ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಾಡಿಯೇ ಮಾಡುತ್ತೇವೆ. ಬಿಜೆಪಿಯವರು ಬದಲಿಸಿದ್ದಾರೆ ಎಂಬ ಕಾರಣಕ್ಕೆ ಪರಿಷ್ಕರಣೆ ಅಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಪರಿಷ್ಕರಣೆ. ಈ ವರ್ಷ ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಪಠ್ಯ ದೊರಕಿದೆ. ಹೀಗಾಗಿ, ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಇನ್ನೂ ಸಮಿತಿ ರಚನೆ ಮಾಡಿಲ್ಲ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಜೊತೆ ಚರ್ಚೆ ಮಾಡಿದ್ದೇನೆ: ಮಧು ಬಂಗಾರಪ್ಪ
ಶಿವಮೊಗ್ಗ(ಜೂ.04): ಮಕ್ಕಳ ಭವಿಷ್ಯ ರೂಪಿಸಬೇಕಾದ ಪಠ್ಯಪುಸ್ತಕದಲ್ಲಿ ಧರ್ಮದ ಬಗ್ಗೆ ವಿಷಬೀಜ ಬಿತ್ತುವಂತಹ ಕೆಲಸ ಹಿಂದಿನ ಸರ್ಕಾರದಲ್ಲಿ ಆಗಿದೆ. ಅವರು ಮಾಡಿದ ತಪ್ಪನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪಠ್ಯ ಪುಸ್ತಕವನ್ನು ಬದಲಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆಯನ್ನು ಮಾಡಿಯೇ ಮಾಡುತ್ತೇವೆ. ಬಿಜೆಪಿಯವರು ಬದಲಿಸಿದ್ದಾರೆ ಎಂಬ ಕಾರಣಕ್ಕೆ ಪರಿಷ್ಕರಣೆ ಅಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಪರಿಷ್ಕರಣೆ. ಈ ವರ್ಷ ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಪಠ್ಯ ದೊರಕಿದೆ. ಹೀಗಾಗಿ, ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ಇನ್ನೂ ಸಮಿತಿ ರಚನೆ ಮಾಡಿಲ್ಲ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಜೊತೆ ಚರ್ಚೆ ಮಾಡಿದ್ದೇನೆ ಎಂದರು.
ಪಠ್ಯಪುಸ್ತಕ ಪುನರ್ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಜತೆ ಸಚಿವ ಮಧು ಬಂಗಾರಪ್ಪ ಚರ್ಚೆ
ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ನಾನು ಸಚಿವನಾದ ನಂತರ ಮೊದಲ ಕೆಲಸವೇ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಿರುವುದು. ಸದ್ಯ ಎಲ್ಲಿ ಶಿಕ್ಷಕರ ಕೊರತೆ ಇದೆಯೋ ಅಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಅಧಿಕಾರದಲ್ಲಿದ್ದಾಗ ಬಡವರಿಗೆ ಏನನ್ನೂ ಮಾಡದ ಬಿಜೆಪಿ ಈಗ ಕಾಂಗ್ರೆಸ್‌ನ ಗ್ಯಾರಂಟಿ ವಿರುದ್ಧ ಅಪಪ್ರಚಾರ ಶುರುಮಾಡಿದೆ. ಮಾಡಲು ಏನೂ ಕೆಲಸ ಇಲ್ಲ. ಅವರು ಇನ್ನು ಐದು ವರ್ಷ ಇದೇ ರೀತಿ ಟೀಕೆ ಮಾಡಿಕೊಂಡು ಇರಲಿ ಎಂದರು.