ತಮಿಳುನಾಡಿನ ಮಧುರೈ ಸರ್ಕಾರಿ ವೈದ್ಯಕೀಯ ಕಾಲೇಜಿನ ಹೊಸ ವಿದ್ಯಾರ್ಥಿಗಳಿಗೆ ಹಿಪ್ಪೊಕ್ರಾಟಿಕ್ ಶಪಥ ಬದಲು ‘ಮಹರ್ಷಿ ಚರಕ ಶಪಥ’ವನ್ನು ಭೋದಿಸಿದ ಕಾರಣಕ್ಕಾಗಿ ಕಾಲೇಜಿನ ಡೀನ್ ಡಾ.ಎ.ರಥಿನಾವೇಲ್ ಅವರನ್ನು ಹುದ್ದೆಯಿಂದ ತೆಗೆದುಹಾಕಿ ವೇಟಿಂಗ್ ಲಿಸ್ಟ್‌ನಲ್ಲಿ ಇರಿಸಲಾಗಿದೆ.
ಚೆನ್ನೈ (ಮೇ.02): ತಮಿಳುನಾಡಿನ (Tamil Nadu) ಮಧುರೈ ಸರ್ಕಾರಿ ವೈದ್ಯಕೀಯ ಕಾಲೇಜಿನ (Madurai Medical College) ಹೊಸ ವಿದ್ಯಾರ್ಥಿಗಳಿಗೆ (Students) ಹಿಪ್ಪೊಕ್ರಾಟಿಕ್ ಶಪಥ ಬದಲು ‘ಮಹರ್ಷಿ ಚರಕ ಶಪಥ’ವನ್ನು (Maharshi Charak Shapath) ಭೋದಿಸಿದ ಕಾರಣಕ್ಕಾಗಿ ಕಾಲೇಜಿನ ಡೀನ್ ಡಾ.ಎ.ರಥಿನಾವೇಲ್ (Dr A Rathinavel) ಅವರನ್ನು ಹುದ್ದೆಯಿಂದ ತೆಗೆದುಹಾಕಿ ವೇಟಿಂಗ್ ಲಿಸ್ಟ್‌ನಲ್ಲಿ ಇರಿಸಲಾಗಿದೆ.
ಜೊತೆಗೆ, ಕಾಲೇಜು ನಿಯಮವನ್ನು ಉಲ್ಲಂಘಿಸಿದ್ದಲ್ಲದೇ, ಎಲ್ಲ ವಿದ್ಯಾರ್ಥಿಗಳಿಗೂ ಚರಕ ಶಪಥ ಮಾಡುವಂತೆ ಒತ್ತಾಯಿಸಿದ್ದಕ್ಕಾಗಿ ಸರ್ಕಾರವು ಇದರ ವಿರುದ್ಧ ಇಲಾಖಾ ವಿಚಾರಣೆ ಕೈಗೊಳ್ಳಲು ಭಾನುವಾರ ಆದೇಶ ನೀಡಿದೆ. ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಿಪ್ಪೊಕ್ರಾಟಿಕ್ ಶಪಥವನ್ನೇ ಬೋಧಿಸಬೇಕು ಗೃಹ ಸಚಿವ ಮಾ ಸುಬ್ರಮಣಿಯನ್ ಆದೇಶ ನೀಡಿದ್ದಾರೆ. ನಡುವೆ ಸಂಸ್ಕೃತದಲ್ಲಿ ಶಪಥ ಸ್ವೀಕರಿಸಿದ್ದಕ್ಕೆ ರಾಜ್ಯದ ಹಣಕಾಸು ಸಚಿವ ಪಳನಿವೇಲ್ ಥೈಗರಾಜನ್ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೇಲಿ ದಾಟಲು ಮರಿಗೆ ಸಹಾಯ ಮಾಡುತ್ತಿರುವ ಆನೆಗಳ ಹಿಂಡು: ವಿಡಿಯೋ ವೈರಲ್
ಇತ್ತೀಚೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವು ಸಾಮಾನ್ಯವಾಗಿ ಬಳಕೆಯಲ್ಲಿರುವ ಪ್ರಾಚೀನ ಗ್ರೀಕ್ ವೈದ್ಯ ಹಿಪ್ಪೊಕ್ರಾಟಿಕ್‌ನ ಶಪಥದ ಬದಲಾಗಿ ಪುರಾತನ ಭಾರತೀಯ ಆಯುರ್ವೇದ ಗ್ರಂಥ ಚರಕ ಸಂಹಿತೆಯ ಒಂದು ಭಾಗವನ್ನು ಚರಕ ಶಪಥವಾಗಿ ಹೊಸ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭೋದಿಸುವಂತೆ ಶಿಫಾರಸು ಮಾಡಿತ್ತು. ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಕೂಡಾ ಸಂಸತ್ತಿನಲ್ಲಿ ಮಹರ್ಷಿ ಚರಕ ಶಪಥವನ್ನು ಬೋಧನೆ ಮಾಡುವುದು ಐಚ್ಛಿಕವಾಗಿರುತ್ತದೆ. ಇದನ್ನು ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸುವಂತಿಲ್ಲ ಎಂದು ಹೇಳಿದ್ದರು.
ಪ್ರಕೃತಿ ಮಾತೆಗೂ ಜೀವಂತ ವ್ಯಕ್ತಿ ಸ್ಥಾನ ನೀಡಿದ ಮದ್ರಾಸ್ ಕೋರ್ಟ್: ಮಿತಿಮೀರಿದ ನಗರೀಕರಣ ಹಾಗೂ ಕೈಗಾರೀಕರಣದಿಂದಾಗಿ ನಿಸರ್ಗ ಹಾಳಾಗುತ್ತಿರುವಾಗಲೇ, ಪರಿಸರ ಸಂರಕ್ಷಣೆಗಾಗಿ ಮದ್ರಾಸ್ ಹೈಕೋರ್ಟ್ (Madras High Court) ಪ್ರಕೃತಿ (Nature) ಮಾತೆಯನ್ನು ಜೀವಂತ ವ್ಯಕ್ತಿ (Mother Nature) ಎಂದು ಘೋಷಣೆ ಮಾಡಿದೆ. ಜೀವಂತ ಮಾನವನಿಗೆ ಇರುವ ಎಲ್ಲ ಹಕ್ಕು, ಕರ್ತವ್ಯ ಹಾಗೂ ಹೊಣೆಗಾರಿಕೆಗಳೂ ಪ್ರಕೃತಿಗೆ ಇವೆ ಎಂದು ಹೇಳಿದೆ. ರಾಷ್ಟ್ರವೇ ಪೋಷಕ ಎಂಬ ತತ್ವದಡಿ ಉತ್ತರಾಖಂಡ ಹೈಕೋರ್ಟ್ ಗಂಗೋತ್ರಿ, ಯಮನೋತ್ರಿ ಸೇರಿದಂತೆ ಆ ರಾಜ್ಯದ ಎಲ್ಲ ನೀರ್ಗಲ್ಲುಗಳನ್ನು ಕಾನೂನುಬದ್ಧ ಸಂಸ್ಥೆಗಳು ಎಂದು ಪ್ರಕಟಿಸಿತ್ತು. ಅವುಗಳ ಸಂರಕ್ಷಣೆ ಉದ್ದೇಶದಿಂದ ಈ ಕ್ರಮ ಕೈಗೊಂಡಿತ್ತು.
Covid Crisis: ತಮಿಳುನಾಡು, ದಿಲ್ಲಿಯಲ್ಲಿ ಮತ್ತೆ ಕಠಿಣ ನಿರ್ಬಂಧ: ಮಾಸ್ಕ್ ಬಳಕೆ ಕಡ್ಡಾಯ
ಪ್ರಕರಣವೊಂದರ ವಿಚಾರಣೆ ವೇಳೆ ಮದುರೈ ಪೀಠದ ನ್ಯಾ ಎಸ್.ಶ್ರೀಮತಿ ಅವರು ಉತ್ತರಾಖಂಡ ಹೈಕೋರ್ಟ್ ಹೊರಡಿಸಿದ್ದ ತೀರ್ಪನ್ನು ಉಲ್ಲೇಖಿಸಿದರು. ಹಿಂದಿನ ತಲೆಮಾರುಗಳು ನಮಗೆ ಪ್ರಕೃತಿ ಮಾತೆಯನ್ನು ಶುದ್ಧ ರೂಪದಲ್ಲಿ ನೀಡಿವೆ. ಅದನ್ನು ನಮ್ಮ ಮುಂದಿನ ಪೀಳಿಗೆಗೂ ಹಸ್ತಾಂತರಿಸುವುದು ನೈತಿಕತೆ ಎಂದು ಹೇಳಿದರು. ಪ್ರಕೃತಿ ಮಾತೆಗೆ ಜೀವಂತ ವ್ಯಕ್ತಿ ಸ್ಥಾನ ನೀಡಲು ಇದು ಸಕಾಲ. ಪ್ರಕೃತಿ ಮಾತೆಗೆ ಜೀವಂತ ವ್ಯಕ್ತಿಯ ಸ್ಥಾನಮಾನ ನೀಡಲಾಗುತ್ತದೆ. ಉಳಿವು, ಸುರಕ್ಷತೆಗಾಗಿ ಬೇಕಾದ ಮೂಲಭೂತ/ಕಾನೂನು/ಸಾಂವಿಧಾನಿಕ ಹಕ್ಕುಗಳನ್ನೂ ನೀಡಲಾಗುತ್ತದೆ. ಪ್ರಕೃತಿ ಮಾತೆಯನ್ನು ಸಂರಕ್ಷಿಸಲು, ಸಾಧ್ಯವಿರುವ ಎಲ್ಲ ದಾರಿ ಬಳಸಿ ರಕ್ಷಣೆ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಲಾಗುತ್ತದೆ ಎಂದರು.