ವಿಶ್ವವಿದ್ಯಾಲಯಗಳ ರಾಷ್ಟ್ರೀಯ ವಾಲಿಬಾಲ್ ಕೂಟಕ್ಕೆ ಉಡುಪಿ ಪೂರ್ಣಪ್ರಜ್ಞಾ ಕಾಲೇಜು ಆತಿಥ್ಯ

By Suvarna News  |  First Published Jan 1, 2023, 5:55 PM IST

ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇದರ ಜಂಟಿ ಆಶ್ರಯದಲ್ಲಿ 2022-23ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟವು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜನವರಿ 4ರಿಂದ 8ರವರೆಗೆ ನಡೆಯಲಿದೆ.


ಉಡುಪಿ (ಜ.1): ಮಂಗಳೂರು ವಿಶ್ವವಿದ್ಯಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇದರ ಜಂಟಿ ಆಶ್ರಯದಲ್ಲಿ 2022-23ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟವು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜನವರಿ 4ರಿಂದ 8ರವರೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ| ಕಿಶೋರ್ ತಿಳಿಸಿದರು.

ಅವರು ಭಾನುವಾರ ಪಿಪಿಸಿ ಉಡುಪಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು. ಜ. 4 ರಂದು ಬೆಳಗ್ಗೆ 7:30ಕ್ಕೆ ಉಡುಪಿ ಶ್ರೀ ಅದಮಾರು ಮಠದ ಸ್ವಾಮೀಜಿಯವರಿಂದ ಭೂಮಿಪೂಜೆಯೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಜ. 5 ರಂದು ಬೆಳಗ್ಗೆ 10:30ಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರು ಹಾಗೂ ಶ್ರೀ ಈಶಪ್ರಿಯತೀರ್ಥರ ಆಶೀರ್ವಚನದೊಂದಿಗೆ ಉದ್ಘಾಟನಾ ಕಾರ್ಯಕ್ರಮವು ನಡೆಯಲಿದೆ.

Tap to resize

Latest Videos

undefined

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಜಂಟಿ ಕಾರ್ಯದರ್ಶಿಯಾಗಿರುವ ಡಾ| ಬಲ್ವಿತ್ ಸಿಂಗ್, ರಾಜ್ಯ ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಉಡುಪಿಯ ಶಾಸಕ  ರಘುಪತಿ ಭಟ್, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ., ಪೂರ್ಣಪ್ರಜ್ಞ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿ.ಎ. ಪ್ರಶಾಂತ್ ಹೊಳ್ಳ, ಕಾಲೇಜಿನ ಪ್ರಾಂಶುಪಾಲ, ಡಾ. ರಾಘವೇಂದ್ರ ಎ, ಉಪಸ್ಥಿತರಿರುತ್ತಾರೆ. 

ಪೂರ್ಣಪ್ರಜ್ಞ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾಗಿರುವ ಡಾ. ಜಿ.ಎಸ್. ಚಂದ್ರಶೇಖರ್ ಕಾಠ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಜ.8ರಂದು ಸಂಜೆ 7 ಗಂಟೆಗೆ ಅಂತಿಮ ಪಂದ್ಯದ ಮುಕ್ತಾಯವಾದ ನಂತರ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರು, ಶ್ರೀ ಈಶಪ್ರಿಯತೀರ್ಥರು,  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಶೋಭಾ ಕರಂದ್ಲಾಜೆ, ರಾಜ್ಯದ ಕ್ರೀಡಾಸಚಿವ ನಾರಾಯಣ ಗೌಡ, ಮಾಜಿ ಕ್ರೀಡಾಸಚಿವ ಪ್ರಮೋದ್ ಮಧ್ವರಾಜ್, ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಬಲೇಶ್ವರ ರಾವ್ ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪೂರ್ಣಪ್ರಜ್ಞಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ| ಜಿ.ಎಸ್. ಚಂದ್ರಶೇಖರ್, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿಸೋಜ, ಪಿಪಿಸಿ ಉಡುಪಿ ಪ್ರಾಂಶುಪಾಲ ಡಾ| ರಾಘವೇಂದ್ರ ಎ, ವಾಲಿಬಾಲ್ ಕ್ರೀಡಾಕೂಟದ ಸಂಯೋಜಕರು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ಉಪಸ್ಥಿತರಿದ್ದರು.

ಇದು ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಬಾರಿಗೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕ್ರೀಡೆಯಾಗಿದೆ. ಬೆಳಗ್ಗೆ 7 ಗಂಟೆಯಿಂದ ರಾತ್ರಿ 11 ರವರೆಗೆ ನಡೆಯಲಿದೆ. ಐದು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಸುಮಾರು ನಾಲ್ಕು ವಲಯಗಳಿಂದ ಹದಿನಾರು ತಂಡಗಳು,  250 ಕ್ರೀಡಾಪಟುಗಳು, 40 ಕ್ರೀಡಾ ತರಬೇತುದಾರರು, ತಂಡದ 50 ವ್ಯವಸ್ಥಾಪಕರು ಹಾಗೂ ತೀರ್ಪುಗಾರರು ಭಾಗವಹಿಸಲಿದ್ದಾರೆ. 

ವಿಶ್ವ ಚಾಂಪಿಯನ್‌ಶಿಪ್‌ಗೆ ಭಾರತವನ್ನು ಪ್ರತಿನಿಧಿಸಲಿರುವ ತಂಡವನ್ನು ಆಯ್ಕೆ ಮಾಡಲಾಗುವುದು. ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಈ ಪಂದ್ಯಾಕೂಟಕ್ಕಾಗಿ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಒಳಾಂಗಣ ವಾಲಿಬಾಲ್ ಕ್ರೀಡಾಂಗಣ ನಿರ್ಮಿಸಲಾಗಿದೆ.

ನಾಳೆಯಿಂದ ಕಲಬುರಗಿಯಲ್ಲಿ ಸರ್ಕಾರಿ‌ ನೌಕರರ ಕ್ರೀಡಾಕೂಟ

ಜನವರಿ 4ರಿಂದ 8ರವರೆಗೆ ಐದು ದಿನಗಳ ಕಾಲ ಹಗಲು-ರಾತ್ರಿ ನಡೆಯಲಿರುವ ಈ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಕ್ರೀಡಾಪಟುಗಳು, ತಂಡದ ವ್ಯವಸ್ಥಾಪಕರು, ತೀರ್ಪುಗಾರರಿಗೆ ಸುಸಜ್ಜಿತವಾದ ಉಚಿತ ವಾಸ್ತವ್ಯದ ವ್ಯವಸ್ಥೆ ಹಾಗೂ ದಕ್ಷಿಣ, ಉತ್ತರ ಭಾರತ ಶೈಲಿಯ ಊಟೋಪಚಾರದ ವ್ಯವಸ್ಥೆ ಇರುತ್ತದೆ.

2036ರ ಒಲಿಂಪಿಕ್ಸ್‌ಗೆ ಬಿಡ್‌ ಸಲ್ಲಿಸಲು ಸಿದ್ದ: ಅನುರಾಗ್ ಠಾಕೂರ್

ಜ.7 ರಂದು ಸಂಜೆ 5:30ಕ್ಕೆ 'ಪ್ರಜ್ಞಾಗೌರವ' ವಿಶೇಷ ಕಾರ್ಯಕ್ರಮದ ಮೂಲಕ ವಾಲಿಬಾಲ್ ನಲ್ಲಿ ರಾಷ್ಟ್ರ, ಅಂತರ್‌ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಸಾಧಕರಿಗೆ ಸನ್ಮಾನಿಸಲಾಗುತ್ತದೆ.

click me!