ಉನ್ನತ ಶಿಕ್ಷಣ ಸಚಿವ ಸಚಿವ ಅಶ್ವಥ್ ನಾರಾಯಣ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದಿದ್ದಾರೆ.
ಬೆಂಗಳೂರು(ಫೆ.11): ಕಾಲೇಜು (college) ಆವರಣದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ (Mobiles) ಬಳಸುವುದನ್ನು ನಿಷೇಧಿಸುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ (Minister Dr CN Ashwath Narayan) ಹೇಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಅಶ್ವಥ್ ನಾರಾಯಣ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದಿದ್ದಾರೆ.
ಈ ಬಗ್ಗೆ ಸುದ್ದಿಗಾರರು ಶುಕ್ರವಾರದಂದು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಶಾಲಾಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿಸುದ್ದಿ ಹಬ್ಬಿಸುತ್ತಿದ್ದಾರೆ. ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವುದಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.
'ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ’ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
MANGALORE UNIVERSITY RECRUITMENT 2022: ನ್ಯಾಯವಾದಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ
ನೀಟ್ ವಿಳಂಬ , ದಂಡ ರದ್ದು: ನೀಟ್ ಪರೀಕ್ಷೆಯಲ್ಲಿ (NEET Exam) ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwath Narayan) ತಿಳಿಸಿದ್ದಾರೆ.
ರಾಮನಗರದಲ್ಲಿ (Ramanagara) ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಶುಕ್ರವಾರ ಇಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿ, ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
India Unemployed people: 2020ರ ಲಾಕ್‌ಡೌನ್ ಮೊದಲ 3 ತಿಂಗಳಲ್ಲಿ ಉದ್ಯೋಗ ಕಳೆದುಕೊಂಡವರು 23 ಲಕ್ಷ ಮಂದಿ!
'ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೇ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂದರು.
ಒಂದು ಕೋರ್ಸ್‌ಗೆ ಪ್ರವೇಶ ಪಡೆದ ನಂತರ ಆ ವಿದ್ಯಾರ್ಥಿ ಆ ಕೋರ್ಸ್‌ನ್ನು ಬಿಟ್ಟು ಬೇರೆ ಕೋರ್ಸ್‌ಗೆ ಪ್ರವೇಶ ಪಡೆದರೆ ಶುಲ್ಕದ 5 ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇತ್ತು. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿತ್ತು. ಈ ಬಾರಿ ಇದಕ್ಕೆಲ್ಲ ಸರಕಾರ ವಿನಾಯ್ತಿ ನೀಡಿದೆ.