ಖಾಸಗಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಮಾನದಂಡ ರೂಪಿಸಲಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಯಾವುದೇ ನಿಖರವಾದ ಮಾನದಂಡಗಳು ಇಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿನ ಶೈಕ್ಷಣಿಕ ವಾತಾವರಣ ಉತ್ತಮಪಡಿಸುವ ಉದ್ದೇಶದಿಂದ ಪ್ರತಿ 10-20 ಕಿಮೀಗೆ ಒಂದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗುತ್ತಿದೆ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಮಧು ಬಂಗಾರಪ್ಪ
ಚಿಕ್ಕೋಡಿ(ಡಿ.10): ರಾಜ್ಯ ಸರ್ಕಾರ 47 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಿದೆ. ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಕ್ರಮವಹಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ, ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣಗೊಳಿಸಲಾಗುತ್ತಿದೆ ಎಂಬ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ವಲಯವಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಾನದಂಡ ಹೊಂದಿರಬೇಕು ಎಂದರು.
ಸರ್ಕಾರಿ ಶಾಲೆಗಳಿಗೆ ಉಚಿತ ಟಿವಿ, ಲ್ಯಾಪ್ ಟಾಪ್ ವಿತರಣೆ
ಖಾಸಗಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಮಾನದಂಡ ರೂಪಿಸಲಾಗಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಯಾವುದೇ ನಿಖರವಾದ ಮಾನದಂಡಗಳು ಇಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿನ ಶೈಕ್ಷಣಿಕ ವಾತಾವರಣ ಉತ್ತಮಪಡಿಸುವ ಉದ್ದೇಶದಿಂದ ಪ್ರತಿ 10-20 ಕಿಮೀಗೆ ಒಂದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡುವ ಬಗ್ಗೆ ಪರಿಗಣಿಸಲಾಗುತ್ತಿದೆ. ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅಥವಾ ಪ್ರೌಢಶಾಲೆಗಳನ್ನು ಉನ್ನತೀಕರಿಸಲು ಉದ್ದೇಶಿಸಿರುವ ಕೆಲವು ಸ್ಥಳಗಳಲ್ಲಿ ಫೀಡೀಂಗ್ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಪರಿಗಣಿಸಲಾಗುತ್ತಿದೆ ಎಂದು ತಿಳಿಸಿದರು.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಒಂದು ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದೆ ಎಂದು ತಿಳಿಸಿದರು.