ಮೂವರಿಗೆ ಹಂಪಿ ಕನ್ನಡ ವಿವಿ ನಾಡೋಜ ಪದವಿ, ಡಿ. 8ರಂದು ವಿವಿಯ ಘಟಿಕೋತ್ಸವ

By Gowthami K  |  First Published Dec 5, 2022, 10:02 PM IST

ಹಂಪಿ ಕನ್ನಡ ವಿವಿ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಕೃಷ್ಣಪ್ಪ, ಜಿ., ಎಸ್.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ ಅವರು ಆಯ್ಕೆಯಾಗಿದ್ದಾರೆ ಎಂದು ವಿವಿಯ ವಿಶ್ವಸನೀಯ ಮೂಲಗಳು ತಿಳಿಸಿವೆ.


ವಿಜಯನಗರ (ಡಿ.5): ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಕೃಷ್ಣಪ್ಪ, ಜಿ., ಎಸ್.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ ಅವರು ಆಯ್ಕೆಯಾಗಿದ್ದಾರೆ ಎಂದು ವಿವಿಯ ವಿಶ್ವಸನೀಯ ಮೂಲಗಳು ತಿಳಿಸಿವೆ. ಡಿಸೆಂಬರ್ 8ರಂದು ನಡೆಯುವ ವಿವಿಯ 31ನೇ ನುಡಿಹಬ್ಬ- ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಈ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ. ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ಪಿಎಚ್ ಡಿ ಮತ್ತು ಎಂ.ಫಿಲ್ ಪದವಿಗಳನ್ನು ನೀಡಲಿದ್ದಾರೆ.

ಜ.27, 28, 29ಕ್ಕೆ ಹಂಪಿ ಉತ್ಸವ: ಜೊಲ್ಲೆ
 2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಈ ಮೊದಲು 2023ರ ಜ.7 ಮತ್ತು 8ರಂದು ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಅ.ಭಾ.ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಿ ಜ.27, 28 ಮತ್ತು 29 ರಂದು ಮೂರು ದಿನಗಳ ಕಾಲ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದರು. ಕೋವಿಡ್‌ ಸಾಂಕ್ರಾಮಿಕ ರೋಗದ ಕಾರಣ ಕಳೆದೆರಡು ವರ್ಷಗಳಿಂದ ಹಂಪಿ ಉತ್ಸವ ಆಯೋಜಿಸಿರಲಿಲ್ಲ. ಹಾಗಾಗಿ ಈ ಬಾರಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.

Tap to resize

Latest Videos

SSLC Exam 2023 Time Table: ಕರ್ನಾಟಕ ಎಸ್‌ಎಸ್‌ಎಲ್‌ ಸಿ ಅಂತಿಮ ವೇಳಾಪಟ್ಟಿ ಬಿಡುಗಡೆ

ಫೆಲೋಶಿಪ್‌ಗೆ ಒತ್ತಾಯಿಸಿ ಪ್ರತಿಭಟನೆ
ಸಂಶೋಧನೆಯ ಫೆಲೋಶಿಪ್‌ ಬಿಡುಗಡೆಗೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವದ್ಯಾಲಯದ ಸಂಶೋಧನಾರ್ಥಿಗಳು  ಹಂಪಿ ವಿವಿಯ ಕ್ರಿಯಾಶಕ್ತಿ ಕಟ್ಟಡದ ಎದುರು ಭಾನುವಾರ ಧರಣಿ ನಡೆಸಿದರು.

ಬೆಂಗಳೂರು ವಿವಿ ಘಟಿಕೋತ್ಸವದಲ್ಲಿ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡಲು ವಿವಿಗೆ ಸರ್ಕಾರ ಆದೇಶ ನೀಡಿದೆ. ಈ ಸಂಬಂಧ .11.89 ಕೋಟಿ ಮಂಜೂರು ಮಾಡಿದೆ.ಆದರೂ ಫೆಲೋಶಿಪ್‌ ನೀಡುತ್ತಿಲ್ಲ. 47 ತಿಂಗಳಿಂದ ಫೆಲೋಶಿಪ್‌ ಬಿಡುಗಡೆ ಮಾಡದ್ದರಿಂದ ಸಂಶೋಧನಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಸೂಚನೆ ಅನುಸಾರ ಫೆಲೋಶಿಪ್‌ ಬಿಡುಗಡೆಗೊಳಿಸಬೇಕು. ಫೆಲೋಶಿಪ್‌ ದೊರೆಯದೆ ಎಸ್ಸಿ,ಎಸ್ಟಿಬಡ ಸಂಶೋಧನಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಪ್ರೋತ್ಸಾಹಧನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು. ವಿವಿಧ ವಿಭಾಗಗಳ ಸಂಶೋಧನಾರ್ಥಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದರು.

click me!