ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕ ತಡೆ

By Suvarna News  |  First Published Aug 3, 2021, 7:03 PM IST

* ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ 
* 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ
* ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ


ಬೆಂಗಳೂರು, (ಅ.03): ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. 

ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಇದೀಗ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

Tap to resize

Latest Videos

ಪಾಸಾಗಿದ್ರೂ ಪಿಯು ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳು!

ಕೊರೋನಾ ಮೂರನೇ ಅಲೆ ಆತಂಕ ಶುರುವಾಗಿದ್ದರಿಂದ ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎನ್ನಲಾಗುತ್ತಿದೆ.  ಅಲ್ಲದೇ ಈ ಬಾರಿ ಶಾಲೆ ಪ್ರಾರಂಭ ಮತ್ತಷ್ಟು ತಡವಾಗುವ ಎಲ್ಲಾ ಸಾಧ್ಯತೆಗಳಿವೆ.

ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕರ್ನಾಟಕದಕ್ಕೂ ಆತಂಕ ಎದುರಾಗಿದೆ. ಈ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. RTPCR ಚೆಕ್ ಮಾಡಿ ರಾಜ್ಯದೊಳಗೆ ಬಿಡಲಾಗುತ್ತಿದೆ.
 

click me!