ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ

Kannadaprabha News   | Kannada Prabha
Published : Aug 18, 2025, 04:54 AM IST
RELIGIONS

ಸಾರಾಂಶ

ಕಳೆದ ವರ್ಷ ದೇಶದಲ್ಲೇ ಪ್ರಪ್ರಥಮವಾಗಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತಂದಿದ್ದ ಉತ್ತರಾಖಂಡ ಸರ್ಕಾರ, ಆ.19ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಮಸೂದೆ ಜಾರಿಗೆ ತರಲು ಸಜ್ಜಾಗಿದೆ.

ಡೆಹ್ರಾಡೂನ್: ಕಳೆದ ವರ್ಷ ದೇಶದಲ್ಲೇ ಪ್ರಪ್ರಥಮವಾಗಿ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತಂದಿದ್ದ ಉತ್ತರಾಖಂಡ ಸರ್ಕಾರ, ಆ.19ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಮಸೂದೆ ಜಾರಿಗೆ ತರಲು ಸಜ್ಜಾಗಿದೆ. ಈ ಕಾಯ್ದೆ ಜಾರಿಯಾದರೆ ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸ್ಥಾನಮಾನದ ಸೌಲಭ್ಯಗಳು ದೊರೆಯಲಿದೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸ್ಥಾನಮಾನ ಮುಸ್ಲಿಮರನ್ನು ಹೊರತುಪಡಿಸಿ ಇತರ ಅಲ್ಪಸಂಖ್ಯಾತ ಸಮುದಾಯಗಳಿಗೂ ದಕ್ಕುವಂತಾಗಲಿ ಎನ್ನುವ ಕಾರಣಕ್ಕೆ ಸರ್ಕಾರ ಮಸೂದೆ ಮಂಡನೆಗೆ ಸಜ್ಜಾಗಿದೆ.

ಅಲ್ಪಸಂಖ್ಯಾತ ಶಿಕ್ಷಣ ಮಸೂದೆ ಪ್ರಕಾರ ಸಿಖ್‌, ಜೈನ್‌, ಕ್ರೈಸ್ತ, ಬುದ್ಧ ಮತ್ತು ಪಾರ್ಸಿ ಧರ್ಮಕ್ಕೆ ಸೇರಿದವರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಸ್ಥಾನಮಾನದ ಸೌಲಭ್ಯ ದೊರೆಯುವಂತಾಗಲಿದೆ. ಅವುಗಳ ಕಾರ್ಯಚಟುವಟಿಕೆಗಳ ಮೇಲೆ ಸರ್ಕಾರ ನಿಗಾ ಇಡಲಿದೆ. ಪಾರದರ್ಶಕ ವ್ಯವಸ್ಥೆ ಜಾರಿಗೆ ಅನುವು ಮಾಡಿಕೊಡಲಿದೆ. ಅವುಗಳಿಗೆ ಕಾಲಕಾಲಕ್ಕೆ ಅಗತ್ಯ ಸೂಚನೆ ಕೊಡಲು ಸಾಧ್ಯವಾಗಲಿದೆ. ಒಂದು ವೇಳೆ ಇದು ಜಾರಿಯಾದರೆ ಈ ಕಾನೂನು ತಂದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ