10ನೇ ತರಗತಿ ಪರೀಕ್ಷೆ ರದ್ದು, 12ನೇ ಕ್ಲಾಸ್ ಎಕ್ಸಾಂ ಮುಂದೂಡಿದ ಯುಪಿ

By Suvarna NewsFirst Published May 29, 2021, 6:14 PM IST
Highlights

* ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ 10ನೇ ತರಗತಿ ಪರೀಕ್ಷೆ
* 12ನೇ ತರಗತಿ ಎಕ್ಸಾಂ ಮುಂದೂಡಿಕೆ
* ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮ

ಲಕ್ನೋ, (ಮೇ.29): ಕೊರೋನಾ ಎರಡನೇ ಅಲೆ ಅಟ್ಟಹಾಸದಿಂದ ಶಿಕ್ಷಣ ಕ್ಷೇತ್ರಕ್ಕೂ ಬಹುದೊಡ್ಡ ಪೆಟ್ಟು ಬಿದ್ದಿದೆ. ಯಾವುದೇ ಪರೀಕ್ಷೆ, ಕ್ಲಾಸ್ ಇಲ್ಲದೇ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.

ಇನ್ನು ಉತ್ತರಪ್ರದೇಶದಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಲು ತೀರ್ಮಾನಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 10ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆ, ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಲಾಗಿದೆ.

ಈಗ ಯುಪಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ 2021ನೇ ಸಾಲಿನ 10 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.

click me!