ವಿದ್ಯಾಗಮ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್‌ಕುಮಾರ್ ಕೆಳಕಂಡಂತೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರು, (ಅ.10): ಸಾರ್ವಜನಿಕ ಟೀಕೆಗೆ ಬೆದರಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ , ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಈ ಯೋಜನೆಯಿಂದಾಗಿ ಶಿಕ್ಷಕರಲ್ಲಿ ಕರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ದಟ್ಟವಾಗಿ ಕೇಳಿಬಂದಿತ್ತು.
undefined
ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿದ್ಯಾಗಮ ಶಿಕ್ಷಕರಿಗೆ ಕೊರೊನಾ; ಬಂದ್ ಆಗುತ್ತಾ ವಠಾರ ಶಾಲೆ? ಸುರೇಶ್ ಕುಮಾರ್ ಹೇಳಿದ್ದಿದು
ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಕೆಲ ವಲಯಗಳಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ...
Posted by on Saturday, October 10, 2020