ಶಿಕ್ಷಕರ ದಿನ ಶಿಕ್ಷಕರನ್ನು ಗೌರವಿಸಲು ವಂಡರ್‌ಲಾ ವತಿಯಿಂದ 300 ಶಿಕ್ಷಕರಿಗೆ ಉಚಿತ ಪ್ರವೇಶ

By Gowthami K  |  First Published Aug 25, 2022, 7:22 PM IST

ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ಆದ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರನ್ನು ಆಹ್ವಾನಿಸುತ್ತಿದೆ.


ಬೆಂಗಳೂರು (ಆ.25): ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ಆದ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರನ್ನು ಆಹ್ವಾನಿಸುತ್ತಿದೆ. ಈ ಆಯ್ದ ಶಾಲೆಯಿಂದ ವಂಡರ್‌ಲಾ ಪಾರ್ಕ್‌ಗೆ ಬರುವ ಈ 300 ಶಿಕ್ಷಕರಿಗೆ ವಂಡರ್‌ಲಾ ವತಿಯಿಂದ ಉಚಿತ ಪ್ರವೇಶ ನೀಡಲಾಗುತ್ತದೆ. ಈ ಕೊಡುಗೆಯು ಕೊಚ್ಚಿ, ಬೆಂಗಳೂರು ಮತ್ತು ಹೈದರಾಬಾದ್ ಪಾರ್ಕ್‌ಗಳಲ್ಲಿ ಸೆಪ್ಟೆಂಬರ್ 3 ರಿಂದ ಸೆಪ್ಟೆಂಬರ್ 5ವರೆಗೆ ಇರಲಿದೆ. ಈ ಉಪಕ್ರಮದ ಕುರಿತು ಮಾತನಾಡಿದ ವಂಡರ್‌ ಲಾ ಹಾಲಿಡೇಸ್‌ನ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕೆ ಚಿಟ್ಟಿಲಪಿಲ್ಲಿ, ಸಾಂಕ್ರಾಮಿಕ ರೋಗದ ಉದ್ದಕ್ಕೂ, ಶಿಕ್ಷಕರು ಆನ್‌ಲೈನ್‌ ತರಗತಿ ಹೆಸರಿನಲ್ಲಿ ಮನೆ ಹಾಗೂ ಶಾಲೆ ಎರಡೂ ಸೇವೆಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಜೀವನದ ಪಾಠ ಕಲಿಸುವ ಈ ಮಾರ್ಗದರ್ಶಕರನ್ನು ವಂಡರ್‌ಲಾ ಗೌರವಿಸುವ ಉದ್ದೇಶದಿಂದ ಈ ಕೊಡುಗೆ ನೀಡುತ್ತಿದೆ. ಇದಷ್ಟೇ ಅಲ್ಲದೆ, ಆಗಸ್ಟ್ 29 ರಿಂದ ಸೆಪ್ಟೆಂಬರ್ 05 ರ ಅವಧಿಯಲ್ಲಿ ವಂಡರ್‌ಲಾ ಪಾರ್ಕ್‌ಗೆ ಭೇಟಿ ನೀಡುವ ಎಲ್ಲಾ ಶಿಕ್ಷಕರಿಗೂ ತಮ್ಮ ಬುಕಿಂಗ್‌ಗಳ ಮೇಲೆ ಶೇ. 20ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಈ ಕೊಡುಗೆಯನ್ನು ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ಕೊಂಡೊಯ್ಯಬೇಕು. ಹೆಚ್ಚಿನ ಮಾಹಿತಿಗಾಗಿ www.wonderla.com ಗೆ ಭೇಟಿ ನೀಡಿ ಅಥವಾ ಕರೆ ಮಾಡಿ: ಬೆಂಗಳೂರು - 080 37230333, 080 35073966

ಶಿಕ್ಷಕರ ಬೇಡಿಕೆ ಈಡೇರಿಕೆಗೆ ಸಹಿ ಸಂಗ್ರಹ ಅಭಿಯಾನ ಸಭೆ
ಚಾಮರಾಜನಗರ: ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ರಾಷ್ಟ್ರಮಟ್ಟದ ಸಹಿ ಸಂಗ್ರಹ ಅಭಿಯಾನ ನಡೆಸುವ ಕುರಿತು ಸಂಘದ ಪದಾಧಿಕಾರಿಗಳ ಸಭೆ ನಡೆಯಿತು. ನಗರದ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಭವನದಲ್ಲಿ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದಿಂದ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಎಸ್‌.ಮಾದಪ್ಪ ಮಾತನಾಡಿ, ನೂತನ ಪಿಂಚಣಿ ರದ್ದುಪಡಿಸಬೇಕು, ಹಳೇ ಪಿಂಚಣಿ ಯೋಜನೆ ಜಾರಿಗೆ ತರಬೇಕು, ಕಾಯಂ ಶಿಕ್ಷಕರ ನೇಮಕ, ಹೊಸರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಶಿಕ್ಷಕರಿಗೆ ಬಾದಿತ ಅಂಶಗಳ ಕೈಬಿಡುವುದು, ಕೇಂದ್ರಸರ್ಕಾರದ ಮಾದರಿ ವೇತನ ಎಲ್ಲ ರಾಜ್ಯಗಳಲ್ಲೂ ಜಾರಿ ಮಾಡುವುದು, ಶಿಕ್ಷಕರ ವೇತನ ಬಡ್ತಿ, ವರ್ಗಾವಣೆ ಸಮಸ್ಯೆ ಈಡೇರಿಸುವುದು, ಹಲವು ವರ್ಷಗಳ ಬೇಡಿಕೆಯಾಗಿದೆ. ಜಿಲ್ಲೆಯ ಎಲ್ಲ ಶಿಕ್ಷಕರು ರಾಷ್ಟ್ರಮಟ್ಟದ ಸಹಿಸಂಗ್ರಹ ಅಭಿಯಾನಕ್ಕೆ ಸಹಕರಿಸಬೇಕು ಎಂದರು.

Tap to resize

Latest Videos

Chikkamagaluru: ಶಿಕ್ಷಕರೇ ಇಲ್ಲದ ಜಾಂಬಳೆ ಶಾಲೆ: ಬೀಗ ಹಾಕಲು ಗ್ರಾಮಸ್ಥರ ನಿರ್ಧಾರ

ತಾಲೂಕು ಘಟಕಗಳಿಂದ ಸಹಿ ಸಂಗ್ರಹ ಮಾಡಿದ ಒತ್ತಾಯದ ಮನವಿ ಪತ್ರವನ್ನು ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗುವುದು ಎಂದರು.

ತಿಂಗಳಲ್ಲಿ 15,000 ಶಿಕ್ಷಕರ ಆಯ್ಕೆ ಪಟ್ಟಿ: ಸಚಿವ ನಾಗೇಶ್‌

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಸಲೀನಾ, ಗೀತಾ, ಮಂಜುಳಾ, ಮಹದೇವಸ್ವಾಮಿ, ನಾಗಸುಂದರ, ವಿ.ಶಾಂತರಾಜು, ರಾಚಯ್ಯ, ಸ್ವಾಮಿ, ತಾಲೂಕು ಅಧ್ಯಕ್ಷ ಲಾಲಿಂಗಸ್ವಾಮಿ, ಸೋಮಣ್ಣ, ಗಿರೀಶ್‌, ಚಿನ್ನಸ್ವಾಮಿ, ಮಮತಾ, ಮಹೇಶ್‌, ದಿನೇಶ್‌, ರವಿಕುಮಾರ್‌, ಮಹದೇವು, ರಾಜಮಲ್ಲು ಇದ್ದರು.

click me!