* ತರಗತಿಯಲ್ಲಿ ವಿವಾದ ಸೃಷ್ಟಿಸಿದ ಶಿಕ್ಷಕಿ ಅಮಾನತು
* ಬೆಂಗ್ಳೂರಿನ ಖಾಸಗಿ ಶಾಲೆಯಲ್ಲಿ ಗಲಾಟೆ
* ಶಿಕ್ಷಕಿಯನ್ನು ಅಮಾನತು ಮಾಡಿದ ಶಾಲಾ ಆಡಳಿತ ಮಂಡಳಿ
ಬೆಂಗಳೂರು, (ಫೆ.12): ಹಿಜಾಬ್ ವಿವಾದಕ್ಕೆ (Hijab Row) ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿ ಹೊತ್ತಿ ಉರಿಯುತ್ತಿದೆ. ಇದರ ಮಧ್ಯೆ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಗಲಾಟೆಯಾಗಿದೆ.
ಹೌದು... ಬೆಂಗಳೂರಿನ(Bengaluru) ಚಂದ್ರಲೇಔಟ್ನಲ್ಲಿರುವ ವಿದ್ಯಾಸಾಗರ್ ಶಾಲೆಯಲ್ಲಿ ಇಂದು(ಶನಿವಾರ) ಗಲಾಟೆ ನಡೆಡಿದ್ದು, ಈ ವಿಚಾರವಾಗಿ ಪಾಲಕರು ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿದು ಶಾಲೆಗೆ ಶಾಲೆಗೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.
undefined
Hijab Row : ಸರ್ಕಾರದ ಸುರಕ್ಷಾತ್ಮಕ ತಂತ್ರ, ಮತ್ತೆ 3 ದಿನ ಕಾಲೇಜಿಗೆ ರಜೆ
ಶಾಲಾ ಶಿಕ್ಷಕಿ ಒಬ್ಬರು ತರಗತಿ ಬೋರ್ಡ್ ಮೇಲೆ KLS ಎಂದು ಬರೆದು ನೀವೇ ಅರ್ಥ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಮತ್ತು 7ನೇ ತರಗತಿ ವಿದ್ಯಾರ್ಥಿಗೆ ಹಿಜಾಬ್ ತೆಗೆಯುವಂತೆ ಶಾಲೆಯಲ್ಲಿ ಶಿಕ್ಷಕಿ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ಆ ಶಾಲಾ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.
ಪರಿಸ್ಥಿತಿ ಮಿತಿ ಮಿರುತ್ತಿದ್ದನಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಉಪನಿರ್ದೇಶಕ ರಾಜೇಂದ್ರ ಶಾಲೆಗೆ ಭೇಟಿ ನೀಡಿ ಪಾಲಕರು ಮತ್ತು ಆಡಳಿತ ಮಂಡಳಿಯಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸ್ಥಳಕ್ಕೆ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮತ್ತು ಡಿಡಿಪಿಐ ಉಪ ನಿರ್ದೇಶಕರು ಬಂದಿದ್ದಾರೆ. ಸದ್ಯ ಪೋಷಕರ ಒತ್ತಾಯದ ಮೇರೆಗೆ ಶಿಕ್ಷಕಿ ಶಶಿಕಲಾರನ್ನು ಅಮಾನತುಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಯ ಮೂರು ಮಕ್ಕಳ ಇನಿಷಿಯಲ್ ಕೆಎಲ್‌ಎಸ್ ಎಂದು ಬರೆದಿದ್ದಾರೆ ಎಂದು ಪೋಷಕರು ಆಕ್ರೋಶ ಹೊರಹಾಕಲಾರಂಭಿಸಿದರು. ನಿನ್ನೆ ತರಗತಿಯಲ್ಲಿ ಏನು ನಡೆಯಿತು ಎಂದು ನನಗೆ ಗೊತ್ತಿರಲಿಲ್ಲ. ಇಂದು ಬಿಇಒ ಮತ್ತು ಡಿಡಿಪಿಐ ಬಂದು ಮಾತನಾಡಿದಾಗ ವಿಷಯ ಗೊತ್ತಾಯಿತು ನೀವು ಗಣಿತ ಶಿಕ್ಷಕಿಯಾಗಿ ನಿಮ್ಮ ಕಲಿಕೆಯ ವಿಷಯದ ಬಗ್ಗೆ ಮಾತ್ರ ಮಾತನಾಡಬೇಕು, ಬೇರೆ ಸೂಕ್ಷ್ಮ ವಿಚಾರಗಳನ್ನು ವಿದ್ಯಾರ್ಥಿಗಳ ಜೊತೆ ಮಾತನಾಡಬಾರದು ಎಂದು ಹೇಳಿ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದರು.
ಫೆ.16ರವರೆಗೂ ಕಾಲೇಜು ರಜೆ
ಹಿಜಾಬ್ (Hijab) ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ . ಸರ್ಕಾರ (Karnataka Govt) ಅಧಿಕೃತ ಆದೇಶವನ್ನು ನೀಡಿದ್ದು ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
ಉನ್ನತ`ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಹಿಜಾಬ್ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್ (Karnataka high Court ) ಬ್ರೇಕ್ ಹಾಕಿತ್ತು. ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ಆದೇಶ ನೀಡಿತ್ತು.ಅಲ್ಲದೇ ತಕ್ಷಣವೇ ಶಾಲೆ-ಕಾಲೇಜು ಪ್ರಾರಂಭಿಸಿ ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಆದರೆ ಸರ್ಕಾರ ಕಾಲೇಜು ಆರಂಭಕ್ಕೆ ಮುಂದಾಗಿಲ್ಲ.