ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವೈದ್ಯಕೀಯ ಆಯೋಗ ತೀರ್ಮಾನಿಸಲಿದೆ: ಡಾ.ಕೆ.ಸುಧಾಕರ್

By Suvarna News  |  First Published Mar 9, 2022, 1:50 PM IST

ಉಕ್ರೇನ್‌ನಿಂದ ಮರಳಿರುವ ವಿದ್ಯಾರ್ಥಿಗಳು ಅನಿಶ್ಚಿತತೆ ಎದುರಿಸಿದ್ದು, ಈ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ತ    ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್  ಹೇಳಿದ್ದಾರೆ.


ಬೆಂಗಳೂರು(ಮಾ.9): ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣ ಕುರಿತು ಅನಿಶ್ಚಿತತೆಯನ್ನು ಎದುರಿಸಿದ್ದು, ಸ್ಥಳಾಂತರಗೊಂಡ ವಿದ್ಯಾರ್ಥಿಗಳ ಭವಿಷ್ಯದ ಕುರಿತು ರಾಷ್ಟ್ರೀಯ ವೈದ್ಯಕೀಯ ಆಯೋಗ (National Medical Commission - ಎನ್‌ಎಂಸಿ) ನಿರ್ಧಾರ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Education Minister Dr K Sudhakar) ಅವರು ಹೇಳಿದ್ದಾರೆ.

ಸ್ಥಳಾಂತರಗೊಂಡಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ಸಹಾಯ ಮಾಡಬೇಕೆಂಬ ಕಾಂಗ್ರೆಸ್ ಉಪನಾಯಕ ಯುಟಿ ಖಾದರ್ ಅವರ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ನೀತಿಗಳನ್ನು ಎನ್‌ಎಂಸಿ ರೂಪಿಸುತ್ತದೆ. ಯಾವುದೇ ಹೊಸ ನೀತಿ ರೂಪಿಸಲು ರಾಜ್ಯ ಸರ್ಕಾರಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದರು.

Tap to resize

Latest Videos

undefined

ಕರ್ನಾಟಕದ ಹಲವರು ಸೇರಿದಂತೆ ಸುಮಾರು 20,000 ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ ಮತ್ತು ಇತರರನ್ನು ಮರಳಿ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ತೆರವು ಪ್ರಕ್ರಿಯೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿಗಳೊಂದಿಗೆ ಎನ್‌ಎಂಸಿಗೆ ನೀಡಬೇಕಾದ ಸಲಹೆಗಳು ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶದ ಕುರಿತು ಸಭೆ ನಡೆಸಿದ್ದಾರೆ.

Kannada: ಪದವೀಲಿ ಕನ್ನಡ ಕಲಿಕೆ ಕಡ್ಡಾಯವಲ್ಲ: ಹೈಕೋರ್ಟ್‌

ಪದವಿಪೂರ್ವ ಕೋರ್ಸ್‌ಗಳಿಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority - ಕೆಇಎ) ಕೋಟಾದ ಮೂಲಕ ಶೇ 85 ರಷ್ಟು ಸೀಟುಗಳನ್ನು ಮತ್ತು ಶೇ 15 ರಷ್ಟು ಸೀಟುಗಳನ್ನು ನೀಟ್ (NEET) ಕೌನ್ಸೆಲಿಂಗ್‌ ಮೂಲಕ ಹಂಚಿಕೆ ಮಾಡಲಾಗುತ್ತದೆ. ಸ್ನಾತಕೋತ್ತರ ಸೀಟುಗಳಿಗೆ ತಲಾ ಶೇ.50ರಷ್ಟು ಸೀಟುಗಳಿವೆ ಎಂದು ಮಾಹಿತಿ ನೀಡಿದರು.

ತಾಲೂಕು ಮಟ್ಟದಲ್ಲಿ ನೀಟ್ ತರಬೇತಿ ನೀಡಲು ಸರಕಾರ ನಿರ್ಧರಿಸಿದೆ. ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 50ರಷ್ಟು ಸೀಟುಗಳಿಗೆ ಸರ್ಕಾರಿ ಶುಲ್ಕ ನಿಗದಿ ಮಾಡುವುದಾಗಿ ಈ ಹಿಂದೆ ಪ್ರಧಾನಿ ಮೋದಿ ಘೋಷಿಸಿದ್ದರು ಎಂದು ತಿಳಿಸಿದ್ದಾರೆ.

KSRTC ಗುಜರಿ ಬಸ್‌ ಈಗ ಸರ್ಕಾರಿ ಶಾಲೆಯ ಸ್ಮಾರ್ಟ್‌ ಕ್ಲಾಸ್‌..!

ವಾಪಸಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟುಗಳನ್ನು ನೀಡಲು ವಿರೋಧ ಪಕ್ಷಗಳ ಒತ್ತಾಯ:ಯುದ್ಧಪೀಡಿತ ಉಕ್ರೇನ್ ನಿಂದ ಸಾವಿರಾರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಬರುತ್ತಿದ್ದಾರೆ. ಅರ್ಧಕ್ಕೆ ಓದು ಮುಗಿಸಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಲ್ಲಿನ ಕಾಲೇಜುಗಳಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸರ್ಕಾರವನ್ನು ಕೇಳುತ್ತಿದ್ದಾರೆ.

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ, ಕರ್ನಾಟಕದಲ್ಲಿ 50ರಿಂದ 60 ವೈದ್ಯಕೀಯ ಕಾಲೇಜುಗಳಿದ್ದು ಅವುಗಳಲ್ಲಿ ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಅಧ್ಯಯನ ಮುಂದುವರಿಸಲು ಅವಕಾಶ ಮಾಡಿಕೊಡಬೇಕು. ಅಗತ್ಯವಿದ್ದರೆ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಇಟ್ಟುಕೊಳ್ಳಲಿ. ತಲಾ 10 ವಿದ್ಯಾರ್ಥಿಗಳಿಗೆ ಪ್ರತಿ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಿ ಎನ್ನುತ್ತಾರೆ.

ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಉಕ್ರೇನ್ ಗೆ ವಾಪಸ್ ಹೋಗುವುದು ಅಸಾಧ್ಯ. ಅವರ ಶಿಕ್ಷಣದ ಭವಿಷ್ಯ ಹೇಗಿರುತ್ತದೆ? ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಸಾಲ ಮಾಡಿರುತ್ತಾರೆ. ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಶಿಕ್ಷಣಕ್ಕೆ ಬೆಲೆ ನಿಗದಿ ಮಾಡುವ ಮೂಲಕ ವಿದ್ಯಾರ್ಥಿಗಳ ಕನಸುಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಿ ಎಂದು ಕೇಳಿಕೊಂಡಿದ್ದಾರೆ.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿ, ಕಾನೂನಿಗೆ ತಿದ್ದುಪಡಿ ತಂದು ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು. ಇದೀಗ ತಾನೇ ಕೋವಿಡ್ ಸೋಂಕಿನ ಸಂಕಷ್ಟದಿಂದ ನಾವು ಹೊರಬರುತ್ತಿದ್ದೇವೆ. ಸಾಕಷ್ಟು ಮಂದಿಯನ್ನು ಕಳೆದುಕೊಂಡಿದ್ದೇವೆ. ವೈದ್ಯಕೀಯ ಪದವೀಧರರು ನಿಜಕ್ಕೂ ನಾಡಿಗೆ ಆಸ್ತಿ. ಸರ್ಕಾರ ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

click me!