ಪಿಯುಸಿಯಲ್ಲಿ ಫೇಲ್ ಆಗಿದ್ದಕ್ಕೆ ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ!

By Suvarna NewsFirst Published Jun 18, 2022, 3:29 PM IST
Highlights

ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣ ಹಿನ್ನೆಲೆ ವಿದ್ಯಾರ್ಥಿಗಳಿಬ್ಬರು  ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಮತ್ತು ಗದಗ ಜಿಲ್ಲೆಯಲ್ಲಿ ನಡೆದಿದೆ. 

ಕಾರವಾರ(ಜೂ.18): ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣ ಹಿನ್ನೆಲೆ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪ್ರಣಮ್ ಈಶ್ವರ್ ನಾಯ್ಕ(18)   ಎಂದು  ತಿಳಿದುಬಂದಿದೆ. 
 
ಎ.ವಿ. ಬಾಳಿಗ ಕಾಲೇಜಿನಲ್ಲಿ  ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ, ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು  ಅನುತ್ತೀರ್ಣ ಹಿನ್ನೆಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಕುಮಟಾ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿಯಲ್ಲಿ 61.88% ಫಲಿತಾಂಶ ಬಂದಿದೆ.  ಉತ್ತರ ಕನ್ನಡ ಶೇ. 72.01 ಫಲಿತಾಂಶದ ಮೂಲಕ 5 ನೇ ಸ್ಥಾನ ಪಡೆದುಕೊಂಡಿದೆ. 

2ND PUC RESULT TOPPERS LIST; ದ‌ಕ‌ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ಸ್, ಕಲಾ ವಿಭಾಗದಲ್ಲಿ ಶೂನ್ಯ! 

Latest Videos

ಗದಗದಲ್ಲಿ  ಪಿಯುಸಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!
ಪಿಯುಸಿ ಫೇಲ್ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆ ಗದಗದಲ್ಲಿ ನಡೆದಿದೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪವಿತ್ರಾ ಲಿಂಗದಾಳ (18) ಗದಗ ಜಿಮ್ಸ್  ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ  ಸಾವನ್ನಪ್ಪಿದ್ದಾಳೆ. 

ಗದಗ ತಾಲೂಕಿನ ಹರ್ತಿ ಗ್ರಾಮದವಳಾಗಿರುವ ಪವಿತ್ರಾ ಲಿಂಗದಾಳ.  ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದಲ್ಲಿ ಫೇಲ್ ಆಗಿದ್ದಳು. ವಿಷಯ ತಿಳಿದು ತೀವ್ರವಾಗಿ ನೊಂದಿದ್ದ ಪವಿತ್ರಾ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಪವಿತ್ರಾಳನ್ನ ರಕ್ಷಿಸಿ ಜಿಮ್ಸ್ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ದಾರಿ ಮಧ್ಯೆ ಪವಿತ್ರಾ ಮೃತಪಟ್ಟಿದ್ದಾಳೆ.  ಗದಗ ಜಿಲ್ಲೆ ಈ ಬಾರಿ ಶೇ.60.63 ಫಲಿತಾಂಶ ಪಡೆದು 22 ನೇ ಸ್ಥಾನದಲ್ಲಿದೆ.

click me!