English Medium: ಇಂಗ್ಲೀಷ್ ಮೀಡಿಯಂನಲ್ಲಿ ಓದುವ ಭಾಗ್ಯವಿಲ್ಲ ಎಂದು ಕೊರಗುವ ಮಕ್ಕಳ ನೆರವಿಗೆ ಸರ್ಕಾರ

Suvarna News   | Asianet News
Published : Jan 19, 2022, 11:49 PM ISTUpdated : Jan 19, 2022, 11:50 PM IST
English Medium: ಇಂಗ್ಲೀಷ್ ಮೀಡಿಯಂನಲ್ಲಿ ಓದುವ ಭಾಗ್ಯವಿಲ್ಲ ಎಂದು ಕೊರಗುವ ಮಕ್ಕಳ ನೆರವಿಗೆ ಸರ್ಕಾರ

ಸಾರಾಂಶ

* ತೆಲಂಗಾಣದಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ  * ಜೂನಿಯರ್ ಮತ್ತು ಡಿಗ್ರಿ ಖಾಸಗಿ ಕಾಲೇಜು ಶುಲ್ಕ ನಿಯಂತ್ರಣ ಕ್ರಮಕ್ಕೂ ಮುಂದಾದ ಸರ್ಕಾರ * ಶಿಕ್ಷಣ ಸಚಿವ ಸಬಿತಾ ಇಂದ್ರರೆಡ್ಡಿ ನೇತೃತ್ವದಲ್ಲ ಉಪ ಸಮಿತಿ ರಚಿಸಿದ ಕೆ.ಸಿ.ರಾವ್ ಸರ್ಕಾರ

ಖಾಸಗಿ ಶಾಲೆಗೆ ಹೋಗೋಕೆ ಆಗಲ್ಲ. ನಾವು ಬಡವರು, ಹಣವಿಲ್ಲ. ಇಂಗ್ಲೀಷ್ ಮೀಡಿಯಂನಲ್ಲಿ ನಮಗೆ ಓದುವ ಭಾಗ್ಯವಿಲ್ಲ ಅಂತ ಕೊರಗುವ ಮಕ್ಕಳ ನೆರವಿಗೆ ಧಾವಿಸಲು ಮುಂದಾಗಿದೆ ತೆಲಂಗಾಣ (Telangana) ಸರ್ಕಾರ. ಹಿಂದುಳಿದ ವರ್ಗದ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಬುನಾದಿ ಹಾಕುತ್ತಿದೆ.

ಹೌದು.. 2022-23ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆ (Government Schools) ಗಳಲ್ಲಿ ಇಂಗ್ಲಿಷ್ ಮಾಧ್ಯಮ (English Medium) ವನ್ನು ಪರಿಚಯಿಸಲು ತೆಲಂಗಾಣ ಸರ್ಕಾರ ಮುಂದಾಗಿದೆ. ಈಗಾಗಲೇ ಸಚಿವ ಸಂಪುಟ ಕೂಡ ಇದಕ್ಕೆ ಒಪ್ಪಿಗೆ ನೀಡಿದೆ. ತೆಲಂಗಾಣ ಕ್ಯಾಬಿನೆಟ್ ಇಂಗ್ಲಿಷ್ ಮಾಧ್ಯಮವನ್ನು ಪರಿಚಯಿಸಲು ಅನುಮೋದನೆ ನೀಡಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ತೆಲಂಗಾಣದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಪರಿಚಯಿಸಲಾಗುತ್ತದೆ. ಇದೇ ವೇಳೆ, ಖಾಸಗಿ ಶಾಲೆಗಳು (Private Schools), ಜೂನಿಯರ್ (Junior) ಮತ್ತು ಪದವಿ (Degree) ಕಾಲೇಜುಗಳಲ್ಲಿ ಶುಲ್ಕವನ್ನು ನಿಯಂತ್ರಿಸಲು ತೆಲಂಗಾಣ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ. ನಿರ್ಧರಿಸಿದೆ.  

Online Course ನೀಡುತ್ತಿರುವ ಎಜುಟೆಕ್ ಸಂಸ್ಥೆಗಳಿಗೆ UGC ಎಚ್ಚರಿಕೆ

ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ಈ ಎಲ್ಲ ಸಂಗತಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸಂಪುಟವು, ಶಿಕ್ಷಣ ಸಚಿವೆ ಸಬಿತಾ ಇಂದ್ರರೆಡ್ಡಿ (Sabita Indrareddy) ನೇತೃತ್ವದಲ್ಲಿ ಸಚಿವರ ಉಪಸಮಿತಿಯನ್ನು  ರಚಿಸಿದೆ. ಆಂಗ್ಲ ಮಾಧ್ಯಮದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಅಧ್ಯಯನ ನಡೆಸಲು ಮತ್ತು ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಸೂಚಿಸಿದೆ. ಸಭೆಯಲ್ಲಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ 7289 ಕೋಟಿ ರೂಪಾಯಿ ವೆಚ್ಚದಲ್ಲಿ "ಮನವೂರು ಮನ ಬೇಡಿ" (ನಮ್ಮ ಗ್ರಾಮ-ನಮ್ಮ ಶಾಲೆ) ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ.

ಗ್ರಾಮೀಣ ಭಾಗದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಸಿದ್ಧರಿದ್ದಾರೆ ಎಂದು ಸಚಿವ ಸಂಪುಟ ಅಭಿಪ್ರಾಯಪಟ್ಟಿದೆ. ಹೀಗಾಗಿ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಬೋಧಿಸಲು ಮತ್ತು ಅದಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲುಬ ಮುಖ್ಯಮಂತ್ರಿ ಕೆ.ಸಿ.ರಾವ್ (K C Rao) ಸಂಪುಟ ನಿರ್ಧರಿಸಿದೆ. 

ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡಲು ಶಿಕ್ಷಕರಿಗೆ ತರಬೇತಿ ನೀಡಲು, ಶಾಲಾ ಪರಿಸರವನ್ನು ಮಕ್ಕಳಿಗೆ ಆಕರ್ಷಕವಾಗಿಸಲು, ಆವರಣವನ್ನು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇರಿಸಲು, ಮಧ್ಯಾಹ್ನದ ಊಟದ ಕಾರ್ಯಕ್ರಮವನ್ನು ಸುಧಾರಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಸರ್ಕಾರ ನಿರ್ಧರಿಸಿದೆ. ಬೋಧನಾ ಮಾಧ್ಯಮ ಇಂಗ್ಲಿಷ್‌ನಲ್ಲಿದ್ದರೆ ಗ್ರಾಮೀಣ ಪ್ರದೇಶದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಸಿದ್ಧರಿದ್ದಾರೆ ಎಂದು ಸಚಿವ ಸಂಪುಟ ಅಭಿಪ್ರಾಯಪಟ್ಟಿದೆ. ಹೀಗಾಗಿ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಅನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಂಪುಟ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡಲು ಶಿಕ್ಷಕರಿಗೆ ತರಬೇತಿ ನೀಡಬೇಕಾಗುತ್ತದೆ. ಜೊತೆಗೆ ಶಾಲಾ ಪರಿಸರವನ್ನು ಮಕ್ಕಳಿಗೆ ಆಕರ್ಷಕವಾಗಿಸಲು, ಆವರಣವನ್ನು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇರಿಸಲು ಸಾಕಷ್ಟು ಕ್ರಮಗಳನ್ನು ತೆಹೆದುಕೊಳ್ಳಬೇಕಾಗುತ್ತದೆ. ಮಧ್ಯಾಹ್ನದ ಊಟದ ಕಾರ್ಯಕ್ರಮವನ್ನು ಸುಧಾರಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಸರ್ಕಾರ ನಿರ್ಧರಿಸಿದೆ.

ಶಿಕ್ಷಣ ಸಚಿವೆ ಸಬಿತಾ ಇಂದ್ರರೆಡ್ಡಿ (Sabita Indrareddy) ನೇತೃತ್ವದಲ್ಲಿ ಸಚಿವರ ಉಪಸಮಿತಿಯು ಇದೆಲ್ಲದರ ಬಗ್ಗೆ ಅಧ್ಯಯನ ನಡೆಸಿ ಸಮಗ್ರ ವರದಿಯನ್ನು ಕೊಟ್ಟ ಬಳಿಕ ಯೋಜನೆ ಜಾರಿಗೆ ಬರಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆಂಗ್ಲ‌ಮಾಧ್ಯಮ ಸರ್ಕಾರಿ ಶಾಲೆಗಳನ್ನು‌ ಆರಂಭಿಸಲು ಸಕಲ ಸಿದ್ಧತೆ ಗಳು ಶುರುವಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲೂ ಇಂಥ ಒತ್ತಡಗಳಿರುವುದನ್ನು ಇಲ್ಲಿ ಸ್ಮರಿಸಬಹುದು.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ