ಪ್ರಾಥಮಿಕ ಶಾಲೆಗೆ ಆಂಗ್ಲ ಮಾಧ್ಯಮ ಬೇಡ: ಡಾ.ಪುರುಷೋತ್ತಮ ಬಿಳಿಮಲೆ ಮನವಿ

By Kannadaprabha News  |  First Published Jun 21, 2024, 4:46 PM IST

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯಬತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.


ಬೆಂಗಳೂರು (ಜೂ.21): ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ ಕನ್ನಡ, ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಹೊರಡಿಸಿರುವ ಆದೇಶ ಹಿಂಪಡೆಯುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ.

ಬುಧವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ(Dr.Purushothama Bilimale) ಅವರು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.

Tap to resize

Latest Videos

undefined

ಶಾಲಾ ಮಕ್ಕಳ ಶೂ, ಸಾಕ್ಸ್‌ ಖರೀದಿಗೆ ಏಳು ವರ್ಷ ಹಿಂದಿನ ದರ ನಿಗದಿಪಡಿಸಿದ ಸರ್ಕಾರ!

ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ)ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಈ ಆದೇಶವು ಕನ್ನಡ ಭಾಷೆಯಲ್ಲಿ ಶಿಕ್ಷಣ ಒದಗಿಸುವುದಕ್ಕೆ ಹಿನ್ನಡೆಯನ್ನುಂಟು ಮಾಡುತ್ತದೆ. ಸದರಿ ಆದೇಶ ಕನ್ನಡ ಭಾಷಾ ಕಲಿಕಾ ಅಧಿನಿಯಮ ೨೦೧೫ಕ್ಕೆ ವಿರುದ್ಧವಾಗಿದೆ. ಜತೆಗೆ ಕನ್ನಡ ಭಾಷೆಯ ಸಾರ್ವಭೌಮತ್ವಕ್ಕೆ ಧಕ್ಕೆಯನ್ನುಂಟು ಮಾಡುತ್ತದೆ. ಆದ್ದರಿಂದ ಈ ಆದೇಶವನ್ನು ಹಿಂಪಡೆದು ಶಿಕ್ಷಣದಲ್ಲಿ ಕನ್ನಡ ಭಾಷಾ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

click me!