇ  ಪಿಯುಸಿ ಎಕ್ಸಾಂ ಬಗ್ಗೆ ಪ್ರತಿಕ್ರಿಯಿಸಿದ ಸಚಿವ

ಸಾರಾಂಶ

* ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಧ್ಯಮ ಹೇಳಿಕೆ ಬಿಡುಗಡೆ * ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ಸುರೇಶ್ ಪ್ರತಿಕ್ರಿಯೆ * ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ 

ಬೆಂಗಳೂರು, (ಮೇ.01): ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನು ಈ ಬಗ್ಗೆ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ರದ್ದು ಮಾಡಿದ್ದು, ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳನ್ನು ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಎಂದು ಸ್ಪಷ್ಟಪಡಿಸಿದರು.

CBSE 12ನೇ ಕ್ಲಾಸ್ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಆರೋಗ್ಯವೇ ಮುಖ್ಯ ಎಂದ ಪ್ರಧಾನಿ!

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಈ ರೀತಿ ತಿಳಿಸಿದ್ದಾರೆ.

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನ ರದ್ದು ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ 10 ಹಾಗೂ 12ನೇ ಕ್ಲಾಸ್ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಲಾಗಿದೆ.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ