ಕರ್ನಾಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಟಾಸ್ಕ್ ಫೋರ್ಸ್ ವರದಿಯ ಮುಖ್ಯಾಂಶಗಳು

Published : Nov 30, 2020, 02:49 PM IST
ಕರ್ನಾಟದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಟಾಸ್ಕ್ ಫೋರ್ಸ್ ವರದಿಯ ಮುಖ್ಯಾಂಶಗಳು

ಸಾರಾಂಶ

ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಅದರ ಅನುಷ್ಠಾನ ಕುರಿತಂತೆ ದೇಶಾದ್ಯಂತ ವ್ಯಾಪಕ ಚರ್ಚೆ ಮತ್ತು ಸಂವಾದಗಳು ನಡೆಯುತ್ತಿವೆ. ಇದರ ಮಧ್ಯೆ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.

ಬೆಂಗಳೂರು, (ನ.30): ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಇಂದು (ಸೋಮವಾರ) ತನ್ನ ವರದಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿತು.

ಈ ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.

ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾವಣೆ: ಸರ್ಕಾರದ ಕೈ ಸೇರಿದ ವರದಿ

ಸಭೆಯಲ್ಲಿ ಮಾತನಾಡಿದ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚಚನಾ ಸಮಿತಿಯ ಸದಸ್ಯರು ಆದ ಪ್ರೊ. ಎಂ.ಕೆ. ಶ್ರೀಧರ್, 175 ವರ್ಷಗಳ ನಂತರ ಭಾರತ ಸರ್ಕಾರವು ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಿದೆ. ಈ ನೀತಿ ನಿರೂಪಣೆಯಲ್ಲಿ ಕರ್ನಾಟಕ ರಾಜ್ಯ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಹಾಗೂ ಸಮಾಜ ಹೆಚ್ಚಿನ ಒತ್ತು ನೀಡಬೇಕೆನ್ನುವುದು ಶಿಕ್ಷಣ ನೀತಿಯ ಆಶಯ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರಾದ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ, ವಾಸುದೇವ ಅತ್ರೆ, ಪ್ರೊ. ಅನುರಾಗ್ ಬೆಹರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 ಟಾಸ್ಕ್ ಫೋರ್ಸ್ ಶಿಫಾರಸುಗಳ ಮುಖ್ಯಾಂಶಗಳು:

 1. ಶಾಲಾ ಶಿಕ್ಷಣ
·* ಕೆಎಸ್‍ಎಸ್‍ಇಸಿ ಮತ್ತು ಎಸ್‍ಎಸ್‍ಎಸ್‍ಎ ಗಳು ಶಾಲೆಗಳ ನಿಯಂತ್ರಣ ಮತ್ತು ಕಾರ್ಯಾಚರಣೆಗಳ ಪ್ರತ್ಯೇಕತೆಯನ್ನು ಖಾತರಿ ಪಡಿಸಿಕೊಳ್ಳುವುದು.
·* ಡಿಎಸ್‍ಇಆರ್‍ಟಿ ಯನ್ನು ಪುನರ್ ರಚಿಸುವುದು. 
·* ಲಿಂಗಾಧಾರಿತ ಒಳಗೊಳ್ಳುವಿಕೆ ಮತ್ತು ದಿವ್ಯಾಂಗ ನಿಧಿಗಾಗಿ ಸಾಂಸ್ಥಿಕ ಸಾರ್ವಜನಿಕ ಜವಾಬ್ದಾರಿ (ಸಿಎಸ್‍ಆರ್) ಯಡಿಯಲ್ಲಿ ಹಣವನ್ನು ಆಕರ್ಷಿಸುವುದು.
*·ಸಾಕಷ್ಟು ಸಂಖ್ಯೆಯ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸುವುದು.
*·ಎಲ್ಲಾ ರೀತಿಯ ವಿದ್ಯಾರ್ಥಿವೇತನಗಳಿಗೆ ಏಕ ವೇದಿಕೆಯನ್ನು ರೂಪಿಸುವುದು. ಅದರೊಂದಿಗೆ ದಿವ್ಯಾಂಗ. ವಿದ್ಯಾರ್ಥಿವೇತನವನ್ನು ಸ್ಥಾಪಿಸುವುದು.

2. ಉನ್ನತ ಶಿಕ್ಷಣ
* ಹೊಸ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ಕೆಎಸ್‍ಯು) ಕಾಯ್ದೆಯನ್ನು ಜಾರಿಗೆ ತರುವುದು.

·* ಮತ್ತೊಂದು ಹೊಸ ಕಾಯಿದೆಯನ್ನು ಜಾರಿಗೆ ತಂದು ಅದರನ್ವಯ ಕರ್ನಾಟಕ ಉನ್ನತ ಶಿಕ್ಷಣ ಆಯೋಗವನ್ನು (ಕೆಹೆಚ್‍ಇಸಿ) ಸ್ಥಾಪಿಸಬೇಕು.

·* ವಿಶೇಷ ಶೈಕ್ಷಣಿಕ ವಲಯ ಗಳನ್ನು ಗುರುತಿಸಿ ಸ್ಥಾಪಿಸಬೇಕು.

* ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಗುಂಪುಗಳಿಗೆ (ಇಎಸ್‍ಡಿಜಿ) ಅನ್ವಯವಾಗುವ ಎಲ್ಲಾ ವಿದ್ಯಾರ್ಥಿವೇತನಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು.

* ಸಂಲಗ್ನಿತ (affiliated) ಅಂಗಸಂಸ್ಥೆಗಳು ಮತ್ತು ಸ್ವಾಯತ್ತ (autonomous) ಕಾಲೇಜುಗಳ ಶ್ರೇಣೀಕೃತ ಸಬಲೀಕರಣ ಪ್ರಕ್ರಿಯೆಗೆ ಚಾಲನೆ ನೀಡುವುದು.

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ