ರಾಜ್ಯಾದ್ಯಂತ ಭಾನುವಾರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬಿಗಿ ಬಂದೋಬಸ್ತ್‌ನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರಗಳ ಅಪೂರ್ಣ ವಿಳಾಸದಿಂದಾಗಿ ನೂರಾರು ವಿದ್ಯಾರ್ಥಿಗಳು ಕೇಂದ್ರ ಹುಡುಕುವುದರಲ್ಲಿಯೇ ಕಾಲ ಕಳೆಯುವಂತಾಗಿದ್ದನ್ನು ಹೊರತುಪಡಿಸಿದರೆ ಎಲ್ಲೆಡೆ ಪರೀಕ್ಷೆ ಸುಸೂತ್ರವಾಗಿ ಜರುಗಿದೆ.
ಬೆಂಗಳೂರು (ನ.07): ರಾಜ್ಯಾದ್ಯಂತ ಭಾನುವಾರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬಿಗಿ ಬಂದೋಬಸ್ತ್‌ನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಪರೀಕ್ಷಾ ಕೇಂದ್ರಗಳ ಅಪೂರ್ಣ ವಿಳಾಸದಿಂದಾಗಿ ನೂರಾರು ವಿದ್ಯಾರ್ಥಿಗಳು ಕೇಂದ್ರ ಹುಡುಕುವುದರಲ್ಲಿಯೇ ಕಾಲ ಕಳೆಯುವಂತಾಗಿದ್ದನ್ನು ಹೊರತುಪಡಿಸಿದರೆ ಎಲ್ಲೆಡೆ ಪರೀಕ್ಷೆ ಸುಸೂತ್ರವಾಗಿ ಜರುಗಿದೆ. ಒಟ್ಟಾರೆ ರಾಜ್ಯದ 781 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. 3.61 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದು, ಇದರಲ್ಲಿ 28,471 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.
1 ರಿಂದ 5ನೇ ತರಗತಿವರೆಗೂ ಬೋಧಿಸಲು ಅರ್ಹತೆ ಪಡೆಯುವ ಪೇಪರ್-1 ಕ್ಕೆ 1,54,929 ಅಭ್ಯರ್ಥಿಗಳು ನೋಂದಾಯಿಸಿದ್ದರು. ಇದರಲ್ಲಿ 1,40,801 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 14,128 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. 6 ರಿಂದ 8ನೇ ತರಗತಿವರೆಗೂ ಬೋಧಿಸಲು ಅರ್ಹತೆ ಪಡೆಯುವ ಪೇಪರ್-2 ಕ್ಕೆ 2,06,455 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು 1,92,112 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. 14,343 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಕೆಲ ಅಭ್ಯರ್ಥಿಗಳು ಎರಡೂ ಪರೀಕ್ಷೆ ಬರೆದಿದ್ದಾರೆ.
ಶಾಲೆಗಳಲ್ಲಿ ಧ್ಯಾನದ ವಿಚಾರಕ್ಕೆ ಟ್ವೀಟ್ ವಾರ್: ಸಿದ್ದು ವಿರುದ್ಧ ಸಚಿವ ನಾಗೇಶ್ ಗರಂ..!
ಪರೀಕ್ಷೆ ಆರಂಭಕ್ಕೂ ಮುನ್ನ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿ ಹಾಜರಿರಬೇಕು ಎಂದು ಮೊದಲೇ ಸೂಚನೆ ನೀಡಿ, ಪರೀಕ್ಷೆ ಆರಂಭಕ್ಕೂ ಅರ್ಧ ಗಂಟೆ ಮೊದಲೇ ಪರೀಕ್ಷಾ ಕೇಂದ್ರಗಳ ಬಾಗಿಲು ಮುಚ್ಚಿ ಪರೀಕ್ಷಾರ್ಥಿಗಳ ತಪಾಸಣೆ ನಡೆಸಲಾಗಿದೆ. ಪರೀಕ್ಷೆ ಶುರುವಾದ ನಂತರ ಮುಗಿಯುವವರೆಗೂ ಅಭ್ಯರ್ಥಿಗಳನ್ನು ಹೊರಗೆ ಬಿಟ್ಟಿಲ್ಲ. ನಕಲನ್ನು ತಡೆಯಲು ಶೂ ಮತ್ತು ಬೆಲ್ಟ್ ಧರಿಸದಂತೆ ನೋಡಿಕೊಳ್ಳಲಾಗಿದೆ. ಮೊಬೈಲ್, ಕ್ಯಾಲ್ಕು್ಯಲೇಟರ್, ಕೈಗಡಿಯಾರ, ಲೈಟರ್, ಬ್ಲೂಟೂತ್ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕಟ್ಟುನಿಟ್ಟಾಗಿ ಸೂಚಿಸಿ ತಪಾಸಣೆ ನಡೆಸಿದ ಬಳಿಕವಷ್ಟೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸಲು ಅನುವು ಮಾಡಿಕೊಡಲಾಯಿತು.
ಶಿಕ್ಷಕರ ಅರ್ಹತೆ ಪರೀಕ್ಷೆ: ರಾಜ್ಯಾದ್ಯಂತ ಭಾನುವಾರ ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)-2022ಯನ್ನು ಕಟ್ಟುನಿಟ್ಟಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಭ್ಯರ್ಥಿಗಳಿಗೆ ಹಲವು ಸೂಚನೆ ನೀಡಿದ್ದು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ. ಪರೀಕ್ಷೆ ಆರಂಭಕ್ಕೂ ಮುನ್ನ ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರದ ಬಳಿ ಅಭ್ಯರ್ಥಿ ಹಾಜರಿರಬೇಕು. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲೇ ಪರೀಕ್ಷಾ ಕೇಂದ್ರದ ಬಾಗಿಲು ಮುಚ್ಚಿ ಪರೀಕ್ಷಾರ್ಥಿಗಳ ತಪಾಸಣೆ ನಡೆಸಲಾಗುವುದು. ಪರೀಕ್ಷೆ ಶುರುವಾದ ನಂತರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇರುವುದಿಲ್ಲ. ಒಮ್ಮೆ ಕೊಠಡಿ ಪ್ರವೇಶಿಸಿದ ಬಳಿಕ ಪರೀಕ್ಷೆ ಮುಗಿಯುವವರೆಗೂ ಹೊರ ಬರಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ನಿಷೇಧಿಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 924 ಮಕ್ಕಳು
ಮೊಬೈಲ್, ಕ್ಯಾಲ್ಕು್ಯಲೇಟರ್, ಕೈಗಡಿಯಾರ, ಬೆಂಕಿಪೊಟ್ಟಣ, ಲೈಟರ್, ಬ್ಲೂಟೂತ್ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಹಾಲ್ ಟಿಕೆಟ್‌ನಲ್ಲಿ ಸಹಿ ಮತ್ತು ಪೋಟೋ ಪ್ರಕಟವಾಗದಿದ್ದರೆ ಅಥವಾ ಸಹಿ ಮತ್ತು ಪೋಟೋಗೆ ವ್ಯತ್ಯಾಸವಿದ್ದರೆ ಅಂತಹ ಅಭ್ಯರ್ಥಿಗಳು ತಮ್ಮೊಂದಿಗೆ ಇತ್ತೀಚಿನ ಪೋಟೋ, ಆನ್‌ಲೈನ್ ಅರ್ಜಿ, ಆಧಾರ್ ಕಾರ್ಡ್ ಅಥವಾ ಇನ್ಯಾವುದೇ ಅಧಿಕೃತ ಗುರುತಿನ ಚೀಟಿ ತೋರಿಸಬೇಕು. ಪೇಪರ್-1 ಕ್ಕೆ 1,54,929 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೂ 589 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪೇಪರ್-2ಕ್ಕೆ 2,06,456 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಮಧ್ಯಾಹ್ನ 2 ರಿಂದ ಸಂಜೆ 4.30 ರವರೆಗೆ 781 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.