ಲಖನೌ (ಮೇ.21): ಕೊರೋನಾ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳು ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಬ್ರೇಕ್ ಹಾಕಿದೆ.
ಈ ಬಗ್ಗೆ ಗುರುವಾರ ಮಾತನಾಡಿದ ಉತ್ತರ ಪ್ರದೇಶ ಪ್ರೌಢ ಶಿಕ್ಷಣ ಸಚಿವ ದಿನೇಶ್ ಶರ್ಮಾ, ‘ಕೊರೋನಾ 2ನೇ ಅಲೆಯಿಂದಾಗಿ ಹಲವು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿವೆ.
undefined
10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್ ಎಂದ ಛತ್ತೀಸ್ಗಢ ಸರ್ಕಾರ ..
ಆನ್‌ಲೈನ್ ತರಗತಿಗಳು ನಡೆಯುತ್ತಿರುವ ಕಾರಣ ಶಾಲೆಗಳು ಸಹ ಶಿಕ್ಷಕರಿಗೆ ವೇತನ ಪಾವತಿಸಬೇಕಿದೆ. ಆದರೆ ಕೊರೋನಾದಿಂದಾಗಿ ವಿದ್ಯಾರ್ಥಿಗಳ ಪೋಷಕರು ಸಹ ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ ಶುಲ್ಕ ಹೆಚ್ಚಿಸದಂತೆ ನಿರ್ದೇಶಿಸಲಾಗಿದೆ’ ಎಂದು ಹೇಳಿದರು.